Homeಮುಖಪುಟಇಂದು ಸಂಜೆ 5ಕ್ಕೆ ರಾಷ್ಟ್ರ ಉದ್ದೇಶಿಸಿ ಮೋದಿ ಭಾಷಣ: ಲಸಿಕಾ ನೀತಿಗೆ ಸಮಜಾಯಿಷಿಯೇ?

ಇಂದು ಸಂಜೆ 5ಕ್ಕೆ ರಾಷ್ಟ್ರ ಉದ್ದೇಶಿಸಿ ಮೋದಿ ಭಾಷಣ: ಲಸಿಕಾ ನೀತಿಗೆ ಸಮಜಾಯಿಷಿಯೇ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್-ಮೇ ತಿಂಗಳಲ್ಲಿ ಮಾರಣಾಂತಿಕ ಸಾಂಕ್ರಾಮಿಕ ಉಲ್ಬಣಗೊಂಡ ನಂತರ, ಈಗೀಗ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಕ್ಷೀಣಿಸುತ್ತಿವೆ ಮತ್ತು ದೇಶದ ಕೆಲವು ಭಾಗಗಳು ಕಟ್ಟುನಿಟ್ಟಾದ ಲಾಕ್‌ಡೌನ್‌ಗಳಿಂದ ಹಂತಹಂತವಾಗಿ ಹೊರಬರುತ್ತಿವೆ.

ಪಿಎಂ ಮೋದಿಯವರು ತಮ್ಮ ಸರ್ಕಾರದ ಲಸಿಕಾ ನೀತಿಯ ಕುರಿತು ಮಾತನಾಡಲಿದ್ದಾರೆ ಎಂದು ವರದಿಗಳು ಸೂಚಿಸಿವೆ. ವಿವಿಧ ರಾಜ್ಯಗಳು ಮತ್ತು ತಜ್ಞರು  ಕೇಂದ್ರದ ಲಸಿಕಾ ನೀತಿಯನ್ನು ಸತತವಾಗಿ ಟೀಕಿಸುತ್ತಲೇ ಬಂದಿದ್ದಾರೆ.

ಮಾರ್ಚ್-ಏಪ್ರಿಲ್‍ನಲ್ಲಿ ಎರಡನೇ ಅಲೆಯು ಭಾರತವನ್ನು ತೀವ್ರ ಬಿಕ್ಕಟ್ಟಿಗೆ ದೂಡಿದಾಗ ಲಸಿಕೆಗಳ ಕುರಿತ ಕೇಂದ್ರದ ಸರ್ಕಾರದ ನಿರ್ಧಾರಗಳು, ನೀತಿಗಳು ಭಾರಿ ಹಿನ್ನಡೆ ಅನುಭವಿಸಿದವು. ಸರ್ಕಾರವು ತನ್ನ “ಲಸಿಕೆ ಮೈತ್ರಿ”  ಕಾರ್ಯಕ್ರಮದಡಿ  ಕೋವಿಡ್ ಲಸಿಕೆಗಳ ರಫ್ತು ಮಾಡಿದ್ದರ ಬಗ್ಗೆಯೂ ಆಕ್ಷೇಪಗಳು ಕೇಳಿ ಬಂದಿದ್ದವು.  ಎಲ್ಲಾ ವಯಸ್ಕರಿಗೆ ಲಸಿಕೆಗಳನ್ನು ವಿಸ್ತರಿಸಿದ್ದರಿಂದ ದೇಶದಲ್ಲಿನ ಕೊರತೆಯನ್ನು ನಿಭಾಯಿಸಲು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಗಳನ್ನು ಸಂಗ್ರಹಿಸಲು ಸರ್ಕಾರ ಪರದಾಡಿತು. ಈಗಲೂ ಆ ಪರದಾಟ ಮುಂದುವರೆದೇ ಇದೆ.

ಕೋವಿಡ್‌ನ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಸಿರುವುದರಿಂದ, ನಿಧಾನಗತಿಯಲ್ಲಿ ಲಸಿಕೆ ಪೂರೈಕೆಯು ರಾಜ್ಯಗಳಿಗೆ ಕಳವಳದ ವಿಷಯವಾಗಿದೆ.

ಇದೆಲ್ಲಕ್ಕೂ ಮುಖ್ಯವಾಗಿ ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ ನೀಡಬೇಕಿದ್ದ ಕೇಂದ್ರ ಸರ್ಕಾರ, ಲಸಿಕೆಗಳಿಗೆ ಮೂರು ಬಗೆಯ ದರಗಳನ್ನು ವಿಧಿಸಿದ್ದು, ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಂಡು ರಾಜ್ಯ ಸರ್ಕಾರಗಳ ಮೇಲೆ ಭಾರ ಹಾಕಿದ್ದೂ ಕೂಡ ಟೀಕೆಗೆ ಒಳಗಾಗಿವೆ.

ಪ್ರಧಾನಿ ಈ ಎಲ್ಲ ಟೀಕೆಗಳಿಗೆ  ಇಂದು 5ಕ್ಕೆ ಉತ್ತರ ನೀಡುತ್ತಾರೆಯೇ, ಪರಿಹಾರ ಒದಗಿಸುತ್ತಾರೆಯೇ ಎಂಬ ಕುತೂಹಲ ಜನರಲ್ಲಿದೆ. ಈ ನಡುವೆ ಈಗಾಗಲೇ ಅಮಿತ್‌ ಶಾರವರು “ಮೋದಿಯವರ ನೇತೃತ್ವದಲ್ಲಿ ಭಾರತವು ಎರಡನೇ ಅಲೆಯನ್ನು ಬಹುಬೇಗ ನಿಯಂತ್ರಿಸಿತು” ಎಂದು ಹೇಳಿಕೆ ನೀಡುವ ಮೂಲಕ ಮೋದಿಯವರ ವರ್ಚಸ್ಸನ್ನು ಹೆಚ್ಚಿಸಲು ಮುಂದಾಗಿದ್ದಾರೆ.


ಇದನ್ನೂ ಓದಿ: ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...