Homeರಾಷ್ಟ್ರೀಯತ್ರಿವರ್ಣ ಧ್ವಜದ ಕುರಿತು ಪ್ರಧಾನಿ ಮೋದಿ ಟ್ವೀಟ್; ‘ಬೂಟಾಟಿಕೆ ಜಿಂದಾಬಾದ್!’ ಎಂದ ಕಾಂಗ್ರೆಸ್

ತ್ರಿವರ್ಣ ಧ್ವಜದ ಕುರಿತು ಪ್ರಧಾನಿ ಮೋದಿ ಟ್ವೀಟ್; ‘ಬೂಟಾಟಿಕೆ ಜಿಂದಾಬಾದ್!’ ಎಂದ ಕಾಂಗ್ರೆಸ್

- Advertisement -
- Advertisement -

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಮತ್ತು ತ್ರಿವರ್ಣ ಧ್ವಜದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬರೆದುಕೊಂಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ‘ಹಿಪಾಕ್ರಸಿ ಜಿಂದಾಬಾದ್(ಬೂಟಾಟಿಕೆಗೆ ಜಯವಾಗಲಿ)’ ಎಂದು ವ್ಯಂಗ್ಯವಾಡಿದೆ.

ಆಗಸ್ಟ್ 13-15 ರ ನಡುವೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಅಥವಾ ಪ್ರದರ್ಶಿಸಲು ಭಾರತದ ಜನರಿಗೆ ಪ್ರಧಾನಿ ಮನವಿ ಮಾಡಿದ್ದಾರೆ. ಜವಾಹರಲಾಲ್‌ ನೆಹರು ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜದ ಚಿತ್ರ ಮತ್ತು ತ್ರಿವರ್ಣವನ್ನು ರಾಷ್ಟ್ರಧ್ವಜವಾಗಿ ಅಳವಡಿಸಿಕೊಳ್ಳಲು ಕಾರಣವಾದ ಅಧಿಕೃತ ಸಂವಹನಗಳ ವಿವರಗಳನ್ನು ಪ್ರಧಾನಿ ಮೋದಿ ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂದು ಜುಲೈ 22 ಆಗಿದ್ದು, ನಮ್ಮ ಇತಿಹಾಸದಲ್ಲಿ ವಿಶೇಷ ಪ್ರಸ್ತುತತೆಯನ್ನು ಹೊಂದಿದೆ. 1947 ರ ಈ ದಿನ ನಮ್ಮ ರಾಷ್ಟ್ರಧ್ವಜವನ್ನು ಅಳವಡಿಸಲಾಯಿತು. ನಮ್ಮ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಸಮಿತಿಯ ವಿವರಗಳು ಮತ್ತು ಪಂಡಿತ್ ನೆಹರು ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜ ಸೇರಿದಂತೆ ಇತಿಹಾಸದಿಂದ ಕೆಲವು ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೇನೆ” ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿರುವಾಗ ಸ್ವತಂತ್ರ ಭಾರತಕ್ಕಾಗಿ ಧ್ವಜದ ಕನಸು ಕಂಡವರೆಲ್ಲರ ಅನುಸ್ಮರಣೀಯ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನಾವು ನೆನಪಿಸಿಕೊಳ್ಳುತ್ತೇವೆ. ಅವರ ಆಶಯಗಳನ್ನು ಈಡೇರಿಸಲು ಮತ್ತು ಅವರ ಕನಸುಗಳ ಭಾರತವನ್ನು ನಿರ್ಮಿಸಲು ನಾವು ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ಪ್ರಧಾನಿ ಮೋದಿ ಅವರ ಸರಣಿ ಟ್ವೀಟ್‌ಗಳಿಗೆ ಕಾಂಗ್ರೆಸ್‌ನ ಹಿರಿಯ ನಾಯಕ, ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಅವರು ಕಟುವಾದ ಪ್ರತಿಕ್ರಿಯೆಯನ್ನು ನೀಡಿದ್ದು, “ಬೂಟಾಟಿಕೆ ಜಿಂದಾಬಾದ್!” ಎಂದು ಹೇಳಿದ್ದಾರೆ.

“ನಾಗ್ಪುರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು 52 ವರ್ಷಗಳನ್ನು ತೆಗೆದುಕೊಂಡ ಸಂಘಟನೆಯಲ್ಲಿ ಪ್ರಚಾರಕರಾಗಿದ್ದವರು, ನೆಹರೂ ಅವರು ‘ಭಾರತದ ಸ್ವಾತಂತ್ರ್ಯದ ಉಡುಗೆ’ ಎಂದು ಬಣ್ಣಿಸಿದ ಖಾದಿಯಿಂದ ರಾಷ್ಟ್ರಧ್ವಜವನ್ನು ತಯಾರಿಸಿದವರ ಜೀವನೋಪಾಯವನ್ನು ನಾಶಪಡಿಸುತ್ತಿದ್ದಾರೆ” ಎಂದು ಜೈರಾಮ್ ರಮೇಶ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಭಾರತದ ಧ್ವಜ ಸಂಹಿತೆ-2002 ಅನ್ನು ಡಿಸೆಂಬರ್ 2021 ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ಪಾಲಿಯೆಸ್ಟರ್ ಮತ್ತು ಯಂತ್ರ ನಿರ್ಮಿತ ಧ್ವಜಗಳನ್ನು ತಯಾರಿಸಲು ಮತ್ತು ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬಿಜೆಪಿಗೆ ಸ್ವಾತಂತ್ರ್ಯ ಹೋರಾಟ ಮತ್ತು ಅದರ ಚಿಹ್ನೆಗಳ ಬಗ್ಗೆ ಯಾವುದೇ ತಿಳುವಳಿಕೆ ಇಲ್ಲ ಎಂದು ಆರೋಪಿಸಿ ಕಾಂಗ್ರೆಸ್ ತಿದ್ದುಪಡಿಯನ್ನು ಹಿಂಪಡೆಯಲು ಒತ್ತಾಯಿಸುತ್ತಿದೆ.

ಇದನ್ನೂ ಓದಿ: ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

“ಯಂತ್ರ ನಿರ್ಮಿತ ಮತ್ತು ಆಮದುದಿನ ಪಾಲಿಯೆಸ್ಟರ್ ಧ್ವಜಗಳ ಆಮದು ಮಾಡಿಕೊಳ್ಳಲು ಅನುಮತಿ ನೀಡುವ ಮೂಲಕ ಪ್ರಧಾನಿ ಮೋದಿ ಅವರು ‘ಖಾದಿ’ಯ ಮೂಲತತ್ವ ಮತ್ತು ಮಹಾತ್ಮ ಗಾಂಧಿಯವರ ಪರಂಪರೆಯ ಮೇಲೆ ದಾಳಿ ಮಾಡಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಈ ತಿಂಗಳ ಆರಂಭದಲ್ಲಿ ಮೋದಿ ವಿರುದ್ಧ ಕಿಡಿ ಕಾರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...