‘ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಅವರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.
‘ಭಾರತ್ ಬಂದ್’ ಪ್ರಯುಕ್ತ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಅವರು, “ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ” ಎಂದರು.
ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್ ಆಕ್ರೋಶ
“ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.
“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ನಾವು ಸಾರಿ ಸಾರಿ ಹೇಳುತ್ತಿದ್ದೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಜನರ ಪ್ರವಾಗಿ ನಿಲ್ಲಬೇಕಿದ್ದ ಬಿಜೆಪಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಶಕ್ತಿಗಳ ಮತ್ತು ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿಅವರು ಕಿಡಿಕಾರಿದರು.
ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್ ಬಂದ್‌ಗೆ ಕರೆ ನೀಡಿತ್ತು. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.
ಇದನ್ನೂ ಓದಿ: ಮೋದಿ ಯುಎಸ್ ಭೇಟಿ – ‘ಮಾಧ್ಯಮಗಳು ಪ್ರಶ್ನೆ ಕೇಳಬಾರದೆಂದು ಮೊದಲೇ ತೀರ್ಮಾನವಾಗಿತ್ತು!’


