Homeಕರೋನಾ ತಲ್ಲಣಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.

- Advertisement -
- Advertisement -

ಕಳೆದ ಮಂಗಳವಾರ ಬೆಳಿಗ್ಗೆ 28 ವರ್ಷದ ನವೀನ್ ಕುಮಾರ್ ಎಂಬುವವರು ಸಿಕಂದರಾಬಾದ್‌ನ ಖಾಸಗೀ ಕಾರ್ಪೊರೇಟ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವಾಗ ನಿಧನರಾದರು. ಚಿಕಿತ್ಸೆಗೆ ಆಸ್ಪತ್ರೆಯು 11.5 ಲಕ್ಷ ರೂ.ಗಳನ್ನು ಶುಲ್ಕ ವಿಧಿಸಿದೆ. ಈ ಮೊದಲೇ 6.5 ಲಕ್ಷ ರೂ. ಪಾವತಿಸಿದ ರೋಗಿಯ ಕುಟುಂಬಕ್ಕೆ ಉಳಿದ ಮೊತ್ತ ಪಾವತಿಸದಿದ್ದರೆ ಮೃತ ದೇಹ ಕೊಡದಂತೆ ಆಸ್ಪತ್ರೆ ಬೆದರಿಕೆ ಹಾಕಿದೆಯೆಂದು ತೆಲುಗು ದೈನಿಕ ಸಾಕ್ಷಿ ವರದಿ ಮಾಡಿದೆ.

ಇದರಿಂದ ನೊಂದ ರೋಗಿಯ ಕುಟುಂಬವು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ ನಂತರ ಆಸ್ಪತ್ರೆಯು 20,000 ರೂ ಕಟ್ಟಿಸಿಕೊಂಡು ನವೀನ್ ಕುಮಾರ್ ಅವರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದೆ.

ತೆಲಂಗಾಣದ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಖಾಸಗೀ ಆಸ್ಪತ್ರೆಗಳು ನಡೆದುಕೊಳ್ಳುತ್ತಿರುವ ರೀತಿಗೆ ಇದೊಂದು ಉದಾಹರಣೆಯಾಗಿದೆ.

ಮತ್ತೊಂದೆಡೆ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ (GHMC) ಸುಮಾರು 90% ಪ್ರಕರಣಗಳು ವರದಿಯಾಗಿವೆ.

ಜುಲೈ 7 ರಂದು ರಾಜ್ಯವು 1879 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದರಿಂದ ರಾಜ್ಯದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 27,612 ಕ್ಕೆ ಏರಿದೆ. ಒಟ್ಟು ಸಾವಿನ ಸಂಖ್ಯೆ 313 ಕ್ಕೆ ತಲುಪಿದೆ. ಒಟ್ಟು 16,287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.

ಖಾಸಗಿ ಆಸ್ಪತ್ರೆಗಳು ಸರ್ಕಾರವು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ಕೊರೊನಾ ರೋಗಿಗಳಿಗೆ ವಿಧಿಸುತ್ತಿವೆ ಎಂದು ತೆಲಂಗಾಣ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ವಕೀಲ ಶ್ರೀಕಿಶನ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ  ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾನ್ ಮತ್ತು ನ್ಯಾಯಮೂರ್ತಿ ಬಿ. ವಿಜಯ್ಸೆನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠವು “ಅತಿಯಾದ ಶುಲ್ಕ ವಿಧಿಸಿದ್ದಕ್ಕಾಗಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಎಲ್ಲಾ ರೋಗಿಗಳಿಗೆ ಚಿಕಿತ್ಸೆ, ಬಿಲ್ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮಾರ್ಗಸೂಚಿಗಳನ್ನು ಜಾರಿಗೊಳಿಸಲು” ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ.

ಅಲ್ಲದೆ ಈ ಕುರಿತು ವಿವರಣೆ ನೀಡುವಂತೆ ಮೆಡಿಕೋವರ್ ಆಸ್ಪತ್ರೆ, ಯಶೋದಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸನ್ ಶೈನ್ ಆಸ್ಪತ್ರೆ ಮತ್ತು ಹೈದರಾಬಾದ್‌ನ ಕೇರ್ ಆಸ್ಪತ್ರೆ ಸೇರಿದಂತೆ ನಾಲ್ಕು ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗಳಿಗೆ ಕೋರ್ಟ್‌ ನೋಟಿಸ್ ನೀಡಿದೆ. ಈ ಪ್ರಕರಣದ ವಿಚಾರನೆಯನ್ನು ಜುಲೈ 14 ಕ್ಕೆ ಮುಂದೂಡಲಾಗಿದೆ.

ಜೂನ್ 15 ರಂದು ಹೊರಡಿಸಲಾದ ರಾಜ್ಯ ಸರ್ಕಾರದ ಆದೇಶದ ಪ್ರಕಾರ (ಜಿಒ 248), ಖಾಸಗಿ ಆಸ್ಪತ್ರೆಗಳು ಕೋವಿಡ್ -19 ಚಿಕಿತ್ಸೆಗೆ ವಿಧಿಸಬಹುದಾದ ಬೆಲೆಗಳ ಕುರಿತು ರಾಜ್ಯ ಸರ್ಕಾರ ಒಂದು ದರ ನಿಗದಿಪಡಿಸಿದೆ. ಅದರಂತೆ, ದಿನನಿತ್ಯದ ವಾರ್ಡ್ ಮತ್ತು ಐಸೋಲೇಷನ್ ಗೆ ಶುಲ್ಕವನ್ನು ದಿನಕ್ಕೆ 4,000 ರೂ.ಗಳು. ಹಾಗೆಯೇ ವೆಂಟಿಲೇಟರ್ ಮತ್ತು ಐಸೊಲೇಷನ್ ಐಸಿಯುಗೆ ದಿನಕ್ಕೆ 9,000 ರೂ. ನಿಗದಿಪಡಿಸಿದೆ.

ಸಾಮಾನ್ಯ ಜನರು ಕೊರೊನಾ ವೈರಸ್ ಪರೀಕ್ಷೆಗೆ ಒಳಗಾಗಲು, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳನ್ನು ತಲುಪಲು ಆಂಬ್ಯುಲೆನ್ಸ್‌ಗಾಗಿ ಹೆಣಗಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ.  ಕೊರೊನಾ ವೈರಸ್ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಹೈದರಾಬಾದ್‌ನ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಯು ಒಂದು ದಿನಕ್ಕೆ 1.19 ಲಕ್ಷ ರೂ. ದರ ವಿಧಿಸಿದೆ. ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಡಾಕ್ಟರ್ ಸುಲ್ತಾನಾ ಇದರ ಬಗ್ಗೆ ವಿವರಿಸುವ ವಿಡಿಯೋ ವೈರಲ್ ಆಗಿದೆ.

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.


ಇದನ್ನೂ ಓದಿ : ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು: ರೋಗಿಗಳ ಮೇಲೆ ದುಬಾರಿ ಚಿಕಿತ್ಸೆಯ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...