Homeಮುಖಪುಟವಿಧಾನಸಭಾ ಚುನಾವಣೆಯಲ್ಲಿ ವಿವೇಚನೆಯಿಂದ ವರ್ತಿಸುವಂತೆ ಬಿಜೆಪಿಗರಿಗೆ ಪ್ರಧಾನಿ ಸಲಹೆ

ವಿಧಾನಸಭಾ ಚುನಾವಣೆಯಲ್ಲಿ ವಿವೇಚನೆಯಿಂದ ವರ್ತಿಸುವಂತೆ ಬಿಜೆಪಿಗರಿಗೆ ಪ್ರಧಾನಿ ಸಲಹೆ

- Advertisement -
- Advertisement -

ಮುಂಬರುವ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಕಾರಾತ್ಮಕ ಅಭಿಯಾನದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಪಕ್ಷದ ಮುಖಂಡರ ಹೇಳಿಕೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ಗುರುವಾರ ರಾತ್ರಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮೊದಲ ಹಂತದ ಮತದಾನದ ಅಭ್ಯರ್ಥಿಗಳ ಕುರಿತು ಚರ್ಚೆಯಾಗಿದ್ದು, ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ವಿವೇಚನೆಯಿಂದ ನಡೆದುಕೊಳ್ಳುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಸ್ಥಳೀಯರ ಭಾವನೆಗಳ ಬಗ್ಗೆ ಪ್ರತಿಕ್ರಿಯೆ ಕೋರಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದ ಪ್ರಧಾನಿ, ಪ್ರತಿಪಕ್ಷಗಳು ಅಸಂಸದೀಯ ಭಾಷೆಯನ್ನು ಬಳಸಿದರೂ ಬಿಜೆಪಿ ನಿಂದನೀಯ ಭಾಷೆಯನ್ನು ಬಳಸಬಾರದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ವಿರುದ್ಧ ಬಿಜೆಪಿ ಹೋರಾಡಲು ಸಜ್ಜಾಗಿದ್ದರೆ, ಅಸ್ಸಾಂನಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. “ಪಕ್ಷವು ಅಸ್ಸಾಂನಲ್ಲಿ ಅಧಿಕಾರ ಉಳಿಸುವುದು ಮಾತ್ರವಲ್ಲ, ಹಿಂದಿನ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನವನ್ನು ಪಡೆಯುವ ಗುರಿಯನ್ನು ಹೊಂದಿದೆ” ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

126 ವಿಧಾನಸಭಾ ಸ್ಥಾನಗಳಿರುವ ಅಸ್ಸಾಂನಲ್ಲಿ 60 ಸ್ಥಾನಗಳನ್ನು ಗೆದ್ದ ಬಿಜೆಪಿಯು 2016 ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಮುಂಬರುವ ಚುನಾವಣೆಯಲ್ಲಿ ಪಕ್ಷವು 92 ಸ್ಥಾನಗಳನ್ನು ಸ್ಪರ್ಧಿಸಲಿದ್ದು, ಅದರ ಮಿತ್ರಪಕ್ಷಗಳಾದ ಎಜಿಪಿಗೆ 26 ಮತ್ತು ಯುಪಿಪಿಎಲ್‌ಗೆ 8 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.

ಅಸ್ಸಾಂ ಚುನಾವಣೆಗೆ 70 ಹೆಸರುಗಳ ಮೊದಲ ಪಟ್ಟಿಯನ್ನು ಪಕ್ಷ ಶುಕ್ರವಾರ ಪ್ರಕಟಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆಗೆ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: TMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...