Homeಕರ್ನಾಟಕ10ನೇ ದಿನವೂ ಬೆಲೆ ಏರಿಕೆ: ಉತ್ತರ ಕನ್ನಡ ಜಿಲ್ಲೆಯಲ್ಲಿ 109.51 ರೂ. ಗೆ ತಲುಪಿದ ಪೆಟ್ರೋಲ್‌...

10ನೇ ದಿನವೂ ಬೆಲೆ ಏರಿಕೆ: ಉತ್ತರ ಕನ್ನಡ ಜಿಲ್ಲೆಯಲ್ಲಿ 109.51 ರೂ. ಗೆ ತಲುಪಿದ ಪೆಟ್ರೋಲ್‌ ದರ!

- Advertisement -
- Advertisement -

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗುರುವಾರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ 10 ದಿನಗಳಿಂದ ನಿರಂತರವಾಗಿ ದರಗಳು ಏರುತ್ತಿವೆ. ಐದು ರಾಜ್ಯಗಳಲ್ಲಿ ಚುನಾವಣೆ ಮುಗಿದ ಬಳಿಕ ಪ್ರಾರಂಭವಾದ ಬೆಲೆ ಏರಿಕೆಯಿಂದಾಗಿ ಒಟ್ಟು 6.40 ರೂ. ಇದುವರೆಗೂ ಏರಿಕೆಯಾಗಿದೆ.

ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್‌ ದರವು ಈ ಹಿಂದೆ 101.01 ರೂ. ಇದ್ದು, ಬೆಲೆ ಏರಿಕೆಯಿಂದಾಗಿ ಪೆಟ್ರೋಲ್ ಬೆಲೆ 101.81 ತಲುಪಿದೆ. ನಿನ್ನೆ ಲೀಟರ್‌ಗೆ 92.27 ರೂ. ಇದ್ದ ಡೀಸೆಲ್ ದರ 93.0 ರೂ. ಗೆ ಏರಿಕೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಈ ಬೆಲೆ ಏರಿಕೆಯು ರಾಜ್ಯದಲ್ಲೂ ಪರಿಣಾಮ ಬೀರಿದ್ದು, ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 84 ಪೈಸೆ ಮತ್ತು 78 ಪೈಸೆ ಹೆಚ್ಚಳವಾಗಿದೆ. ಗುರುವಾರದಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.30 ರೂ. ಗೆ ತಲುಪಿದ್ದು, ಡೀಸೆಲ್ ಬೆಲೆ 91.27 ರೂ.ಗೆ ತಲುಪಿದೆ.

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ..

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 110 ರೂ.ಗೆ ತಲುಪುತ್ತಿದೆ. ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ 109.24 ತಲುಪಿದ್ದು, ದಾವಣಗೆರೆಯಲ್ಲಿ 109.30 ಆಗಿದ್ದು, ಶಿವಮೊಗ್ಗದಲ್ಲಿ 109.11 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 109.51 ರೂ. ಗೆ ಏರಿಕೆಯಾಗಿದೆ.

ಐದು ರಾಜ್ಯಗಳಲ್ಲಿ ಚುನಾವಣೆ ಇದ್ದುದರಿಂದ ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ ನಾಲ್ಕು ತಿಂಗಳ ಕಾಲ ಇಂಧನ ದರಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏರಿಸಿರಲಿಲ್ಲ. ಇದರ ಬಂತರ ದರ ಪರಿಷ್ಕರಣೆ ಮಾರ್ಚ್ 22 ರ ನಂತರ ಮತ್ತೆ ಪ್ರಾರಂಭವಾಗಿತ್ತು.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾಗಾರಗಳು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ರಿಂದ ಜಾರಿಗೆ ತರಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: Explainer: ಹಲಾಲ್ ಹಾಗೆಂದರೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...