Homeಕರ್ನಾಟಕಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

- Advertisement -
- Advertisement -

ಪ್ರಾರ್ಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಶಾಲಾ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದರು. ಇಂತಹ ವಾಸ್ತವ್ಯದಿಂದ ಯಾರಿಗೆ ಲಾಭವಾಯಿತೋ, ಇಲ್ಲವೋ ಭರ್ಜರಿ ಪ್ರಚಾರವಂತು ಸಿಕ್ಕಿತು. ಸಚಿವರು ಶಾಲೆಗಳು ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳ ಪರಿಸ್ಥಿತಿ ತಿಳಿದುಕೊಂಡರೆ? ಸ್ಪಷ್ಟವಾಗಿ ಇಲ್ಲವೆಂದೇ ಹೇಳಬೇಕು. ಹೇಗೆಂದು ನೋಡೋಣ ಬನ್ನಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕೆಲವು ದಿನಗಳು ಕಳೆದ ನಂತರ ದಿಢೀರ್ ತುಮಕೂರು ಜಿಲ್ಲೆಗೆ ಭೇಟಿ ಕೊಟ್ಟರು. ಅದರಲ್ಲಿ ಒಂದು ಪಾವಗಡ ತಾಲೂಕು ಅಚ್ಚಮ್ಮನಹಳ್ಳಿ ಶಾಲಾ ವಾಸ್ತವ್ಯ. ಈ ಸಂದರ್ಭದಲ್ಲಿ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಸಚಿವ ಸುರೇಶ್ ಕುಮಾರ್ ತಡಕಾಡಿದರು. ವಿಜ್ಞಾನ, ಗಣಿತ, ಇಂಗ್ಲೀಷ್ ಶಿಕ್ಷಕರೇ ಇಲ್ಲ, ಪಾಠಗಳು ಹಾಗೆ ಉಳಿಯುತ್ತಿವೆ. ಕಂಪ್ಯೂಟರ್ ಕಲಿಕೆ ಇದೆ. ಕಂಪ್ಯೂಟರ್‍ಗಳೇ ಇಲ್ಲ್ಲವೆಂದರು ಮಕ್ಕಳು. ಇದಕ್ಕೂ ಸಚಿವರಿಂದ ಉತ್ತರವಿಲ್ಲ. ಶಾಲೆಗೆ ಭೇಟಿ ನೀಡಿ ವಾರಗಳು ಕಳೆದರೂ ಅಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲಿಲ್ಲ. ಹಾಗಾದರೆ ಭೇಟಿ ನೀಡುವ ಅವಶ್ಯಕತೆ ಏನಿತ್ತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.

ಶಾಲಾ ವಾಸ್ತವ್ಯದಿಂದ ಏನೂ ಬದಲಾವಣೆ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲೇ ಕೈಗೊಳ್ಳಬೇಕಾದ ಕ್ರಮಗಳು ಸಾಕಷ್ಟು ಇವೆ. ಸಮಾನ ಶಿಕ್ಷಣದ ವ್ಯವಸ್ಥೆ ಜಾರಿಗೆ ತಂದರೆ ಶಿಕ್ಷಣದ ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಮಾಡಬಹುದು. ಇದು ಸಚಿವರಿಗೂ ಗೊತ್ತು. ಆದರೆ ಮಾಡಲು ಮನಸ್ಸಿಲ್ಲ ಅಷ್ಟೇ.

ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಪಾವಗಡ. ಇಲ್ಲಿಗೆ ಶಿಕ್ಷಕರು ಬರುವುದು ಕಷ್ಟ. ದೂರದ ತಾಲೂಕು. ಇದು ಗೊತ್ತಿಲ್ಲವೇ ಮಾನ್ಯ ಸುರೇಶ್‍ಕುಮಾರ್ ಅವರಿಗೆ? ಪಾವಗಡದ ಅಚ್ಚಮ್ಮನಹಳ್ಳಿ, ಗುಬ್ಬಿ ತಾಲೂಕಿನ ಎರಡು ಶಾಲೆಗಳಿಗೂ ಭೇಟಿ ಕೊಟ್ಟರು. ಆಯಾ ಜನರಿಗೆ ಬಂದ ಭಾಗ್ಯವಾದರೂ ಏನು? ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಬಗ್ಗೆ ನಾಗರಿಕ ಸಂಘಟನೆಗಳು ಗಮನ ಸೆಳೆಯುತ್ತಲೇ ಬಂದಿವೆ. ಸಾವಿರಾರು ಶಾಲೆಗಳು ಮುಚ್ಚಿರುವ ಬಗ್ಗೆ ವರದಿ ಇದೆ.. ಸರ್ಕಾರದ ಬಳಿಯೂ ಅಂಕಿ ಆಂಶಗಳಿವೆ. ಹೀಗಿದ್ದರೂ ಏನು ಕ್ರಮ ಕೈಗೊಂಡರು. ಹೋಗಲಿ, ಸಚಿವರು ಶಾಲೆಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಅರಿತರು ಎಂದು ಭಾವಿಸೋಣ. ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಿದರೇ? ಉತ್ತರ ಶೂನ್ಯ!

ಇದೀಗ ಸಚಿವ ಸುರೇಶ್‍ಕುಮಾರ್ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದಲ್ಲಿ ಬದಲಾವಣೆ ಎಂದಿದ್ದಾರೆ. ಸುಧಾರಣೆ ಎಂದಿಲ್ಲ. ಅಂದರೆ ಈಗಿರುವ ವ್ಯವಸ್ಥೆಯನ್ನು ಬದಲಿಸಿ ಆರ್‌ಎಸ್‍ಎಸ್‍ನ ವಿಷಕಾರಿ ಅಜೆಂಡಾವನ್ನು ಮಕ್ಕಳಿಗೆ ಉಣಿಸುವುದು ಎಂದರ್ಥವೇ? ಇರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಂಪ್ಯೂಟರ್ ಇಲ್ಲ. ಎಷ್ಟೋ ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿವೆ. ಮಕ್ಕಳ ಕೊರತೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಿದೆ. ಹೀಗಿದ್ದರೂ ಗುಣಮಟ್ಟ ಸಾಧಿಸಲು ಆಗಿಲ್ಲ! ಇಂತಹ ಸನ್ನಿವೇಶದಲ್ಲಿ ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ಏಳನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಮಾಡುವುದಾಗಿ ಪ್ರಕಟಿಸಿದ್ದಾರೆ. 1 ರಿಂದ 9ನೇ ತರಗತಿವರೆಗೆ ಪಾಸು ಮಾಡುವ ಪದ್ದತಿ ಇನ್ನು ಮುಂದೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇದು ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವಲ್ಲದೆ ಮತ್ತೇನು?

ಸಧ್ಯದ ವ್ಯವಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕೆಲ ಮಕ್ಕಳಿಗೆ ಪ್ರಾಥಮಿಕ ಹಂತದಿಂದ ಪದವಿ ಹಂತಕ್ಕೆ ಬಂದರೂ ವ್ಯಾಕ್ಯ ಬರೆಯುವುದಿರಲಿ, ಸರಿಯಾಗಿ ಕಾಗುಣಿತ ಬರೆಯಲು ಬರುತ್ತಿಲ್ಲ. ಮಕ್ಕಳ ಉತ್ತರ ಪತ್ರಿಕೆಗಳನ್ನು ನೋಡಿದರೆ ಪಾಸು ಮಾಡುವ ಮನಸ್ಸೇ ಬರುವುದಿಲ್ಲ. ಕನಿಷ್ಟ ಅಂಕ ಗಳಿಸುವುದೂ ದುಃಸ್ಥರ. ಶಿಕ್ಷಕರು ತಮ್ಮ ಮರ್ಯಾದೆಯ ಪ್ರಶ್ನೆ ಎಂದು ಮಕ್ಕಳನ್ನು ಪಾಸು ಮಾಡುತ್ತಾರೆ. ಮುಂದಿನ ತರಗತಿಗೂ ಮಕ್ಕಳು ಬೇಕಲ್ಲವೇ?! ಇಲ್ಲಿ ಶಿಕ್ಷಕರನ್ನು ದೂರಬೇಕೋ? ಮಕ್ಕಳನ್ನು ದೂರಬೇಕೋ, ಪೋಷಕರನ್ನೋ ಅಥವಾ ಸರ್ಕಾರವನ್ನೋ! ಅಂತು ಮಕ್ಕಳು ಮಾತ್ರ ಶಿಕ್ಷಣ ಕಲಿಕೆಯಲ್ಲಿ ಹಿಂದೆ ಬಿದ್ದಿದ್ದಾರೆ. ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಗೊಳಿಸಬೇಕಾದ ಶಿಕ್ಷಣ ಸಚಿವರಾದಿಯಾಗಿ ಸರ್ಕಾರ ಖಾಸಗಿ ಶಿಕ್ಷಣದ ಮಾಲಿಕತ್ವಕ್ಕೆ ಶರಣಾಗಿ ಸಾಮಾನ್ಯ ಬಡಮಕ್ಕಳನ್ನು ಹಾಳು ಮಾಡುತ್ತಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಲೋಚನೆಗೆ ಬಡಮಕ್ಕಳು ಬೇಕಾಗಿಲ್ಲ. ಗ್ರಾಮೀಣಕ್ಕೂ ಮತ್ತು ನಗರ ಲೋಕದ ಚಿತ್ರಣ ಅವರ ಕಣ್ಣು ಮುಂದೆ ಇಲ್ಲ. ಕೇವಲ ಲಕ್ಷಲಕ್ಷ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳೇ ಅವರ ಮುಂದಿವೆ. ಆ ಚಿತ್ರಣ ಗ್ರಾಮೀಣ ಪರಿಸರವನ್ನು ಮಸುಕುಗೊಳಿಸುತ್ತದೆ. ಖಾಸಗೀಕರಣ, ಶಾಲೆಗಳ ವಿಲೀನ, ವಿಶೇಷ ಶಿಕ್ಷಣ ವಲಯ, ಸಂಕೀರ್ಣ ಶಿಕ್ಷಣ ಪದ್ದತಿ, ಹೀಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಸರ್ಕಾರಿ ಶಾಲಾ ವ್ಯವಸ್ಥೆಯನ್ನೇ ಇಲ್ಲದಂತೆ ಮಾಡುವ ನೀತಿಗಳತ್ತಲೆ ಅವರ ಚಿತ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...