Homeಮುಖಪುಟರ್‍ಯಾಲಿಯ ವೈಫಲ್ಯ ಮುಚ್ಚಿ ಹಾಕಲು ‘ಜೀವ ಬೆದರಿಕೆ’ ನೆಪ ಹೇಳುತ್ತಿರುವ ಪ್ರಧಾನಿ: ಸಂಯುಕ್ತ ಕಿಸಾನ್ ಮೋರ್ಚಾ

ರ್‍ಯಾಲಿಯ ವೈಫಲ್ಯ ಮುಚ್ಚಿ ಹಾಕಲು ‘ಜೀವ ಬೆದರಿಕೆ’ ನೆಪ ಹೇಳುತ್ತಿರುವ ಪ್ರಧಾನಿ: ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಪ್ರಧಾನಿ ಮೋದಿ ತಮ್ಮ ರ್‍ಯಾಲಿ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಪಂಜಾಬ್ ಹಾಗೂ ರೈತರ ಚಳುವಳಿಗೆ ಕೆಟ್ಟ ಹೆಸರು ತರಲು, ‘ಹೇಗೋ ತನ್ನ ಜೀವ ಉಳಿದಿದೆ’ ಎಂದು ಪಂಜಾಬ್‌ ಭದ್ರತಾ ಲೋಪವನ್ನು ಬಳಸುತ್ತಿದ್ದಾರೆ ಎಂದು ರೈತ ಹೋರಾಟದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಿಸಾನ್ ಮೋರ್ಚಾ, “ಜನವರಿ 5 ರಂದು ಪಂಜಾಬ್‌ಗೆ ಪ್ರಧಾನಿ ಭೇಟಿಯ ಸುದ್ದಿ ತಿಳಿದ ನಂತರ ಮೋರ್ಚಾದ ಸಂಯೋಜಿತ 10 ರೈತ ಸಂಘಟನೆಗಳು ಅಜಯ್ ಮಿಶ್ರಾ ತೇನಿ ಬಂಧನ ಮತ್ತು ಇತರ ಬೇಡಿಕೆಗಳಿಗಾಗಿ ಸಾಂಕೇತಿಕ ಪ್ರತಿಭಟನೆಯನ್ನು ಘೋಷಿಸಿದ್ದವು.

ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಈ ಉದ್ದೇಶಕ್ಕಾಗಿ, ಪಂಜಾಬ್‌ನಾದ್ಯಂತ ಗ್ರಾಮ ಮಟ್ಟದಲ್ಲಿ ಪ್ರತಿಭಟನೆಗಳು ಹಾಗೂ ಪ್ರತಿಕೃತಿ ದಹನದ ಕಾರ್ಯಕ್ರಮಗಳನ್ನು ಜನವರಿ 2 ರಂದು ಮತ್ತು ಜನವರಿ 5 ರಂದು ಜಿಲ್ಲಾ ಹಾಗೂ ತಹಸಿಲ್ ಕೇಂದ್ರಗಳಲ್ಲಿ ಘೋಷಿಸಲಾಯಿತ್ತು. ಆದರೆ ಪ್ರಧಾನಿಯ ಭೇಟಿಯನ್ನು ತಡೆಯುವ ಅಥವಾ ಅವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಯಾವುದೇ ಕಾರ್ಯಕ್ರಮಗಳಿರಲಿಲ್ಲ” ಎಂದು ಮೋರ್ಚಾ ಹೇಳಿದೆ.

“ಪೂರ್ವನಿರ್ಧರಿತ ವೇಳಾಪಟ್ಟಿಯಂತೆ, ಜನವರಿ 5 ರಂದು ಪಂಜಾಬ್‌ನ ಪ್ರತಿ ಜಿಲ್ಲೆ ಮತ್ತು ತಹಸಿಲ್ ಕೇಂದ್ರ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲಾಯಿತು. ಫಿರೋಜ್‌ಪುರ ಜಿಲ್ಲಾ ಕೇಂದ್ರಕ್ಕೆ ತೆರಳದಂತೆ ಕೆಲ ರೈತರನ್ನು ಪೊಲೀಸರು ತಡೆದಾಗ ಹಲವು ಕಡೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಇವುಗಳಲ್ಲಿ ಪ್ರಧಾನಿಯವರ ಬೆಂಗಾವಲು ಪಡೆ ಬಂದು ನಿಲ್ಲಿಸಿ ಹಿಂತಿರುಗಿದ ಪೈರಾಯನ ಮೇಲ್ಸೇತುವೆಯೂ ಇತ್ತು. ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಪ್ರಧಾನಿ ಬೆಂಗಾವಲು ಪಡೆ ಹಾದು ಹೋಗುತ್ತದೆ ಎಂಬ ಖಚಿತ ಮಾಹಿತಿ ಇರಲಿಲ್ಲ. ಪ್ರಧಾನಿ ವಾಪಸಾದ ಬಳಿಕ ಮಾಧ್ಯಮಗಳಿಂದ ಈ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

ಪ್ರತಿಭಟನಾ ನಿರತ ರೈತರು ಪ್ರಧಾನಿ ಬೆಂಗಾವಲು ಪಡೆ ಕಡೆಗೆ ಹೋಗಲು ಯಾವುದೇ ಪ್ರಯತ್ನವನ್ನೂ ಮಾಡಿಲ್ಲ ಎಂಬುದು ಹೊಸ ವಿಡಿಯೋದಿಂದ ಸ್ಪಷ್ಟವಾಗಿದೆ. ಬಿಜೆಪಿ ಧ್ವಜದೊಂದಿಗೆ ‘ನರೇಂದ್ರ ಮೋದಿ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಗುಂಪು ಮಾತ್ರ ಆ ಬೆಂಗಾವಲು ಪಡೆಯ ಬಳಿ ತಲುಪಿತ್ತು. ಆದ್ದರಿಂದ, ಪ್ರಧಾನಿಯ ಜೀವಕ್ಕೆ ಬೆದರಿಕೆ ಎಂಬುವುದು ಸಂಪೂರ್ಣವಾಗಿ ಸುಳ್ಳು ಎಂದು ಸ್ಪಷ್ಟವಾಗುತ್ತದೆ” ಎಂದು ಕಿಸಾನ್ ಮೋರ್ಚಾ ಹೇಳಿದೆ.

“ತನ್ನ ರ್‍ಯಾಲಿಯ ವೈಫಲ್ಯವನ್ನು ಮುಚ್ಚಿಹಾಕಲು, ಪ್ರಧಾನಿ ಪಂಜಾಬ್ ರಾಜ್ಯ ಮತ್ತು ರೈತರ ಚಳುವಳಿಗೆ ಕೆಟ್ಟ ಹೆಸರು ತರಲು ‘ಹೇಗೋ ತನ್ನ ಜೀವ ಉಳಿದಿದೆ’ ಎಂಬ ನೆಪವನ್ನು ಬಳಸಿದ್ದಾರೆ ಎಂಬುದು ಅತ್ಯಂತ ವಿಷಾದದ ಸಂಗತಿಯಾಗಿದೆ. ಅಜಯ್ ಮಿಶ್ರಾ ತೇನಿಯಂತಹ ಕ್ರಿಮಿನಲ್ ಗಳು ಮಂತ್ರಿಗಳಾಗುತ್ತಾ, ಸ್ವೇಚ್ಛೆಯಿಂದ ತಿರುಗಾಡುವವರಿಂದ ಮಾತ್ರ ರೈತರಿಗೆ ‘ಜೀವ ಬೆದರಿಕೆ’ ಎಂಬುದು ಇಡೀ ದೇಶಕ್ಕೆ ಗೊತ್ತು. ದೇಶದ ಪ್ರಧಾನಿಯವರು ತಮ್ಮ ಹುದ್ದೆಯ ಘನತೆಯನ್ನು ಗಮನದಲ್ಲಿಟ್ಟುಕೊಂಡು ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಕೇಳಿಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. You people are unfit to live on earth. Better quit India and go to Pakistan. Then you will learn about India. You people should be kicked out of India. Shame shame shame…..
    ……

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...