Homeಮುಖಪುಟಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

ಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

- Advertisement -
- Advertisement -

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಬೆನ್ನಲ್ಲೇ, ಇದರ ಕುರಿತು ವಿವರಗಳನ್ನು ನೀಡಬೇಕು ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಮನವಿ ಸಲ್ಲಿಸಲಾಗಿದೆ. ಮೋದಿಯವರ ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ನಗೆಪಾಟಲಿಗೀಡಾಗಿತ್ತು. ಜೊತೆಗೆ ಕಟು ವಿಮರ್ಶೆಗೆ ಒಳಗಾಗಿತ್ತು.

ಬಾಂಗ್ಲಾದೇಶದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ನರೇಂದ್ರ ಮೋದಿ, “ಬಾಂಗ್ಲಾದೇಶ ವಿಮೋಚನೆಯ ಸಂದರ್ಭದ ಸ್ವಾತಂತ್ರ್ಯ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ. ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮವು ನನ್ನ ಜೀವನದ ಪ್ರಯಾಣದಲ್ಲಿ ಒಂದು ಮಹತ್ವದ ಕ್ಷಣವಾಗಿತ್ತು. ನನ್ನ ಸಹೋದ್ಯೋಗಿಗಳು ಮತ್ತು ನಾನು ಭಾರತದಲ್ಲಿ ಸತ್ಯಾಗ್ರಹ ಮಾಡಿದ್ದೆವು. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಸತ್ಯಾಗ್ರಹದ ಸಮಯದಲ್ಲಿ ಜೈಲಿಗೆ ಹೋಗಲು ನನಗೆ ಅವಕಾಶ ಸಿಕ್ಕಿತು” ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಟ್ವಿಟರ್‌ನಲ್ಲಿ #lielikemodi ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿತ್ತು. ಈ ವರದಿ ಬರೆಯುವ ವೇಳೆಗೆ 2 ಲಕ್ಷಕ್ಕೂ ಹೆಚ್ಚು ಜನ ಈ ಹ್ಯಾಶ್‌ಟ್ಯಾಗ್ ಬಳಸಿ ಮೋದಿಯ ಕಾಲೆಳೆದಿದ್ದರು.

ಈಗ ಮೋದಿ ಹೇಳಿಕೆಯ ಕುರಿತು ಆರ್‌ಟಿಐ ಅಡಿಯಲ್ಲಿ ಮಾಹಿತಿಯನ್ನು ಕೋರಲಾಗಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಅಲಹಾಬಾದ್ ಹೈಕೋರ್ಟಿನ ವಕೀಲರಾದ ಕೃಷ್ಣ ಮೋಹನ್ ಪಾಂಡೆ ಎಂಬುವವರು ಈ ಕೆಳಗಿನ ಮಾಹಿತಿಗಳನ್ನು ಕೋರಿದ್ದಾರೆ. “ಪ್ರಧಾನಿ ಮೋದಿಯವರು ಬಾಂಗ್ಲಾದೇಶದ ಭೇಟಿಯ ಸಂದರ್ಭದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಕೆಲವು ಮಾಹಿತಿಗಳನ್ನು ನೀಡಬೇಕು” ಎಂದು ಅರ್ಜಿ ಸಲ್ಲಿಸಿದ್ದಾರೆ.

  1. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ಯಾವ ಕಾನೂನಿನ ಅಡಿಯಲ್ಲಿ ಪ್ರಧಾನಿಯವರನ್ನು ಬಂಧಿಸಲಾಗಿತ್ತು. ಅದರ ಎಫ್‌ಐಆರ್ ನಕಲನ್ನು ಒದಗಿಸಿ.
  2. ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಧಿಸಿ ಭಾರತದ ಯಾವ ಜೈಲಿನಲ್ಲಿಡಲಾಗಿತ್ತು?
  3. ಪ್ರಧಾನಿ ಮೋದಿಯವರು ಎಷ್ಟುದಿನ ಜೈಲಿನಲ್ಲಿದ್ದರು?

ಈ ಮೆಲಿನ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ವಕೀಲರು ಮಾಹಿತಿ ಹಕ್ಕಿನಡಿ ಮನವಿ ಸಲ್ಲಿಸಿದ್ದಾರೆ.

ಇದೇ ರೀತಿ ಕಾಂಗ್ರೆಸ್‌ನ ವಕ್ತಾರರಾದ ಸರಳ್ ಪಟೇಲ್ ಪ್ರಧಾನಮಂತ್ರಿ ಕಛೇರಿಯಿಂದಲೇ ಮಾಹಿತಿ ಕೋರಿದ್ದಾರೆ.

  1. ಪ್ರಧಾನಿ ಮೋದಿಯವರು ಹೇಳಿರುವಂತೆ, ಅವರ ಬಂಧನದ ವಿವರಗಳು ಮತ್ತು ನಿರ್ದಿಷ್ಟ ದಿನಾಂಕದ ಮಾಹಿತಿ ಒದಗಿಸಿ.
  2. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ಯಾವ ಕಾನೂನಿನ ಅಡಿಯಲ್ಲಿ ಪ್ರಧಾನಿಯವರನ್ನು ಬಂಧಿಸಲಾಗಿತ್ತು. ಅದರ ಎಫ್‌ಐಆರ್ ನಕಲನ್ನು ಒದಗಿಸಿ. ಮತ್ತು ಇದನ್ನು ಬೆಂಬಲಿಸುವ ಇತರೆ ದಾಖಲೆಗಳನ್ನು ಒದಗಿಸಿ.
  3. ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಧಿಸಿ ಭಾರತದ ಯಾವ ಜೈಲಿನಲ್ಲಿಡಲಾಗಿತ್ತು?
  4. ಪ್ರಧಾನಿಯವರ ಹೇಳಿಕೆಗೆ ಸಂಬಂಧಿಸಿದ ಎಲ್ಲಾ ದಾಖಲೆ ಮತ್ತು ಕಡತಗಳನ್ನು ಒದಗಿಸಿ.

ಎಂದು ಪ್ರಧಾನಮಂತ್ರಿ ಕಛೇರಿಯಲ್ಲಿ ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...