Homeಮುಖಪುಟವಿಭಜನೆಯ ನಂತರ ಮೊಟ್ಟಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ!

ವಿಭಜನೆಯ ನಂತರ ಮೊಟ್ಟಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ!

- Advertisement -
- Advertisement -

ಆಗಸ್ಟ್‌ 2019 ರಂದು ಕೇಂದ್ರ ಸರ್ಕಾರ ಏಕಾ ಏಕಿ ಸಂವಿಧಾನದ ಅನುಚ್ಛೇಧ 370 ರ ಅಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇ‍ಷ ಅಧಿಕಾರವನ್ನು ಕಿತ್ತುಕೊಂಡು ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು. ಅದಾಗಿ  2 ವರ್ಷಗಳ ಅವಧಿಯಲ್ಲಿ ಕಾಶ್ಮೀರದಲ್ಲಿ ಸಾಕಷ್ಟು ಬಂಧನಗಳಾಗಿವೆ. ಫಾರುಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿ ಕಾಶ್ಮೀರದ ನಾಯಕರನ್ನೆಲ್ಲ ಕೇಂದ್ರ ಸರ್ಕಾರ ಬಂಧನದಲ್ಲಿ ಇರಿಸಿತ್ತು. ಕಾಶ್ಮೀರಿಗಳ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿತ್ತು. 22 ತಿಂಗಳ ನಂತರವೂ ಜಮ್ಮು ಕಾಶ್ಮೀರದಲ್ಲಿ ನಿರ್ಭಂಧಗಳು ತೆರವಾಗಿಲ್ಲ. ಈಗ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳ ಜೊತೆ ಸರ್ವಪಕ್ಷ ಸಭೆಯನ್ನು ನಡೆಸಲು ಮುಂದಾಗಿದೆ. 22 ತಿಂಗಳುಗಳ ನಂತರ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದ ವಿಷಯದಲ್ಲಿ ತನ್ನ ಕಾಠಿಣ್ಯವನ್ನು ಒಂದಷ್ಟು ಸಡಿಲಿಸಿದಂತೆ ಕಾಣುತ್ತಿದೆ.

ಜೂನ್‌ 24 ರಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರ ಜೊತೆ ದೆಹಲಿಯಲ್ಲಿ ಚರ್ಚೆ ನಡೆಸಲಿದ್ದಾರೆ. ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನೂ ಪ್ರಧಾನಿಗಳೇ ವಹಿಸಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮತಕ್ಷೇತ್ರಗಳ ಮರು ವಿಂಗಡಣೆ ಮತ್ತು ಹಿಂದೆ ನೀಡಲಾಗಿದಗ್ದ ವಿಶೇಷ ಸ್ಥಾನಮಾನವನ್ನು ಮರಳಿ ನೀಡುವ ಕುರಿತು ಪ್ರಧಾನಿಯವರೊಂದಿಗೆ ಚರ್ಚೆ ನಡೆಸಲು ಸಿದ್ಧರಿದ್ದೇವೆ ಎಂದು ಜಮ್ಮು ಕಾಶ್ಮೀರದ ರಾಜಕೀಯ ನಾಯಕರುಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಸರ್ವಪಕ್ಷ ಸಭೆಯ ನಡೆಯನ್ನು ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಮುಂತಾದ ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳು ಸ್ವಾಗತಿಸಿವೆ.

ಇದನ್ನೂ ಓದಿ : ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...