Homeಮುಖಪುಟಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ...

ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಬಗ್ಗೆ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ 16 ಮಾದ್ಯಮ ಸಂಸ್ಥೆಗಳಿಂದ ಸಿಜೆಐಗೆ ಪತ್ರ

- Advertisement -
- Advertisement -

ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗಳ ಬಗ್ಗೆ ನ್ಯಾಯಾಂಗದ ಗಮನವನ್ನು ಕೋರಿ ಭಾರತದ ವಿವಿಧ ಭಾಗದಲ್ಲಿನ ಪತ್ರಕರ್ತರ 16 ಸಂಘಟನೆಗಳು, ಮಾಧ್ಯಮ ಸಂಸ್ಥೆಗಳು ಒಟ್ಟಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಪತ್ರವನ್ನು ಬರೆದಿದೆ.

ಆನ್‌ಲೈನ್ ನ್ಯೂಸ್ ಪೋರ್ಟಲ್ ನ್ಯೂಸ್‌ಕ್ಲಿಕ್‌ ಜೊತೆ ಸಂಪರ್ಕ ಹೊಂದಿರುವ 46 ಪತ್ರಕರ್ತರು, ಸಂಪಾದಕರು, ಬರಹಗಾರರ ನಿವಾಸಗಳ ಮೇಲೆ ದೆಹಲಿ ಪೊಲೀಸರ ದಾಳಿ ಬೆನ್ನಲ್ಲೇ ಈ ಪತ್ರವನ್ನು ಬರೆಯಲಾಗಿದೆ. ದೆಹಲಿ ಪೊಲೀಸರು ದಾಳಿ ನಡೆಸಿ ಪತ್ರಕರ್ತರ ಹಲವಾರು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ನ್ಯೂಸ್‌ಕ್ಲಿಕ್‌ ಪೋರ್ಟಲ್‌ನ ನಿರ್ದೇಶಕ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿದ್ದಾರೆ.

ವಿವಿಧ ನಗರಗಳ ಪ್ರೆಸ್ ಕ್ಲಬ್‌ಗಳು ಸೇರಿದಂತೆ ಸಂಸ್ಥೆಗಳು ಪತ್ರದಲ್ಲಿ, ಪತ್ರಕರ್ತರನ್ನು ಕಾನೂನಿನ ಪ್ರಕಾರ  ಪರಿಗಣಿಸಬೇಕು, ಮಾಧ್ಯಮಗಳ ವಿರುದ್ಧ ತನಿಖಾ ಸಂಸ್ಥೆಗಳ ದಮನಕಾರಿ ಬಳಕೆಯ ಹೆಚ್ಚಳ ಕೊನೆಗೊಳಿಸಲು ನ್ಯಾಯಾಂಗವು ಮಧ್ಯಪ್ರವೇಶಿಸಬೇಕೆಂದು ಎಂದು ಸಿಜೆಐಗೆ ಆಗ್ರಹಿಸಿದ್ದಾರೆ.

ಪತ್ರಕ್ಕೆ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್, ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್ಸ್, ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಫೌಂಡೇಶನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್, ಚಂಡೀಗಢ ಪ್ರೆಸ್ ಕ್ಲಬ್, ಪತ್ರಕರ್ತರ ರಾಷ್ಟ್ರೀಯ ಒಕ್ಕೂಟ, ದೆಹಲಿ ಪತ್ರಕರ್ತರ ಒಕ್ಕೂಟ, ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ, ಬೃಹನ್‌ಮುಂಬೈ ಯೂನಿಯನ್ ಆಫ್ ಜರ್ನಲಿಸ್ಟ್ಸ್, ಫ್ರೀ ಸ್ಪೀಚ್ ಕಲೆಕ್ಟಿವ್,  ಮುಂಬೈ ಪ್ರೆಸ್ ಕ್ಲಬ್, ಅರುಣಾಚಲ ಪ್ರದೇಶ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್, ಪ್ರೆಸ್ ಅಸೋಸಿಯೇಷನ್, ಗುವಾಹಟಿ ಪ್ರೆಸ್ ಕ್ಲಬ್, ಇಂಡಿಯನ್ ಜರ್ನಲಿಸ್ಟ್ಸ್ ಯೂನಿಯನ್, ಮತ್ತು ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ ಇಂಡಿಯಾ ಸಹಿ ಮಾಡಿದೆ.

ನೀವು ಹಲವಾರು ಸಂದರ್ಭಗಳಲ್ಲಿ, ದೇಶದ ತನಿಖಾ ಸಂಸ್ಥೆಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗಿದೆ ಮತ್ತು ಪತ್ರಿಕಾ ಮಾಧ್ಯಮದ ವಿರುದ್ಧ ಬಲವನ್ನು ಹೇಗೆ ಬಳಸಲಾಗಿದೆ ಎಂಬುದನ್ನು ನೋಡಿದ್ದೀರಿ. ಸಂಪಾದಕರು ಮತ್ತು ವರದಿಗಾರರ ವಿರುದ್ಧ ದೇಶದ್ರೋಹ ಮತ್ತು ಭಯೋತ್ಪಾದನೆ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಅನಾವಶ್ಯಕ ಎಫ್‌ಐಆರ್‌ಗಳನ್ನು ಹಾಕಿ ಕಿರುಕುಳದ ಸಾಧನವಾಗಿ ಬಳಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಪತ್ರವನ್ನು ನಿಮಗೆ ತಿಳಿಸುವ ಉದ್ದೇಶವು ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಅಲ್ಲ. ಆದರೆ ತನಿಖೆಯ ಹೆಸರಿನಲ್ಲಿ ಪತ್ರಕರ್ತರನ್ನು ಕರೆಸಿ ಅವರ ಸಾಧನಗಳನ್ನು ವಶಪಡಿಸಿಕೊಂಡಾಗ, ಪ್ರಕ್ರಿಯೆಯಲ್ಲಿ ಅಂತರ್ಗತ ದುರುದ್ದೇಶವಿದೆ ಎಂಬುವುದನ್ನುಗಮನಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಮಾಧ್ಯಮದ ಮೇಲಿನ ಬೆದರಿಕೆಯು ಪ್ರಜಾಪ್ರಭುತ್ವದ ರಚನೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಪ್ರತಿಷ್ಟಿತ ಇಂಡೆಕ್ಸ್ ಆಫ್ ಸೆನ್ಸಾರ್ಶಿಪ್ ಪ್ರಶಸ್ತಿಗೆ ಪತ್ರಕರ್ತ ಮೊಹಮ್ಮದ್ ಝುಬೈರ್‌ ನಾಮನಿರ್ದೇಶನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...