Homeಕರ್ನಾಟಕಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ - ಕೆ.ದೊರೈರಾಜ್‌

ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

- Advertisement -
- Advertisement -

ಹಿರಿಯ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಜನಪರ ಸಂಘಟನೆಗಳ ಒಕ್ಕೂಟ ಕೂಡಲೇ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿವೆ.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜನಪರ ಸಂಘಟನೆಗಳ ಒಕ್ಕೂಟ, ಪಿಯುಸಿಎಲ್, ಜನಸಂಗ್ರಾಮ ಪರಿಷತ್, ಸ್ವರಾಜ್ ಇಂಡಿಯಾ, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರ ದೊಡ್ಡಿಪಾಳ್ಯ ನರಸಿಂಹಮೂರ್ತಿ ದೇಶದ್ರೋಹಿ, ತಲೆಮರೆಸಿಕೊಂಡ ವ್ಯಕ್ತಿ ಎಂದು ಬಿಂಬಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

 

ಪಿಯುಸಿಎಲ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ದೊರೈರಾಜ್ ಮಾತನಾಡಿ ದೊಡ್ಡಪಾಳ್ಯ ನರಸಿಂಹಮೂರ್ತಿ ಪತ್ರಕರ್ತರಾಗಿ ಹೋರಾಟಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂಥವರ ಮೇಲೆ ಸುಳ್ಳು ಆರೋಪ ಹೊರಿಸ ಬಂದಿಸಿರುವುದು ಖಂಡನೀಯ. ಜನಪರ ಕೆಲಸ ಮಾಡುವವರ ಮೇಲೆ ಸುಳ್ಳು ಆರೋಪ ಮಾಡಿ ಬಂಧಿಸುವುದು ಆತಂಕಕಾರಿ ಮತ್ತು ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ.

ಸರ್ಕಾರ ಜಾರಿಗೆ ತರುವ ಜನವಿರೋಧಿ ನೀತಿಗಳನ್ನು ವಿರೋಧಿಸುವ, ಅದರ ವಿರುದ್ಧ ಹೋರಾಟ ರೂಪಿಸುವವರ ದನಿಗಳನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಇಂಥ  ಸರ್ವಾಧಿಕಾರಿ ಧೋರಣೆ ಬಿಡಬೇಕು. ಸಾರ್ವತ್ರಿಕವಾಗಿ ಸುಳ್ಳು ಆರೋಪ ಮತ್ತು ದೇಶದ್ರೋಹಿ ಪಟ್ಟ ಕಟ್ಟುವ ಕೆಲಸ ವ್ಯಾಪಕವಾಗಿ ನಡೆಯುತ್ತಿದ್ದ ಪ್ರಭುತ್ವ ಭಯೋತ್ಪಾದನೆ  ಮಾಡುತ್ತಿದೆ ಎಂದು ಆರೋಪಿಸಿದರು

ಸ್ವರಾಜ್ ಇಂಡಿಯಾದ ಮುಖಂಡ ಸಿ.ಯತಿರಾಜು ಮಾತನಾಡಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಂಧಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯ ಸ್ವಾತಂತ್ರ್ಯ ಮತ್ತು ವಿರೋಧಿ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಬಗ್ಗು ಬಡಿಯುವ ಕೆಲಸ ಮಾಡುತ್ತಿದೆ. ಇದನ್ನು ಜನಪರ ಸಂಘಟನೆಗಳು ಬಲವಾಗಿ ಖಂಡಿಸುತ್ತವೆ ಎಂದರು.

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಹಾರ್ ಮಾತನಾಡಿ ಜನಪರ ಹೋರಾಟಗಾರರನ್ನು ಬಂಧಿಸುವುದರಿಂದ ಸರ್ಕಾರದ ಜನ ವಿರೋಧಿ ನೀತಿಗಳನ್ನು ನೋಡಿಕೊಂಡು ಸುಮ್ಮನೆ ಕೂರಬೇಕಾಗುತ್ತದೆ. ಅವರ ಬೆಂಗಳೂರಿನಲ್ಲಿ 20-25 ವರ್ಷಗಳಿಂದ ಸಾರ್ವಜನಿಕವಾಗಿ ಕೆಲಸ ಮಾಡುತ್ತಿದ್ದಾರೆ. ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು. ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದರು. ಆದರೆ ಈಗ ಬಂಧಿಸಿರುವುದು ಖಂಡನೀಯ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಜನಪರ ಮತ್ತು ಪ್ರಗತಿಪರ ದನಿಗಳನ್ನು ಅಡಗಿಸುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ. 1994ರಲ್ಲಿ ವಿನೋದ್ ಎಂಬ ವ್ಯಕ್ತಿ ಇದ್ದರು. ಅವರೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಎಂದು ಸುಳ್ಳು ಆರೋಪಿಸಿ ಬಂಧಿಸಿರುವುದು ಖಂಡನೀಯ. ಸ್ವರಾಜ್ ಇಂಡಿಯಾದ ಮುಖಂಡರಾಗಿ ಗೌರಿ ಲಂಕೇಶ್ ಹತ್ಯೆಯ ನಂತರ ನ್ಯಾಯಪಥ ಪತ್ರಿಕೆ ನಡೆಸಿಕೊಂಡು ಬರುತ್ತಿದ್ದರು. ಅವರನ್ನು ಬಂಧಿಸಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿದೆ ಎಂದು ದೂರಿದರು.

ಮಾಧ್ಯಮಗೋಷ್ಠಿಯಲ್ಲಿ ಸ್ವರಾಜ್ ಇಂಡಿಯಾದ ನಾದೂರು ಕೆಂಚಪ್ಪ, ಹಂದ್ರಾಳ್ ನಾಗಭೂಷಣ, ಮೋಹನ್ ಉಪಸ್ಥಿತರಿದ್ದರು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ನರಸಿಂಹ ಮೂರ್ತಿಯವರ ಬಿಡುಗಡೆಗಾಗಿ ಇಂತಹ ಸಭೆ, ಸಮಾವೇಶಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು.

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು...

0
ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ. ಪೊಲೀಸರ...