Homeಮುಖಪುಟಗಣೇಶ ವಿಗ್ರಹವನ್ನು ತಾನೇ ಒಡೆದು ಇಬ್ಬರು ಮುಸ್ಲಿಂ ವ್ಯಕ್ತಿಗಳ ವಿರುದ್ದ ದೂರು ದಾಖಲಿಸಿದ ಅರ್ಚಕ :...

ಗಣೇಶ ವಿಗ್ರಹವನ್ನು ತಾನೇ ಒಡೆದು ಇಬ್ಬರು ಮುಸ್ಲಿಂ ವ್ಯಕ್ತಿಗಳ ವಿರುದ್ದ ದೂರು ದಾಖಲಿಸಿದ ಅರ್ಚಕ : ವರದಿ

- Advertisement -
- Advertisement -

ಗಣಪತಿ ವಿಗ್ರಹವನ್ನು ತಾನೇ ಭಗ್ನಗೊಳಿಸಿ, ನಂತರ ಇಬ್ಬರು ಮುಸ್ಲಿಂ ವ್ಯಕ್ತಿಗಳ ಮೇಲೆ ಆರೋಪ ಹೊರಿಸಿದ ಅರ್ಚಕನೊಬ್ಬನ ವಿರುದ್ಧ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಕೃಚ್‌ ರಾಮ್‌ ಎಂಬ ಹೆಸರಿನ ಅರ್ಚಕ ಜುಲೈ 16ರಂದು ಪೂರ್ವ ಯುಪಿ ಜಿಲ್ಲೆಯ ಕಥೇಲಾ ಸಮಯಮತ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮನ್ನನ್‌ ಮತ್ತು ಸೋನು ಎಂಬ ಇಬ್ಬರು ಮುಸ್ಲಿಂ ವ್ಯಕ್ತಿಗಳು ತೌಲಿಹವಾಹ್‌ ಗ್ರಾಮದಲ್ಲಿರುವ ದೇವಸ್ಥಾನದ ಗಣೇಶ ವಿಗ್ರಹವನ್ನು ಮುರಿದಿದ್ದಾರೆ ಎಂದು ಆರೋಪಿಸಿದ್ದ.

“ಆರೋಪಿಗಳು ನನಗೆ ಪೂಜೆ ಮಾಡಲು ಬಿಡುತ್ತಿಲ್ಲ, ಬೆದರಿಕೆ ಹಾಕಿದ್ದಾರೆ. ನನ್ನ ಪತ್ನಿ ಮಧ್ಯಪ್ರವೇಶಿಸಿದಾಗ ಆಕೆಗೂ ಥಳಿಸಿದ್ದಾರೆ” ಎಂದೂ ಅರ್ಚಕ ಹೇಳಿದ್ದ.

ಮುಸ್ಲಿಂ ವ್ಯಕ್ತಿಗಳ ವಿರುದ್ದ ಆರೋಪ ಕೇಳಿ ಬಂದ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು, ಇಬ್ಬರ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು. ಒಂದು ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಸ್ವಯಂಪ್ರೇರಿತವಾಗಿ ದುಷ್ಕೃತ್ಯವೆಸಗಿರುವುದು ಮತ್ತು ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ ಆರೋಪಗಳನ್ನು ಅವರ ಮೇಲೆ ಹೊರಿಸಿದ್ದರು.

ಘಟನೆ ನಡೆದಿದೆ ಎನ್ನಲಾದ ತೌಲಿಹವಾಹ್‌ ಗ್ರಾಮ ಬರುವ ಶೋಹರತ್‌ಗಢದ ಸರ್ಕಲ್ ಇನ್‌ಸ್ಪೆಕ್ಟರ್, ಉಪ ಪೊಲೀಸ್ ವರಿಷ್ಠಾಧಿಕಾರಿ ದರ್ವೇಶ್ ಕುಮಾರ್ ‘ಪ್ರಕರಣದ ಗಂಭೀರತೆ’ಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು.

ಈ ಕುರಿತು ಹೆಚ್ಚಿನ ತನಿಖೆಗಾಗಿ ಸ್ಥಳೀಯ ಪೊಲೀಸ್, ವೃತ್ತ ಮತ್ತು ಸ್ಥಳೀಯ ಉಪವಿಭಾಗಾಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಈ ವೇಳೆ ಅವರಿಗೆ ಗಣೇಶ ಮೂರ್ತಿಯನ್ನು ಒಡೆದಿರುವುದು ಮುಸ್ಲಿಂ ವ್ಯಕ್ತಿಗಳಲ್ಲ, ಬದಲಾಗಿ ಪೂಜಾರಿಯೇ ಎಂಬುವುದು ಗೊತ್ತಾಗಿದೆ. ಕೃತ್ಯಕ್ಕೆ ಸಾಕ್ಷಿಯಾಗಿದ್ದ ಕೆಲವು ಮಕ್ಕಳಿಂದ ಮಾಹಿತಿ ಪಡೆದ ಪೊಲೀಸರು, ನಂತರ ಅರ್ಚಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ವಿಗ್ರಹವನ್ನು ಭಗ್ನಗೊಳಿಸುವಾಗ 8-10 ವರ್ಷದ ಮೂರ್ನಾಲ್ಕು ಮಕ್ಕಳು ಸ್ಥಳದಲ್ಲಿ ಆಟವಾಡುತ್ತಿದ್ದರು ಎಂಬುವುದು ತನಿಖೆಯ ವೇಳೆ ಪೊಲೀಸರಿಗೆ ಗೊತ್ತಾಗಿದೆ. ಮಕ್ಕಳನ್ನು ವಿಚಾರಿಸಿದಾಗ ಅರ್ಚಕನೇ ವಿಗ್ರಹ ಒಡೆದಿರುವ ವಿಚಾರ ತಿಳಿಸಿದ್ದಾರೆ.

“ಅರ್ಚಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಆತನ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ದರ್ವೇಶ್ ಕುಮಾರ್ ತಿಳಿಸಿದ್ದಾರೆ ಎಂದು ವೈರ್ ವರದಿ ಹೇಳಿದೆ.

ಇದನ್ನೂ ಓದಿ :

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...