Homeಕರ್ನಾಟಕಫೆ.27ರಂದು ಪ್ರಧಾನಿ ಮೋದಿ ಕರ್ನಾಟಕ ಭೇಟಿ: ಪರೀಕ್ಷೆ ಮೂಂದೂಡಿಕೆ

ಫೆ.27ರಂದು ಪ್ರಧಾನಿ ಮೋದಿ ಕರ್ನಾಟಕ ಭೇಟಿ: ಪರೀಕ್ಷೆ ಮೂಂದೂಡಿಕೆ

ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27 ರಂದು ಬೆಳಗಾವಿ ನಗರಕ್ಕೆ ಭೇಟಿ ನೀಡುತ್ತಿರುವ ಕಾರಣದಿಂದ ಅಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸೋಮವಾರ ಮೋದಿಯವರು ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಸುಮಾರು 8 ಕಿ.ಮೀನಷ್ಟು ದೂರ ಬಿಜೆಪಿ ಪಕ್ಷದ ಪರ ರೋಡ್ ಶೋ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ಹಾಗಾಗಿ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಕಷ್ಟ ಎಂದು ಭಾವಿಸಿ ಮಾರ್ಚ್ 06ನೇ ತಾರೀಖಿಗೆ ಮುಂಡಲಾಗಿದೆ.

ಈ ಕುರಿತು ಬೆಳಗಾವಿಯ ವಡಂಗಾವಿಯಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಯಲ್ಲಿ ರೋಡ್ ಶೋ ಮುಗಿಸಿ ನಂತರ ಶಿವಮೊಗ್ಗದಲ್ಲಿನ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. “ಪ್ರಧಾನಿ ಹೇಳುವುದು “ಪರೀಕ್ಷಾ ಪೇ ಚರ್ಚಾ” ಮಾಡುವುದು “ಪರೀಕ್ಷಾ ಮೇ ಆಕ್ರಮಣ್”!! ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ” ಎಂದು ಕಿಡಿಕಾರಿದೆ.

ಮುಂದುವರಿದು “ಗಾಂಪರ ಗುಂಪಾದ ಬಿಜೆಪಿಗೆ ತಿಳಿದಿರುವುದು ಕಮಿಷನ್ ಲೂಟಿಯೇ ಹೊರತು ಶಿಕ್ಷಣದ ಮಹತ್ವವಲ್ಲ. ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ. ಬೆಳಗಾವಿಯಲ್ಲಿ ಪಿಯುಸಿ ಪರೀಕ್ಷೆಯನ್ನೇ ಮುಂದೂಡಿದೆ. ಪ್ರಧಾನಿಯ ಶೋಕಿಗಾಗಿ ವಿದ್ಯಾರ್ಥಿಗಳ ಭವಿಷ್ಯ ಬಲಿ ಕೊಡುವುದು ನಾಚಿಕೆಗೇಡು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿಯವರ ಭೇಟಿ ಮತ್ತು ಚುನಾವಣಾ ಪ್ರಚಾರಗಳನ್ನು ಆಯೋಜಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯವರು ಚಿಕ್ಕ ಪುಟ್ಟ ಅಭಿವೃದ್ದಿ ಕೆಲಸಗಳಿಗೆಲ್ಲ ಪ್ರಧಾನಿ ಬಂದು ಉದ್ಘಾಟನೆ ಮಾಡಲಾಗುವುದಿಲ್ಲ. ನನ್ನನ್ನು ಪ್ರಧಾನಿ ಮಾಡಿದ್ದ ಇಂತಹ ಕೆಲಸ ಮಾಡಲಿಕ್ಕಲ್ಲ ಎಂದು ಭಾಷಣದಲ್ಲಿ ಹೇಳಿದ್ದರು. ಆದರೆ ಈಗ ಚುನಾವಣೆ ಇರುವ ರಾಜ್ಯಗಳಿಗೆ ಪದೇ ಪದೇ ಭೇಟಿ ನೀಡುತ್ತಿದ್ದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡುತ್ತಿದ್ದಾರೆ. ಅವರು ನುಡಿದಂತೆ ನಡೆದಿಲ್ಲ, ಅವರು ‘ಆಷಾಡಭೂತಿತನದ ಪಿತಾಮಹ’ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿವೆ.

ಇದನ್ನೂ ಓದಿ; ಸಂಸತ್ ಬಜೆಟ್ ಅಧಿವೇಶನದಲ್ಲಿ ಸಂಸದೆ ಮೊಹುವಾ ಮೊಯಿತ್ರಾ ಅವರ ಭಾಷಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗುಜರಾತ್| 200ಕ್ಕೆ 212 ಅಂಕ ಪಡೆದ ವಿದ್ಯಾರ್ಥಿನಿ: ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಪ್ರಶ್ನಿಸಿದ ಜನ

0
ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಪರೀಕ್ಷೆಯ ಫಲಿತಾಂಶಗಳಲ್ಲಿ ಕಂಡು ಬಂದ ದೋಷಗಳು ಭಾರೀ ಚರ್ಚೆಗೆ ಕಾರಣವಾಗಿದ್ದು, ಶಿಕ್ಷಣ ವ್ಯವಸ್ಥೆಯ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ನಾಲ್ಕನೇ ತರಗತಿಯ ವಿದ್ಯಾರ್ಥಿನಿ ವಂಶಿಬೆನ್...