Homeಕರ್ನಾಟಕಕಲಬುರಗಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಆರೋಪ; ಪ್ರಾಂಶುಪಾಲೆ ವಿರುದ್ಧ ದೂರು

ಕಲಬುರಗಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಆರೋಪ; ಪ್ರಾಂಶುಪಾಲೆ ವಿರುದ್ಧ ದೂರು

- Advertisement -
- Advertisement -

ಕಲಬುರಗಿಯ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳನ್ನು ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮತ್ತು ಪ್ರಾಂಶುಪಾಲರ ನಿವಾಸದಲ್ಲಿ ತೋಟಗಾರಿಕೆ ಕೆಲಸವವನ್ನು ಮಾಡಲು ಬಳಸಿಕೊಳ್ಳಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು ಕಳೆದ 1 ವರ್ಷದಿಂದ ವಿದ್ಯಾರ್ಥಿಗಳನ್ನು ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಪಸಂಖ್ಯಾತರ ಇಲಾಖೆ ಅಡಿಯಲ್ಲಿ ಬರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಬಾಲಕನ ತಂದೆ ಎಂ.ಡಿ.ಜಮೀರ್ ಪೊಲೀಸರಿಗೆ ಪತ್ರ ಬರೆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳ ಪೋಷಕರು, ಶಾಲೆಯ ಶೌಚಾಲಯ ಸ್ವಚ್ಛತೆಗೆ ಮಕ್ಕಳ ಬಳಕೆಯ ಕುರಿತು ಪ್ರಾಂಶುಪಾಲರಾದ ಝಹೋರಾ ಜಬೀನ್‍ರಿಗೆ ಭೇಟಿ ಮಾಡಿ ವಿಚಾರಿಸಿದಾಗ, ಶಾಲಾ ಶೌಚಾಲಯ ಸ್ವಚ್ಛತೆ ಮಾಡಲು ಸಿಬ್ಬಂದಿಗಳು ಇಲ್ಲ ಎಂದು ಅವರು ಹೇಳಿದ್ದಾರೆ ಎಂದು ಎಂಡಿ ಜಮೀರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಶಾಲೆಯ ಪ್ರಾಂಶುಪಾಲರ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ಸಮಗ್ರ ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವಿದ್ ಕರಂಗಿ, ಮಕ್ಕಳನ್ನು ಗಾರ್ಡನ್‍ಗೆ ನೀರು ಹಾಕಲು ಬಳಸಿಕೊಂಡ ಸಂಬಂಧ ಪ್ರಾಂಶುಪಾಲೆ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಶಾಲೆಗೆ ಭೇಟಿ ಪರಿಶೀಲನೆ ನಡೆಸಿ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಕಳುಹಿಸಿದ್ದು, ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೋಲಾರದ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಈ ಮೊದಲು ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿತ್ತು. ಘಟನೆಯ ಪೋಟೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮುಖ್ಯ ಶಿಕ್ಷಕ ಶಂಕರಪ್ಪ ಹಾಗೂ ಇತರ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದಲ್ಲದೆ ಬೆಂಗಳೂರು ಉತ್ತರದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛತೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಘಟನೆಗೆ ಸಂಬಂಧಿಸಿ ಬಿಇಓ ಆಂಜನಪ್ಪ ಅವರ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಇದರ ಬೆನ್ನಲ್ಲಿ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಳ್ಳುವಂತಿಲ್ಲ. ಶೌಚಾಲಯ ಸ್ವಚ್ಛತೆಗೆ ಬಳಸಿದರೆ ಎಫ್‍ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಇದನ್ನು ಓದಿ: 100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....