Homeಕರ್ನಾಟಕSC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ...

SC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ ಪರಮೇಶ್ವರ್

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇಕಡ 50ರ ಮಿತಿಗಿಂತ ಹೆಚ್ಚಿಸುವ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಅ.12) ರದ್ದುಗೊಳಿಸಿದೆ. ಈ ಮೀಸಲಾತಿ ಹೆಚ್ಚಳವು ‘ಸಾಂವಿಧಾನಿಕವಾಗಿ ಅಸಮ್ಮತ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸೀಟುಗಳ ಮೀಸಲಾತಿ ಹಾಗೂ ರಾಜ್ಯದ ಅಧೀನದ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳ ಮೀಸಲಾತಿ) ಕಾಯ್ದೆ, 2022ರ ಸೆಕ್ಷನ್ 3 ಮತ್ತು 4 ಅನ್ನು ಸಂವಿಧಾನಬಾಹಿರ ಎಂದು ಘೋಷಿಸಿ, ಈ ಎರಡೂ ನಿಬಂಧನೆಗಳನ್ನು ರದ್ದುಗೊಳಿಸಿದೆ.

ಹಿಂದಿನ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವೆಂಬರ್ 1, 2022ರಿಂದ ಪೂರ್ವಾನ್ವಯವಾಗಿ ಜಾರಿಗೆ ಬಂದಿದ್ದ ಈ ಕಾಯ್ದೆಯು, ಪರಿಶಿಷ್ಟ ಜಾತಿಗಳ (ಎಸ್‌ಸಿ) ಮೀಸಲಾತಿಯನ್ನು ಶೇಕಡಾ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇಕಡಾ 3 ರಿಂದ 7 ಕ್ಕೆ ಹೆಚ್ಚಿಸಿತ್ತು. ಇತರ ಹಿಂದುಳಿದ ವರ್ಗಗಳ (ಒಬಿಸಿ) ಶೇಕಡಾ 32 ರಷ್ಟು ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದ ಕಾರಣ, ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವು ಶೇಕಡಾ 50ರಿಂದ 56ಕ್ಕೆ ಏರಿಕೆ ಕಂಡಿತ್ತು. ಇದು ಸುಪ್ರೀಂ ಕೋರ್ಟ್ 1992ರ ‘ಇಂದಿರಾ ಸಾಹ್ನಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ವಿಧಿಸಿದ್ದ ಹಾಗೂ ತದನಂತರದ ಹಲವಾರು ತೀರ್ಪುಗಳಲ್ಲಿ ಪುನರುಚ್ಚರಿಸಲ್ಪಟ್ಟಿದ್ದ ನ್ಯಾಯಾಂಗ ಸ್ಥಾಪಿತ ಶೇಕಡಾ 50ರ ಗರಿಷ್ಠ ಮಿತಿಯನ್ನು ಉಲ್ಲಂಘಿಸಿತ್ತು.

ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಮಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಹಾಗೂ ಸಿವಿಲ್ ಇಂಜಿನಿಯರಿಂಗ್ ಪದವೀಧರರಾದ ಸಾಗರ್ ಹೆಚ್.ಆರ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ ಒಟ್ಟು ಅರ್ಜಿಗಳ ಬ್ಯಾಚ್ ಮೇಲಿನ ವಿಚಾರಣೆಯನ್ನು ನಡೆಸಿ ಪೀಠವು ಈ ತೀರ್ಪನ್ನು ನೀಡಿದೆ. ಇವರು ಹೆಚ್ಚಿಸಲಾದ ಮೀಸಲಾತಿ ಕೋಟಾದ ಆಧಾರದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯಲ್ಲಿ ನೀಡಲಾಗಿದ್ದ ಮೀಸಲಾತಿಯನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಮೀಸಲಾತಿಯ ಪ್ರಮಾಣವು ಶೇಕಡಾ 50ರ ಮಿತಿಯನ್ನು ಮೀರಬಹುದೇ ಎಂಬ ಪ್ರಶ್ನೆಯೇ ಈ ಪೀಠದ ತೀರ್ಪಿನ ಮುಖ್ಯ ಕೇಂದ್ರಬಿಂದುವಾಗಿತ್ತು. ಮೀಸಲಾತಿಯ ಗರಿಷ್ಠ ಮಿತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ವ್ಯಾಪಕವಾಗಿ ಉಲ್ಲೇಖಿಸಿ 170 ಪುಟಗಳ ಸುದೀರ್ಘ ತೀರ್ಪು ನೀಡಿರುವ ಪೀಠವು, ಶೇಕಡಾ 50ರ ಮಿತಿಯು ಕೇವಲ ಒಂದು ವಿವೇಚನಾ ನಿಯಮವಲ್ಲ, ಬದಲಿಗೆ ಅದು ಸಮಾನ ಅವಕಾಶ ಹಾಗೂ ಸಕಾರಾತ್ಮಕ ಕ್ರಮಗಳ (ಮೀಸಲಾತಿ) ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಒಂದು ಕಡ್ಡಾಯ ಸಾಂವಿಧಾನಿಕ ತತ್ವವಾಗಿದೆ ಎಂದು ತೀರ್ಮಾನಿಸಿದೆ.

“ಹಿಂದುಳಿದ ವರ್ಗಗಳ ಜನಸಂಖ್ಯೆಯ ಬಲ ಎಷ್ಟೇ ಇದ್ದಾಗ್ಯೂ, ರಾಜ್ಯ ಸರ್ಕಾರವು ಮೀಸಲಾತಿಯನ್ನು ಒದಗಿಸುವ ತನ್ನ ಅಧಿಕಾರವನ್ನು ಶೇಕಡಾ 50ರ ನಿಗದಿತ ಮಿತಿಯ ಚೌಕಟ್ಟಿನೊಳಗೇ ಬಳಸಬೇಕೆಂದು ಅರ್ಥೈಸಿಕೊಳ್ಳಬೇಕಾಗುತ್ತದೆ” ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (EWS) ಶೇಕಡಾ 10 ರಷ್ಟು ಮೀಸಲಾತಿಯನ್ನು ತಂದ 103ನೇ ಸಾಂವಿಧಾನಿಕ ತಿದ್ದುಪಡಿಯು ಶೇಕಡಾ 50ರ ನಿಯಮವನ್ನು ರದ್ದುಗೊಳಿಸಿದೆ ಎಂಬ ರಾಜ್ಯ ಸರ್ಕಾರದ ವಾದವನ್ನು ಪೀಠವು ತಿರಸ್ಕರಿಸಿದೆ. ಈ EWS ಕೋಟಾವನ್ನು ಸಾಮಾನ್ಯ ಅರ್ಹತಾ ಪಟ್ಟಿಯಿಂದಲೇ (ಜನರಲ್ ಮೆರಿಟ್ ಪೂಲ್) ಕಲ್ಪಿಸಲಾಗಿದೆ ಮತ್ತು ಇದು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ನಿಗದಿತ ಗರಿಷ್ಠ ಮಿತಿಗಿಂತ ಹೆಚ್ಚು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ.

ಹೈಕೋರ್ಟ್ ತೀರ್ಪು ಕಳವಳಕಾರಿ

ಹೈಕೋರ್ಟ್ ತೀರ್ಪು ಕಳವಳಕಾರಿ. ಇದು ಮುಂಬರುವ ದಿನಗಳಲ್ಲಿ ರಾಜ್ಯದ ಸಾಮಾಜಿಕ ನ್ಯಾಯ, ಶಿಕ್ಷಣದ ಅವಕಾಶಗಳು ಮತ್ತು ಸರ್ಕಾರಿ ಉದ್ಯೋಗಗಳ ಮೇಲೆ ಪರಿಣಾಮ ಬೀರುವ ಸಂಭವ ಹೆಚ್ಚಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ನಾವು ನ್ಯಾಯಾಂಗದ ಬಗ್ಗೆ ಗೌರವ ಹೊಂದಿದ್ದೇವೆ. ನ್ಯಾಯಾಂಗವು ಕಾರ್ಯನಿರ್ವಹಿಸುವ ಸಾಂವಿಧಾನಿಕ ವ್ಯವಸ್ಥೆಯ ಬಗ್ಗೆಯೂ ನಮಗೆ ಸಂಪೂರ್ಣ ಗೌರವವಿದೆ. ಆದರೆ, ಈ ತೀರ್ಪು ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಹಾಗೂ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರಂತರ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಪರಮೇಶ್ವರ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರವು ಮೀಸಲಾತಿ ಹೆಚ್ಚಳದ ಕಾಯ್ದೆಯನ್ನು ಜಾರಿಗೊಳಿಸುವ ಮುನ್ನ ಸೂಕ್ತ ಸಾಂವಿಧಾನಿಕ ತಳಹದಿಯನ್ನು ಹಾಕದೆ 2023ರ ವಿಧಾನಸಭಾ ಚುನಾವಣೆಗೆ ಮುನ್ನ ಏಕಾಏಕಿ ಜಾರಿಗೊಳಿಸಿದ್ದೇಕೆ? ಎಂಬ ಪ್ರಶ್ನೆ ಉದ್ಭವಿಸಿದೆ ಎಂದಿದ್ದಾರೆ.

2022ರ ಅಕ್ಟೋಬರ್‌ನಲ್ಲಿಯೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದಿಂದ ಕರ್ನಾಟಕದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ. 56ಕ್ಕೆ ಏರಿಕೆಯಾಗಲಿದ್ದು, ಅದು ಆಗಿನ ಶೇ. 50ರ ಮಿತಿಯನ್ನು ಮೀರುತ್ತದೆ ಎಂಬ ಅರಿವು ಅಂದಿನ ಬಿಜೆಪಿ ಸರ್ಕಾರಕ್ಕಿತ್ತು. ಈ ಹೆಚ್ಚಳಕ್ಕೆ ಸಾಂವಿಧಾನಿಕ ರಕ್ಷಣೆ ಒದಗಿಸಲು ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವ ಅಗತ್ಯವಿದೆ ಎಂಬುದನ್ನು ಬಿಜೆಪಿ ನಾಯಕರು ಸಾರ್ವಜನಿಕವಾಗಿಯೇ ಒಪ್ಪಿಕೊಂಡಿದ್ದರು. ಆದರೆ, ಅಗತ್ಯವಾದ ಸಾಂವಿಧಾನಿಕ ಚೌಕಟ್ಟನ್ನು ಒದಗಿಸದೆ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಮೀಸಲಾತಿ ಹೆಚ್ಚಳದ ಕಾಯ್ದೆಯನ್ನು ಜಾರಿಗೊಳಿಸಲಾಯಿತು ಎಂದು ಹೇಳಿದ್ದಾರೆ.

ಚುನಾವಣೆಗೆ ಮುನ್ನ ಮೀಸಲಾತಿ ಹೆಚ್ಚಳವನ್ನು ಘೋಷಿಸುವುದಕ್ಕೆ ಬಿಜೆಪಿ ಸರ್ಕಾರ ನೀಡಿದ್ದ ಆದ್ಯತೆ ಸಾಂವಿಧಾನಿಕ ತಳಹದಿ ರೂಪಿಸುವಲ್ಲಿ ಏಕೆ ಇರಲಿಲ್ಲ ಎಂಬ ಪ್ರಶ್ನೆ ಸಹಜವಾಗಿಯೇ ಮೂಡುತ್ತದೆ. ಲಕ್ಷಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಆಶಯಗಳನ್ನು ಚುನಾವಣಾ ರಾಜಕೀಯದ ಅನುಕೂಲಕ್ಕೆ ತಕ್ಕಂತೆ ಪರಿಗಣಿಸಲು ಸಾಧ್ಯವಿಲ್ಲ. ಮೀಸಲಾತಿ ಎಂಬುದು ಯಾವುದೇ ಸರ್ಕಾರ ನೀಡುವ ರಾಜಕೀಯ ಕೊಡುಗೆಯಲ್ಲ. ತಲೆಮಾರುಗಳಿಂದ ಈ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಅವಕಾಶಗಳ ನಿರಾಕರಣೆ ಮತ್ತು ಸಾಮಾಜಿಕ ಬಹಿಷ್ಕಾರವನ್ನು ನಿವಾರಿಸಿ, ಸಮಾನ ಅವಕಾಶಗಳನ್ನು ಕಲ್ಪಿಸುವ ಸಾಂವಿಧಾನಿಕ ನ್ಯಾಯದ ಸಾಧನವಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.



























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ನೇತೃತ್ವದ ಟಿವಿಕೆ ಸೇರಿದ ಎಐಎಡಿಎಂಕೆ ಶಾಸಕರ ರಾಜೀನಾಮೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚುನಾವಣೆಯ ಬೆನ್ನಲ್ಲೇ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಪಕ್ಷಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಸೇರಿದ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ಧ ತಮಿಳುನಾಡು...

ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ರಕ್ಷಾ ದಳದ ನಾಲ್ವರು ಕಾರ್ಯಕರ್ತರು ಬಿಡುಗಡೆಯಾದ ಬಳಿಕ, ಅವರಲ್ಲಿ ಒಬ್ಬರಿಗೆ ಹೂಮಾಲೆ ಹಾಕಿ, ಹೂವುಗಳನ್ನು ಸುರಿದು...

SC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ...

ಬೆಂಗಳೂರಿನಲ್ಲಿ SIR ವಿರೋಧಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: “ಶಾಂತಿಯುತ ಹಕ್ಕು ರಕ್ಷಿಸಿ, ಪೊಲೀಸರ ನಡವಳಿಕೆ ಮರುಪರಿಶೀಲಿಸಲಾಗುವುದು” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಮೆರವಣಿಗೆಯ...

ದೆಹಲಿ ಪ್ರತಿಭಟನೆ: ಇಂಡಿಯಾ ಬ್ಲಾಕ್ ಸಂಸದರು, ನಾಗರಿಕ ಸಮಾಜ ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ರಾಹುಲ್ ಗಾಂಧಿ ಚಹಾ ಕೂಟ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಚುನಾವಣಾ ಅಕ್ರಮಗಳು ಮತ್ತು ‘ಮತ ಚೋರಿ’ ಆರೋಪಗಳ ವಿರುದ್ಧ ದೇಶಾದ್ಯಂತ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಪ್ರತಿಭಟನೆಯ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೌರ್ಜನ್ಯ : ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆಯರ ಮೇಲೆ ನಡೆದ ಹಲ್ಲೆಯ ಕುರಿತು ವಿವರಣೆ ನೀಡಲು ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ವೈಯಕ್ತಿಕವಾಗಿ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಅ.13)...

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ : ರಾಹುಲ್ ಗಾಂಧಿ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು "ಚೋರೋ ಕೆ ಸರ್ದಾರ್" (ಕಳ್ಳರ ಸರದಾರ) ಮತ್ತು "ಕಮಾಂಡರ್-ಇನ್-ಚೀಫ್" (ಕಳ್ಳರ ಸೇನಾಧಿಪತಿ) ಎಂದು ನಿಂದಿಸಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಪಾರ್ಲಿಮೆಂಟರಿ ಬೋರ್ಡ್ ಸದಸ್ಯೆ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಪ್ರಸ್ತುತ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ...

DELHI PROTEST : ಜಂತರ್ ಮಂತರ್ ಪ್ರವೇಶಿಸಿದ ಸಿಜೆಪಿ ನಾಯಕರು ಪೊಲೀಸ್ ವಶಕ್ಕೆ

ನಿರ್ಬಂಧಗಳ ನಡುವೆ ಜಂತರ್ ಮಂತರ್ ಪ್ರವೇಶಿಸಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್, ಅಶುತೋಷ್ ರಾಂಕಾ, ಅಜಿಂಕ್ಯ ಶಿಂದೆ ಮತ್ತು ಇತರರನ್ನು ದೆಹಲಿ ಪೊಲೀಸರು ಮಂಗಳವಾರ (ಅ.13) ವಶಕ್ಕೆ ಪಡೆದಿದ್ದಾರೆ....

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ: ಚುನಾವಣಾ ಆಯೋಗಕ್ಕೆ ಸವಾಲು

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್...