Homeಕರ್ನಾಟಕಖಾಸಗಿ ಶಾಲೆಗಳ ಪ್ರತಿಭಟನೆಯು ಶಿಕ್ಷಣ ಸಚಿವರ ಅಸಾಮರ್ಥ್ಯವನ್ನು ತೋರಿಸುತ್ತದೆ: ಸಿದ್ದರಾಮಯ್ಯ

ಖಾಸಗಿ ಶಾಲೆಗಳ ಪ್ರತಿಭಟನೆಯು ಶಿಕ್ಷಣ ಸಚಿವರ ಅಸಾಮರ್ಥ್ಯವನ್ನು ತೋರಿಸುತ್ತದೆ: ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಕಾಲದಲ್ಲಿ ರಾಜ್ಯದ ಶಿಕ್ಷಣ ವ್ಯವಸ್ಥೆ ಹದಗೆಟ್ಟು ಹೋಗಿದೆ. ರಾಜ್ಯಸರ್ಕಾರದ ಅನಿಶ್ಚಿತ ನಿಲುವುಗಳು ಮತ್ತು ಹೊಂದಾಣಿಕೆಯ ರಾಜಕೀಯಕ್ಕೆ ಅಮಾಯಕ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಶಾಲಾ ಶುಲ್ಕವನ್ನು ಶೇ. 30 ರಷ್ಟು ಕಡಿತಗೊಳಿಸಬೇಕು ಎಂದು ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾವಿರಾರು ಖಾಸಗಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಬೆಂಗಳೂರಿನಲ್ಲಿ ನಿನ್ನೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಖಾಸಗಿ ಶಾಲೆಗಳು ಪೋಷಕರೊಂದಿಗೆ ಚರ್ಚಿಸಿಕೊಂಡು ಪರ್ಯಾಯ ಸೂತ್ರವೊಂದನ್ನು ತಂದರೆ ನಮ್ಮದು ಏನೂ ಅಭ್ಯಂತರವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ರವರು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಶುಲ್ಕ ಕಡಿತದ ಸರ್ಕಾರಿ ಆದೇಶವನ್ನು ಧಿಕ್ಕರಿಸಿರುವ ಖಾಸಗಿ ಶಾಲೆಗಳ ನಿಲುವಿನ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರು ಅಸಹಾಯಕತೆಯನ್ನು ವ್ಯಕ್ತಪಡಿಸಿರುವುದು ಅವರ ಅಸಾಮರ್ಥ್ಯವನ್ನಷ್ಟೇ ತೋರಿಸುತ್ತದೆ” ಎಂದು ಟೀಕಿಸಿದ್ದಾರೆ.

ಶಿಕ್ಷಣ ಸಚಿವರು ಖಾಸಗಿ ಶಾಲಾ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ಪೋಷಕರ ಸಭೆ ಕರೆದು ಈಗಿನ ಬಿಕ್ಕಟ್ಟನ್ನು ಶೀಘ್ರವಾಗಿ ಇತ್ಯರ್ಥಗೊಳಿಸಿ ವಿದ್ಯಾರ್ಥಿಗಳನ್ನು ಈಗಿನ ಅತಂತ್ರ ಸ್ಥಿತಿಯಿಂದ ಮುಕ್ತಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಹಾವಳಿಯಿಂದಾಗಿ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳೆಲ್ಲರೂ ಕಷ್ಟ-ನಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೊಡು-ಕೊಳ್ಳುವಿಕೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಯಡಿಯೂರಪ್ಪ ಮತ್ತು ಸುರೇಶ್ ಕುಮಾರ್ ಒಂದು ವರ್ಗದ ಹಿತೈಷಿಯಂತೆ ವರ್ತಿಸಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: 30% ಶುಲ್ಕ ಕಡಿತ: ಸರ್ಕಾರದ ವಿರುದ್ಧ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉಜ್ಜಯಿನಿ ಶಾಹಿ ಮಸೀದಿ ಧ್ವಂಸ ಮೂರನೇ ದಿನಕ್ಕೆ: 14 ಮುಸ್ಲಿಮರ ಬಂಧನ, 30ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯ ಐತಿಹಾಸಿಕ ಶಾಹಿ ಮಸೀದಿ ಧ್ವಂಸ ಪ್ರಕರಣ ಮೂರನೇ ದಿನಕ್ಕೂ ಮುಂದುವರಿದಿದ್ದು, ಮಸೀದಿಯ ಸುತ್ತಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮತ್ತು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಸೋಮವಾರ ಮಸೀದಿಯ ನೇತಾಡುವ ಚಪ್ಪಡಿಯ ಒಂದು...

ಹೈದರಾಬಾದ್ ವಿವಿ ಚುನಾವಣೆ: ABVPಗೆ ಮುಖಭಂಗ, ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಭರ್ಜರಿ ಜಯ

ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ (HCU) ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಬಲಪಂಥೀಯ ವಿದ್ಯಾರ್ಥಿ ಸಂಘಟನೆ ಎಬಿವಿಪಿಗೆ ಭಾರಿ ಹಿನ್ನಡೆಯಾಗಿದೆ. ಎಡಪಂಥೀಯ ಹಾಗೂ ದಲಿತ-ಬಹುಜನ ವಿದ್ಯಾರ್ಥಿ ಸಂಘಟನೆಗಳನ್ನೊಳಗೊಂಡ ಐಸಾ-ಎಎಸ್‌ಎ-ಡಿಎಸ್‌ಯು-ಎಸ್‌ಎಫ್‌ಐ-ಟಿಎಸ್‌ಎಫ್...

ಗ್ಯಾನೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ: 6 ಕಾಂಗ್ರೆಸ್ ನಾಯಕರ ಬಂಧನ, 20 ಕಾರ್ಯಕರ್ತರ ವಿರುದ್ಧ ಕೊಲೆ ಯತ್ನದ ಆರೋಪ

ಆಗ್ರಾ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಆಗ್ರಾದಲ್ಲಿರುವ ಪೋಷಕರ ಪೈತೃಕ ನಿವಾಸದ ಹೊರಗೆ ನಡೆದ ಕಾಂಗ್ರೆಸ್ ಪ್ರತಿಭಟನೆ ಇದೀಗ ಗಂಭೀರ ಕಾನೂನು ಸಂಘರ್ಷಕ್ಕೆ ತಿರುಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ...

₹92,000 ಕೋಟಿ ವೆಚ್ಚದ ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ಕೋರಿದ ಕೇಂದ್ರ ಸರ್ಕಾರ!

ಅಂದಾಜು ₹92,000 ಕೋಟಿ ವೆಚ್ಚದ ವಿವಾದಾತ್ಮಕ 'ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ'ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕಾನೂನಾತ್ಮಕವಾಗಿ ಅತ್ಯಂತ ಅಚ್ಚರಿಯ ಉಲ್ಟಾ ನಿಲುವು ತಳೆದಿದೆ. ಈ ಯೋಜನೆಯಲ್ಲಿ ಅರಣ್ಯ ಹಕ್ಕುಗಳ ಕಾಯಿದೆ...

SIR | ಫಾರಂ-8ರ ಬದಲು ಫಾರಂ-6 ಸಲ್ಲಿಸುವಂತೆ ಒತ್ತಡ : ಒಂದೇ ಕುಟುಂಬದ 6 ಜನರ ವೋಟ್ ಡಿಲೀಟ್; ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ತಪರಾಕಿ

ಗೋವಾದ ಸಾಂತಾ ಕ್ರೂಝ್ ಮತಕ್ಷೇತ್ರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ, ಒಂದು ಕುಟುಂಬದ ಆರು ಸದಸ್ಯರು ತಮ್ಮ ವಿಳಾಸ ಬದಲಾವಣೆಯನ್ನು ತಿಳಿಸಲು 'ಫಾರ್ಮ್ 8' ಸಲ್ಲಿಸಿದ್ದರೂ ಸಹ, ಮತದಾರರ ಪಟ್ಟಿಯಿಂದ...

ಚುನಾವಣಾ ಆಯೋಗದ ವಿರುದ್ಧ ವ್ಯಂಗ್ಯಚಿತ್ರ: ಸತೀಶ್ ಆಚಾರ್ಯ Instagram ಖಾತೆಗೆ ಭಾರತದಲ್ಲಿ ನಿರ್ಬಂಧ; ಮಂಜುಲ್‌ಗೂ ತಡೆ

ನವದೆಹಲಿ: ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ವ್ಯಂಗ್ಯಚಿತ್ರಗಳನ್ನು ಪ್ರಕಟಿಸಿದ್ದ ರಾಜಕೀಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರ Instagram ಖಾತೆಗೆ ಭಾರತದಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ವೇಳೆ ಮತ್ತೊಬ್ಬ...

ಎಸ್‌ಐಆರ್ ಹಾಗೂ ಚುನಾವಣಾ ಆಯೋಗದ ಅಕ್ರಮ ಖಂಡಿಸಿ ‘ಇಂಡಿಯಾ’ ಮೈತ್ರಿಕೂಟದ ರಾಷ್ಟ್ರವ್ಯಾಪಿ ಅಭಿಯಾನ: ಪ್ರಜಾಪ್ರಭುತ್ವ ರಕ್ಷಣೆಗೆ ವಿಪಕ್ಷಗಳಿಂದ 6 ಪ್ರಮುಖ ಬೇಡಿಕೆಗಳು!

ಚುನಾವಣಾ ಆಯೋಗದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ಅಕ್ರಮಗಳು, 'ಫಾರ್ಮ್ 6' ನಮೂನೆಯಲ್ಲಿ ಸಾಫ್ಟ್‌ವೇರ್ ಮೂಲಕ ತಂದಿದ್ದ ಅಡೆತಡೆಗಳು ಹಾಗೂ ಮತದಾರರ ಪಟ್ಟಿಯಿಂದ ಅರ್ಹರ ಹೆಸರು ರದ್ದುಗೊಳಿಸಿರುವ ಕ್ರಮಗಳನ್ನು ಖಂಡಿಸಿ 'ಇಂಡಿಯಾ'...

ಮ್ಯಾನ್ಮಾರ್‌ನಲ್ಲಿ ಜನನಿಬಿಡ ಮಾರುಕಟ್ಟೆ ಮೇಲೆ ವೈಮಾನಿಕ ದಾಳಿ: 50ಕ್ಕೂ ಹೆಚ್ಚು ಸಾವು; ಗಡೀಪಾರು ನಿಲ್ಲಿಸಲು ಮಲೇಷ್ಯಾಕ್ಕೆ ವಿಶ್ವಸಂಸ್ಥೆ ಕರೆ

ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ಜನನಿಬಿಡ ಮಾರುಕಟ್ಟೆಯ ಮೇಲೆ ನಡೆದ ಮಿಲಿಟರಿ ವೈಮಾನಿಕ ದಾಳಿಯನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ವೋಲ್ಕರ್ ಟರ್ಕ್ ತೀವ್ರವಾಗಿ ಖಂಡಿಸಿದ್ದಾರೆ. ಕ್ಯುಕ್ತಾವ್ ಪಟ್ಟಣದಲ್ಲಿ ನಡೆದ ಈ ದಾಳಿಯಲ್ಲಿ ಮಹಿಳೆಯರು...

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಶಿಕ್ಷಣ ಕ್ಷೇತ್ರದಲ್ಲಿ RSS ಕಾರ್ಯಸೂಚಿಗಳನ್ನು ತಡೆಯುವಂತೆ ಖರ್ಗೆ-ರಾಹುಲ್ ಸೂಚನೆ

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಶಿಕ್ಷಣ ಕ್ಷೇತ್ರದಲ್ಲಿ ಆರ್‌ಎಸ್‌ಎಸ್ ಹಾಗೂ ಸಂಘ ಪರಿವಾರದ ವಿಭಜಕ ಮತ್ತು ಕೋಮು ಕಾರ್ಯಸೂಚಿಯನ್ನು ಜಾರಿಗೆ ತರುವುದನ್ನು ತಕ್ಷಣವೇ ತಡೆಯಬೇಕು ಹಾಗೂ ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ, ಜಾತ್ಯತೀತ ಶಿಕ್ಷಣ ನೀತಿಗಳನ್ನು...

ಎನ್‌ಸಿಇಆರ್‌ಟಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ಸೆಂಗೋಲ್‌’ ಸೇರ್ಪಡೆ

ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾದ ಸೆಂಗೋಲ್‌ (ರಾಜದಂಡ) ಈಗ ಎನ್‌ಸಿಇಆರ್‌ಟಿಯ 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಭಾಗವಾಗಿದೆ. ಪಠ್ಯಪುಸ್ತಕವು ಇದನ್ನು "ಆಡಳಿತ ಮತ್ತು ಉತ್ತಮ ಆಡಳಿತದ ಸಾಂಸ್ಕೃತಿಕ ಸಂಕೇತ" ಎಂದು...