Homeಕರ್ನಾಟಕಪ್ರಿಡ್ಜ್‌ನಲ್ಲಿ 30 ಭಾಗಗಳಾಗಿ ಯುವತಿಯ ಮೃತದೇಹ: ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು!

ಪ್ರಿಡ್ಜ್‌ನಲ್ಲಿ 30 ಭಾಗಗಳಾಗಿ ಯುವತಿಯ ಮೃತದೇಹ: ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು!

- Advertisement -
- Advertisement -

ಫ್ರಿಡ್ಜ್‌ನಲ್ಲಿ ಯುವತಿಯ ಶವದ ತುಂಡುಗಳು ಪತ್ತೆಯಾದ ಬೆಂಗಳೂರಿನ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೋಮವಾರ ತಿಳಿಸಿದ್ದಾರೆ. ಪ್ರಿಡ್ಜ್‌ನಲ್ಲಿ ಯುವತಿಯ ಮೃತದೇಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶನಿವಾರ ಬೆಂಗಳೂರಿನ ಮನೆಯೊಂದರ ಫ್ರಿಡ್ಜ್‌ನಲ್ಲಿ ಯುವತಿಯ ಶವದ ಮೂವತ್ತರಷ್ಟು ತುಂಡುಗಳು ಪತ್ತೆಯಾಗಿತ್ತು. ಸಿಂಗಲ್ ಬೆಡ್ ರೂಂನ ಮನೆಯಲ್ಲಿ ಯುವತಿ ಮಹಾಲಕ್ಷ್ಮಿ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

ಇದನ್ನೂಓದಿ: ‘ನನ್ನ ಪರಿಸ್ಥಿತಿ ರಾಮನ ಅನುಪಸ್ಥಿತಿಯ ಭರತನಂತಿದೆ..’ ಎಂದ ದೆಹಲಿ ನೂತನ ಮುಖ್ಯಮಂತ್ರಿ ಅತಿಶಿ

“ಎಲ್ಲ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಯನ್ನು ಗುರುತಿಸಲಾಗಿದೆ ಮತ್ತು ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಆರೋಪಿ ಹೊರಗಿನವನಾಗಿದ್ದು, ನಾವು ಸದ್ಯಕ್ಕೆ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ. ಹೆಚ್ಚು ಮಾಹಿತಿ ನೀಡಿದರೆ ಅದು ಆರೋಪಿಗೆ ಸಹಕಾರಿಯಾಗಲಿದೆ” ಎಂದು” ಎಂದು ನಗರ ಪೊಲೀಸ್ ಮುಖ್ಯಸ್ಥರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗೃಹ ಸಚಿವ ಜಿ. ಪರಮೇಶ್ವರ ಅವರು ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಸಾಕಷ್ಟು ಮಾಹಿತಿಯನ್ನು ಸಂಗ್ರಹಿಸಿದ್ದಾರೆ ಎಂದು ಇಂದು ಮುಂಜಾನೆ ಹೇಳಿದ್ದಾರೆ. “ಪೊಲೀಸರು ಸಾಕಷ್ಟು ಮಾಹಿತಿ, ಸಾಕಷ್ಟು ಸುಳಿವುಗಳನ್ನು ಸಂಗ್ರಹಿಸಿದ್ದಾರೆ” ಎಂದು ಹೇಳಿದ್ದಾರೆ ನಾವು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸದ ಹೊರತು, ಯಾರು ಎಂದು ಹೇಳಲು ಸಾಧ್ಯವಿಲ್ಲ. ಅವರು ಪಶ್ಚಿಮ ಬಂಗಾಳದವರು ಎಂದು ಅವರು ಹೇಳುತ್ತಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಹಿಳೆಯರ ಸುರಕ್ಷತೆಗಾಗಿ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..’; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

ಹಿರಿಯ ಪೊಲೀಸ್ ಅಧಿಕಾರಿ ಎನ್.ಸತೀಶ್ ಕುಮಾರ್ ಮಾತನಾಡಿ,”ಕೊಲೆಯಾದ ಮಹಾಲಕ್ಷ್ಮಿ ಮೂಲತಃ ಬೇರೆ ರಾಜ್ಯದವರಾದರೂ ಕರ್ನಾಟಕದಲ್ಲಿ ನೆಲೆಸಿದ್ದರು. ಅವರು ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತಿ ಬೇರೆ ನಗರದಲ್ಲಿ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಪೊಲೀಸರು ಯುವತಿಯ ದೇಹದ ತುಂಡುಗಳನ್ನು ಪತ್ತೆ ಮಾಡಿದಾಗ, ಅವು ಕೊಳೆತು ಹುಳು ಆಗಿದ್ದವು ಎಂದು ವರದಿಯಾಗಿದೆ. ದೇಹದ ಭಾಗಗಳು ಪತ್ತೆಯಾಗುವ ಕನಿಷ್ಠ ಎರಡು ವಾರಗಳ ಮೊದಲು ಅವರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ಬಿಜೆಪಿಯು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ.ಪ್ರಿಡ್ಜ್‌ನಲ್ಲಿ ಯುವತಿಯ ಮೃತದೇಹ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...