Homeಮುಖಪುಟಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೊನ ಬಿಕ್ಕಟ್ಟನ್ನು ಬಳಸಿದ ಪ್ರಧಾನಿ: ಕುಮಾರಸ್ವಾಮಿ ಆರೋಪ

ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೊನ ಬಿಕ್ಕಟ್ಟನ್ನು ಬಳಸಿದ ಪ್ರಧಾನಿ: ಕುಮಾರಸ್ವಾಮಿ ಆರೋಪ

- Advertisement -
- Advertisement -

ಕೊರೊನ ಬಿಕ್ಕಟ್ಟನ್ನು ಪ್ರಧಾನ ಮಂತ್ರಿ ಅವರು ದುರುಪಯೋಗ ಮಾಡುತ್ತಿದ್ದಾರೆಯೆ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ತನ್ನ ಟ್ವಿಟ್ಟರ್ ಹ್ಯಾಂಡಲಿನಲ್ಲಿ “ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೋನ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ? 6 ಎಪ್ರಿಲ್ ಬಿಜೆಪಿ ಸಂಸ್ಥಾಪನಾ ದಿನ. ಇಂದಿಗೆ ಬಿಜೆಪಿಗೆ ನಲವತ್ತು ವರ್ಷ ತುಂಬುತ್ತವೆ. ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೋನ ಸಂಕಷ್ಟದ ದಿನಗಳಲ್ಲಿ ನೇರಾ ನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನವನ್ನು ಮೆರೆಯುತ್ತಿದೆಯೇ?” ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

“ದೇಶದ ಸಂಕಟವನ್ನು ಬಗೆ ಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದ ಪ್ರಧಾನಿ ಏಪ್ರಿಲ್ 5 ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

“ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ? ಜಗತ್ತು ಕೊರೊನ ಮಹಾಮಾರಿಯಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರಲ್ಲದೆ, “ಕರುಣಾಳು ಬಾ ಬೆಳಕೆ ಮುಸುಕಿದೀ ಮಬ್ಬಿನಲಿ.. ಕೈ ಹಿಡಿದು ನಡೆಸೆನ್ನನು…..” ಎಂದು ಟ್ವಿಟ್ಟರಿನಲ್ಲಿ ಕುಮಾರಸ್ವಾಮಿ ಅವರು ಬರೆದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...