Homeಮುಖಪುಟಖಾಸಗಿ ಆಸ್ಪತ್ರೆಗಳು 20% ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಮೀಸಲಿಡಬೇಕು: ಅರವಿಂದ್ ಕೇಜ್ರಿವಾಲ್

ಖಾಸಗಿ ಆಸ್ಪತ್ರೆಗಳು 20% ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಮೀಸಲಿಡಬೇಕು: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿಯ ಖಾಸಗಿ ಆಸ್ಪತ್ರೆಗಳು ತಮ್ಮ 20% ಹಾಸಿಗೆಗಳನ್ನು ಕೊರೊನಾ ವೈರಸ್‌ ರೋಗಿಗಳಿಗೆ ಮೀಸಲಿಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ.

ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಒಟ್ಟು 117 ಖಾಸಗಿ ಆಸ್ಪತ್ರೆಗಳಿವೆ. ಅವುಗಳಲ್ಲಿನ ಹಾಸಿಗೆಗಳಲ್ಲಿ ಕರೋನವೈರಸ್ ರೋಗಿಗಳಿಗೆ ಶೇ 20 ರಷ್ಟು ಹಾಸಿಗೆಗಳನ್ನು ಕಾಯ್ದಿರಿಸಲು ತಿಳಿಸಲಾಗಿದೆ ಎಂದಿದ್ದಾರೆ.

“COVID-19 ಚಿಕಿತ್ಸೆಗೆ ಹೋಗುವವರಿಗೆ ಇಂದಿನಿಂದ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ 2,000 ಹೊಸ ಹಾಸಿಗೆಗಳು ಲಭ್ಯವಿರುತ್ತವೆ” ಅವುಗಳನ್ನು ಬಳಸಬಹುದು ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ಲಾಕ್‌ಡೌನ್‌ನಲ್ಲಿನ ಸಡಿಲತೆ ಕಾರಣ ದೆಹಲಿಯಲ್ಲಿ COVID-19 ಪ್ರಕರಣಗಳು ಹೆಚ್ಚಿವೆ. ಆದರೆ ಮರಣ ಪ್ರಮಾಣ ಅಥವಾ ಗಂಭೀರ ಪ್ರಕರಣಗಳ ಸಂಖ್ಯೆ ವೇಗವಾಗಿ ಏರಿಕೆಯಾಗದಿದ್ದರೆ ಚಿಂತೆ ಇಲ್ಲ. ಜನರು ವೈರಸ್‌ಗೆ ತುತ್ತಾಗಿ ಚೇತರಿಸಿಕೊಂಡರೆ, ಚಿಂತೆ ಮಾಡಲು ಏನೂ ಇಲ್ಲ ಅವರು ತಿಳಿಸಿದ್ದಾರೆ.

COVID-19 ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿವೆ ಎಂದು ನಾನು ಒಪ್ಪಿಕೊಂಡರೂ ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೆಚ್ಚಿನ ಪ್ರಕರಣಗಳಲ್ಲಿ ಸೌಮ್ಯ ಲಕ್ಷಣಗಳಿವೆ ಅಥವಾ ಲಕ್ಷಣರಹಿತವಾಗಿದೆ. ಹಾಗಾಗಿ ಅಂತವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು! 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...