Homeರಾಷ್ಟ್ರೀಯಭಾರತ್ ಜೋಡೋಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ!; ಮೇಧಾ ಪಾಟ್ಕರ್‌ ಜೊತೆ ನಡೆದಿದ್ದಕ್ಕೆ ಆಕ್ಷೇಪ

ಭಾರತ್ ಜೋಡೋಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ!; ಮೇಧಾ ಪಾಟ್ಕರ್‌ ಜೊತೆ ನಡೆದಿದ್ದಕ್ಕೆ ಆಕ್ಷೇಪ

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯಲ್ಲಿ ದೇಶದ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಅವರೊಂದಿಗೆ ಹೆಜ್ಜೆ ಹಾಕಿದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರ್ಮದಾ ಅಣೆಕಟ್ಟು ಯೋಜನೆಯ ವಿರುದ್ಧ ಮೇಧಾ ಪಾಟ್ಕರ್‌ ಭಾರಿ ಹೋರಾಟ ಸಂಘಟಿಸಿದ್ದರು. ಈ ಯೋಜನೆಯನ್ನು ಪ್ರಧಾನಿ ಮೋದಿ ಗುಜರಾತ್‌ನ ಜೀವಸೆಲೆ ಎಂದು ಬಣ್ಣಿಸಿದ್ದಾರೆ.

ಗುಜರಾತ್‌ ಚುನಾವಣೆಗೆ ಮುಂಚಿತವಾಗಿ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮೂರು ದಶಕಗಳವರೆಗೆ ನರ್ಮದಾ ಅಣೆಕಟ್ಟು ಯೋಜನೆಯನ್ನು ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಕಾಂಗ್ರೆಸ್ ಮುಖಂಡರೊಬ್ಬರು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರ್ಮದಾ ನದಿಯ ಮೇಲೆ ಸರ್ದಾರ್ ಸರೋವರ್ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಮೂರು ದಶಕಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದಕ್ಕೆ ಕಾರಣ ಮೇಧಾ ಪಟ್ಕರ್ ಸೇರಿದಂತೆ ಇತರ ಹೋರಾಟಗಾರರು ಉಂಟು ಮಾಡಿದ ಕಾನೂನು ಅಡೆತಡೆಗಳಾಗಿವೆ” ಎಂದು ಪ್ರಧಾನಿ ಹೇಳಿದ್ದಾರೆ. ಇಷ್ಟೆ ಅಲ್ಲದೆ ಮೇಧಾ ಪಾಟ್ಕರ್‌ ಅವರು ಗುಜರಾತ್‌ ರಾಜ್ಯವನ್ನು ಅಪಖ್ಯಾತಿ ಗೋಳಿಸಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ವಿರಾಮ: ಗುಜರಾತ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ

“ಕಾಂಗ್ರೆಸ್ ನಿಮ್ಮ ಬಳಿಗೆ ಮತಕ್ಕಾಗಿ ಬಂದಾಗ, ‘ನರ್ಮದಾ ಅಣೆಕಟ್ಟಿನ ವಿರುದ್ಧ ಇದ್ದವರ ಹೆಗಲ ಮೇಲೆ ಕೈ ಇಟ್ಟುಕೊಂಡು ನೀವು ಪಾದಯಾತ್ರೆಯನ್ನು ಮಾಡುತ್ತೀರಿ’ ಕೇಳಿ” ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಪ್ರಸ್ತುತ ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯ ವೇಳೆ ಈ ವಾರದ ಆರಂಭದಲ್ಲಿ ಮೇಧಾ ಪಟ್ಕರ್ ಸೇರಿಕೊಂಡಿದ್ದರು.

2017 ರಲ್ಲಿ ಉದ್ಘಾಟನೆಯಾದ ಗುಜರಾತ್‌ನ ‘ಸರ್ದಾರ್ ಸರೋವರ್ ಅಣೆಕಟ್ಟು’ ವಿರುದ್ಧ ಮೇಧಾ ಪಟ್ಕರ್ ಅವರು ‘ನರ್ಮದಾ ಬಚಾವೊ ಆಂದೋಲನ್’ ಎಂಬ ಬೃಹತ್ ಅಭಿಯಾನವನ್ನೆ ನಡೆಸಿದ್ದರು. ಈ ಅಣೆಕಟ್ಟಿನಿಂದಾಗಿ ಸಾವಿರಾರು ಬುಡಕಟ್ಟು ಕುಟುಂಬಗಳ ಜೀವನ ಕಷ್ಟಕ್ಕೆ ಒಳಗಾಗುತ್ತದೆ ಎಂದು ಅವರ ಪ್ರತಿಪಾದಿಸಿದ್ದರು. ಇದನ್ನು ಬಿಜೆಪಿ ನಿರಂತರವಾಗಿ ಟೀಕಿಸುತ್ತಿದೆ.

“ಮೇಧಾ ಪಾಟ್ಕರ್‌ ಅವರು ನರ್ಮದಾ ವಿರೋಧಿ, ಗುಜರಾತ್ ವಿರೋಧಿ ಮತ್ತು ಸೌರಾಷ್ಟ್ರ ವಿರೋಧಿಯಾಗಿದ್ದಾರೆ. ಅವರು ನರ್ಮದಾ ಅಣೆಕಟ್ಟಿನ ನಿರ್ಮಾಣವನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದ್ದಲ್ಲದೆ, ಸೌರಾಷ್ಟ್ರದ ಜನರಿಗೆ ನೀರಿನ ಬಳಕೆಯನ್ನು ವಿರೋಧಿಸಿದರು” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಹೇಳಿದ್ದರು.

“ಇಂತಹ ಜನರು ರಾಹುಲ್ ಗಾಂಧಿ ಜೊತೆಗೆ ಸೇರಿದರೆ, ಅದು ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ನಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ದ್ವೇಷ ರಾಜಕಾರಣಕ್ಕೆ ಎದುರಾಗಿ ಬಿರುಸಿನ ನಡಿಗೆ

ಗುಜರಾತಿಗಳಿಗೆ ನೀರನ್ನು ನಿರಾಕರಿಸಿದವರ ಜೊತೆಗೆ ಕಾಂಗ್ರೆಸ್ ಸಂಸದ ಕೈಜೋಡಿಸಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ರಾಹುಲ್‌ ಗಾಂಧಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

“ಮೇಧಾ ಪಟ್ಕರ್ ಅವರಿಗೆ ಯಾತ್ರೆಯಲ್ಲಿ ಮುಖ್ಯ ಸ್ಥಾನವನ್ನು ನೀಡುವ ಮೂಲಕ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಗುಜರಾತ್ ಮತ್ತು ಗುಜರಾತಿಗಳ ಬಗ್ಗೆ ಮತ್ತೆ ತಮ್ಮ ದ್ವೇಷವನ್ನು ತೋರಿಸಿದ್ದಾರೆ. ದಶಕಗಳ ಕಾಲ ಗುಜರಾತಿಗಳಿಗೆ ನೀರನ್ನು ನಿರಾಕರಿಸಿದ ಜನರೊಂದಿಗೆ ಅವರು ಕೈಜೋಡಿಸಿದ್ದಾರೆ. ಗುಜರಾತ್ ಇದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ ಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 2017 ನಲ್ಲಿ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿದರೆ ಎಲ್ಲಿ ಉದ್ಯೋಗ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...