Homeಮುಖಪುಟಜನರನ್ನು ಮೆಚ್ಚಿಸುವಲ್ಲಿ ನಿಪುಣರು: LPG ಸಿಲಿಂಡರ್ ಬೆಲೆ ಇಳಿಕೆ ಕುರಿತು ಪ್ರಧಾನಿ ಮೋದಿ ವಿರುದ್ಧ ಅಧೀರ್...

ಜನರನ್ನು ಮೆಚ್ಚಿಸುವಲ್ಲಿ ನಿಪುಣರು: LPG ಸಿಲಿಂಡರ್ ಬೆಲೆ ಇಳಿಕೆ ಕುರಿತು ಪ್ರಧಾನಿ ಮೋದಿ ವಿರುದ್ಧ ಅಧೀರ್ ಚೌಧರಿ ವಾಗ್ದಾಳಿ

- Advertisement -
- Advertisement -

ಪ್ರಧಾನಿ ಮೋದಿಯವರು ಜನರನ್ನು ಸಂತೋಷಪಡಿಸುವಲ್ಲಿ ನಿಪುಣರು… ಹಲವು ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ ಹಾಗಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 200ರೂ. ಕಡಿತಗೊಳಿಸಿದ್ದಾರೆ. ರಾಜಸ್ಥಾನ ಸರ್ಕಾರಕ್ಕೆ 500ರೂ.ಯಲ್ಲಿ ಸಿಲಿಂಡರ್ ನೀಡಲು ಸಾಧ್ಯವಾಗುತ್ತದೆ ಎನ್ನುವುದಾದರೆ, ನೀವೇಕೆ ನೀಡಬಾರದು?” ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪ್ರಶ್ನೆ ಮಾಡಿದ್ದಾರೆ.

ಎಲ್ಲಾ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 200ರೂ. ಕಡಿತಗೊಳಿಸುವುದಾಗಿ ಘೋಷಿಸಿದ ನಂತರ ಆಡಳಿತಾರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್, ಆರ್‌ಜೆಡಿ, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ನಿರ್ಧಾರದ ಸಮಯವನ್ನು ಪ್ರಶ್ನಿಸಿದ್ದಾರೆ.

”ಇದು INDIA ಮೈತ್ರಿಕೂಟದ ಎರಡನೇ ಸಭೆಯ ನಂತರ, ಅವರು (ಬಿಜೆಪಿ) ಒತ್ತಡಕ್ಕೆ ಒಳಗಾಗಿದ್ದಾರೆ. ಹಾಗಾಗಿಯೇ 200ರೂ. ಬೆಲೆಯನ್ನು ಕಡಿಮೆ ಮಾಡಿದ್ದಾರೆ. ಈಗ ಆರಂಭ ನೋಡುತ್ತಿದ್ದೀರಿ, ಮೈತ್ರಿಕೂಟವು ಅಂತಿಮಗೊಂಡಾಗ, ನೀವು ನಮ್ಮ ತಾಕತ್ತನ್ನು ನೋಡುತ್ತೀರಿ” ಎಂದು ಬಿಹಾರದ ಉಪ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

”ಪ್ರತಿಪಕ್ಷಗಳ ‘INDIA’ ಒಕ್ಕೂಟವು ರಚನೆಯಾದ ಕಳೆದ ಎರಡು ತಿಂಗಳಲ್ಲಿ ಕೇವಲ ಎರಡು ಸಭೆಗಳನ್ನು ನಡೆಸಿದೆ. ಇದೇ ವೇಳೆ, ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 200 ರೂಪಾಯಿ ಇಳಿಸಲಾಗಿದೆ. ಇದು INDIA ದ ತಾಕತ್ತು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಕೇವಲ ಎರಡೇ ಸಭೆಗೆ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ, ಇದು INDIA ಮೈತ್ರಿಯ ತಾಕತ್ತು: ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ...

0
ಮೇ 1, 2024 ರಂದು ಗುಜರಾತ್‌ನ ಬನಸ್ಕಾಂತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ ಏಕೈಕ ಪಕ್ಷ ಬಿಜೆಪಿ"...