Homeಕರ್ನಾಟಕಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿ.ಕೆ. ಶಿವಕುಮಾರ್

- Advertisement -
- Advertisement -

ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ. ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆ 200 ರೂಪಾಯಿ ಕಡಿಮೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು, ”ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ? 200 ರೂಪಾಯಿ ಸಿಲಿಂಡರ್ ಬೆಲೆ ಏಕೆ ಇಳಿಸಿದ್ದಾರೆ? ಬಿಜೆಪಿ ಆಡಳಿತವಿರುವ ರಾಜ್ಯಗಳ ಮಹಿಳೆಯರು ಕಾಂಗ್ರೆಸ್‌ನವರು ಕೊಡುತ್ತಿದ್ದಾರೆ ನಿಮಗೆ ಏಕೆ ಆಗುತ್ತಿಲ್ಲ ಎಂದು ಬೈಯ್ಯುತ್ತಿದ್ದಾರೆ, ಹಾಗಾಗಿ ಬಿಜೆಪಿ ಸರ್ಕಾರ ಕರ್ನಾಟಕ ಮಾದರಿ ಅನುಸರಿಸುತ್ತಿದೆ. ಈ ದೇಶದ ಜನರಿಗೆ ಹಣ ಕೊಡಲು ನಮ್ಮದೇನು ತಕರಾರಿಲ್ಲ. ಆದರೆ “ಕರ್ನಾಟಕ ಮಾದರಿ”ಯಿಂದ ಹೆದರಿಕೊಂಡಿದ್ದಾರೆ ಎಂಬುದು ಸತ್ಯ” ಎಂದರು.

”ಶಕ್ತಿ, ಗೃಹಜ್ಯೋತಿ, ಅನ್ನ ಭಾಗ್ಯ ಎಲ್ಲಾ ಗ್ಯಾರಂಟಿಗಳು ಯಶಸ್ವಿಯಾಗಿವೆ. ಇದರಿಂದ ಇಡೀ ದೇಶದ ಹೆಣ್ಣು ಮಕ್ಕಳು ‘ಕರ್ನಾಟಕ ಮಾದರಿ’ಗೆ ಮನಸೋತಿದ್ದಾರೆ. ನಾವು 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಕಾಂಗ್ರೆಸ್ ಪಕ್ಷದ ಇದನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸುತ್ತಿದೆ, ಜನರು ಸಂಭ್ರಮಿಸುತ್ತಿದ್ದಾರೆ” ಎಂದು ಹೇಳಿದರು.

”ಕೇವಲ 100 ದಿನಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ, ಸಿದ್ದರಾಮಯ್ಯ ಅವರು ಮೊದಲನೇ ಸಚಿವಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಲಾಯಿತು. ಬಿಜೆಪಿ ಆಡಳಿತ ಇರುವ ಯಾವ ರಾಜ್ಯಗಳಲ್ಲೂ ಮಾಡದ ಕೆಲಸ ನಾವು ಮಾಡಿದ್ದೇವೆ. ಬಿಜೆಪಿಯವರ ಪ್ರಣಾಳಿಕೆ ತೆಗೆದು ನೋಡಲಿ, ಅವರದ್ದು ಕೇವಲ ಭರವಸೆ ನಮ್ಮದು ಗ್ಯಾರಂಟಿ” ಎಂದರು.

ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, ”ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ. ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಸಾಮರ್ಥ್ಯವಿಲ್ಲ” ಕಿಡಿಕಾರಿದರು.

ಇದನ್ನೂ ಓದಿ: ಬಿಜೆಪಿಯು ದೇಶ ಹಾಳು ಮಾಡುತ್ತಿದೆ, ಈ ಪ್ಯಾಸಿಸ್ಟ್ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

0
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಲ್ಲಿ ಶಾಲಾ ಆಡಳಿತ ಮಂಡಳಿ ರಾಜೀನಾಮೆ...