Homeಮುಖಪುಟಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜನರಲ್ಲಿ ಅಸಮಾಧಾನ ಮನೆ ಮಾಡಿದೆ. ಜನರು ಕೇಂದ್ರ ಸರ್ಕಾರದ ವೈಫಲ್ಯದಿಂದ ಆಕ್ರೋಶಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ನಡೆಯುತ್ತಿರುವ ಕೇಂದ್ರ ಸಚಿವ ಸಂಪುಟ ಸಭೆಯು ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿರ್ವಹಣೆಯ ಕುರಿತು ಮಂತ್ರಿಗಳ ಮೌಲ್ಯಮಾಪನ ನಡೆಸಿದ್ದಾರೆ. ಕೇಂದ್ರದ ಹಲವು ಮಂತ್ರಿಗಳ ಕಾರ್ಯವೈಖರಿ ಪ್ರಧಾನಿಗಳಿಗೆ ಸಮಾಧಾನವನ್ನು ತಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯವು ಕೇಂದ್ರದ ಕೆಲವು ಮಂತ್ರಿಗಳ ಕೆಲಸದ ಕುರಿತು ಕಳೆದ ವಾರ ಮೌಲ್ಯಮಾಪನವನ್ನು ನಡೆಸಿದೆ. ಈ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಮಂತ್ರಿಗಳಿಗೆ ಕೇಳಲಾಗಿದ್ದು ಕೆಲವರು ಉತ್ತರಿಸಿಲ್ಲ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

ಕೃಷಿ ಮಂತ್ರಿ ನರೇಂದ್ರ ಸಿಂಗ್‌ ತೋಮರ್‌, ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ, ವಿದೇಶಾಂಗ ಮಂತ್ರಿ ಎಸ್‌. ಜೈಶಂಕರ್‌, ಪೆಟ್ರೋಲಿಯಂ ಮಂತ್ರಿ ಧರ್ಮೇಂದ್ರ ಪ್ರಧಾನ್‌, ಮೀನುಗಾರಿಕೆ ಮತ್ತು ಪಶು ಸಂಗೋಪನೆ ಸಚಿವ ಗಿರಿರಾಜ್‌ ಸಿಂಗ್‌, ಐಟಿ ಮಿನಿಸ್ಟರ್‌ ರವಿ ಶಂಕರ್‌ ಪ್ರಸಾದ್‌, ಆರೋಗ್ಯ ಮಂತ್ರಿ ಹರ್ಷವರ್ಧನ್ ಅವರ ಕಾರ್ಯ ನಿರ್ವಹಣೆಯನ್ನು ಪ್ರಧಾನಿಗಳು ಮೌಲ್ಯ ಮಾಪನ ಮಾಡಿದ್ದರೆನ್ನಲಾಗಿದೆ. ಈ ಮಂತ್ರಿಗಳ ಜೊತೆ ಪ್ರಧಾನಿಗಳು ನೇರವಾಗಿ ಸಮಾಲೋಚನ ಸಭೆಗಳನ್ನು ನಡೆಸಿದ್ದಾರೆ.

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಷ್ಟು ಸಚಿವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದೀರೆಂದು ಕೇಳಿದ್ದಾರೆ. ಹಾಗೇ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಯಾವ ಪ್ರಯತ್ನಗಳನ್ನು ಮಾಡುತ್ತಿದ್ದೀರಿ ಎಂದು ಕೂಡ ಪ್ರಧಾನಿ ತಮ್ಮ ಸಹುದ್ಯೋಗಿಗಳನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ ವ್ಯಾಕ್ಸಿನೇಶನ್‌ ಗೆ ಸಂಬಂಧಿಸಿದಂತೆ ವ್ಯಾಕ್ಸೀನ್‌ ಪೂರೈಕೆ ಮತ್ತು ಬೇಡಿಕೆ ಅಂತರ ಕಡಿಮೆ ಮಾಡಲು ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಏಂದು ಪ್ರಧಾನಿಗಳು ಕೇಂದ್ರ ಮಂತ್ರಿಗಳನ್ನು ಪ್ರಶ್ನಿಸಿದ್ದಾರೆನ್ನಲಾಗುತ್ತಿದೆ.

ಕೇಂದ್ರ ಸರ್ಕಾರದ ಇಲಾಖೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಮಾಡಬೇಕು. ಜನರನ್ನು ಸರ್ಕಾರ ತಲುಪಬೇಕು ಎಂದು ಪ್ರಧಾನಿಗಳು ಕಳೆದ ವಾರ ನಡೆದ ಈ ವಿಮರ್ಶ ಸಭೆಯಲ್ಲಿ ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇನ್ನು ತಮ್ಮ ಸರ್ಕಾರದ ಮೇಲಿನ ಜನಾಕ್ರೋಶವನ್ನು ತಣಿಸಲು ಬಿಜೆಪಿ ದೇಶಾದ್ಯಂತ ಪ್ರಚಾರ ಸಭೆ ನಡೆಸಲು ತೀರ್ಮಾನಿಸಿದೆ. ಮನೆ ಮನೆಗೆ ತೆರಳಿಗೆ ಕೊರೊನಾ ನಿರ್ವಹಣೆಗ ತಾವು ಮಾಡಿದ ಕೆಲಸಗಳನ್ನು ಪ್ರಚಾರಕ್ಕೆ ತರುವಂತೆ ನಿರ್ಧರಿಸಲಾಗಿದೆ.


ಇದನ್ನೂ ಓದಿ : ಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...