Homeಮುಖಪುಟಪ್ರಧಾನಿ ಏನು ಪರಮಾತ್ಮನಲ್ಲ: ಮೋದಿ ವಿರುದ್ಧ ಖರ್ಗೆ ಕಿಡಿ

ಪ್ರಧಾನಿ ಏನು ಪರಮಾತ್ಮನಲ್ಲ: ಮೋದಿ ವಿರುದ್ಧ ಖರ್ಗೆ ಕಿಡಿ

- Advertisement -
- Advertisement -

ಪ್ರಧಾನಮಂತ್ರಿ ರಾಜ್ಯಸಭೆಗೆ ಬಂದು ಮಣಿಪುರದ ಹಿಂಸಾಚಾರದ ಬಗ್ಗೆ ಮಾತನಾಡಲಿ, ಪ್ರಧಾನಮಂತ್ರಿ ರಾಜ್ಯಸಭೆಗೆ ಬಂದರೆ ಏನಾಗಲಿದೆ? ಮೋದಿ ಏನು ಪರಮಾತ್ಮನೇ? ಅವರೇನು ದೇವರಲ್ಲ. ರಾಜ್ಯಸಭೆಗೆ ಬಂದು ಉತ್ತರ ಕೊಡಲಿ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಮಣಿಪುರದ ವಿಷಯದ ಕುರಿತು ಚರ್ಚೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ಮಣಿಪುರ ಜನಾಂಗೀಯ ಸಂಘರ್ಷ ಬಗ್ಗೆ ಮಾತನಾಡಿದ ಅವರು, ”ಪ್ರಧಾನಿ ನರೇಂದ್ರ ಮೋದಿ ಬಂದು ಈ ಬಗ್ಗೆ ಮಾತನಾಡಬೇಕು ಎಂದರು. ಆಡಳಿತ ಪಕ್ಷದ ಸದಸ್ಯರು ನಿಯಮ 167ರ ಅಡಿಯಲ್ಲಿ ಚರ್ಚೆ ಮಾಡಲು ಒಪ್ಪಿಕೊಂಡಿದ್ದರು. ಸನದಕ್ಕೆ ಬರುತ್ತಿದ್ದಂತೆ ತಮ್ಮ ನಿಲುವು ಬದಲಾಯಿಸಿದ್ದಾರೆ.

ಮಣಿಪುರ ಬಗ್ಗೆ ಚರ್ಚೆ ಮಾಡದಿರುವುದು ಯಾಕೆ? ಈ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿ. ಪ್ರಧಾನಮಂತ್ರಿಯೂ ಬಂದು ಮಾತನಾಡಲಿ ಎಂದು ಹೇಳಿದರು. ಇದಕ್ಕೆ ಆಡಳಿತ ಪಕ್ಷದ ನಾಯಕರು ಗದ್ದಲ ಮಾಡಿದರು. ಇದರಿಂದ ಆಕ್ರೋಶಗೊಂಡ ಖರ್ಗೆ, ಪ್ರಧಾನಿ ಏನು ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ ಎಂದು ಕಟು ಶಬ್ದಗಳಲ್ಲಿ ಟೀಕಿಸಿದರು. ಇದರಿಂದ ಸದನದಲ್ಲಿ ಗದ್ದಲ ಉಂಟಾಯಿತು ಹಾಗಾಗಿ ಕಲಾಪವನ್ನು ಮುಂದೂಡಲಾಯಿತು.

ಕೇಂದ್ರ ಸರ್ಕಾರ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ಸುದೀರ್ಘ ಭಾಷಣ ಮಾಡಲಿದ್ದಾರೆ. ಮೋದಿ ಅವರು ರಾಜ್ಯಸಭೆಗೂ ಬಂದು ಮಾತನಾಡಲು ಖರ್ಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅವಿಶ್ವಾಸ ನಿರ್ಣಯ: INDIA ಪ್ರಶ್ನೆಗಳಿಗೆ ಇಂದು ಉತ್ತರ ನೀಡಲಿದ್ದಾರೆ ಪ್ರಧಾನಿ ಮೋದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...