Homeಮುಖಪುಟತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದಾಖಲಾದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಮೂಲದ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪತ್ರಕರ್ತೆ ಪ್ರಿಯಾ ರಮಣಿ, “ತಮ್ಮದಲ್ಲದ ತಪ್ಪಿಗೆ ಜೈಲಿನಲ್ಲಿರುವ ದಿಶಾ ರವಿ ಮತ್ತು ಇತರ ಮಹಿಳೆಯರ ಪರವಾಗಿ ನಮ್ಮ ಚಿಂತನೆಗಳಿರುತ್ತವೆ” ಎಂದು ಹೇಳಿದ್ದಾರೆ.

ಈ ಕುರಿತು ಪ್ರಿಯಾ ರಮಣಿಯವರ ಹೇಳಿಕೆಯನ್ನು ಎನ್‌ಡಿಟಿವಿ ವರದಿ ಮಾಡಿದೆ. ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ದಿಶಾ ರವಿಯನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ
ಪ್ರಿಯಾ ರಮಣಿ ಯಾರು?

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದಾಖಲಾದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ಪ್ರಿಯಾ ರಮಣಿ ಮೇಲಿನ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿರುವ ಕೋರ್ಟ್ “ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಕ್ಕಾಗಿ ಮಹಿಳೆಯರಿಗೆ ಶಿಕ್ಷಿಸಲು ಸಾಧ್ಯವಿಲ್ಲ” ಎಂದು ಹೇಳಿತ್ತು.

2018 ರಲ್ಲಿ ಭಾರಿ ಸದ್ದು ಮಾಡಿದ್ದ #MeToo ವಿವಾದದ ಸಮಯದಲ್ಲಿ, ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ವಿರುದ್ದ ಪತ್ರಕರ್ತೆ ಪ್ರಿಯಾ ರಮಣಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆದರೆ ಪತ್ರಕರ್ತೆಯ ವಿರುದ್ಧ ಅಕ್ಬರ್‌ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ಕುರಿತು ದೆಹಲಿ ಕೋರ್ಟ್ ವಿಚಾರಣೆ ನಡೆಸಿ ನಿನ್ನೆ ತೀರ್ಪು ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಚಿವರಾಗಿದ್ದ ಅಕ್ಬರ್ ಅವರು ರಮಣಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದಾದ ಎರಡು ದಿನಗಳ ನಂತರ, ಅಕ್ಟೋಬರ್ 17, 2018 ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

“ಭಾರತೀಯ ಸಂವಿಧಾನವು ಮಹಿಳೆಯರಿಗೆ ತನ್ನ ಕುಂದುಕೊರತೆಗಳನ್ನು ಯಾವುದೇ ವೇದಿಕೆಯ ಮುಂದೆ ಮತ್ತು ಯಾವುದೇ ಸಮಯದಲ್ಲಿ ಮಂಡಿಸಲು ಅನುವು ಮಾಡಿಕೊಡುತ್ತದೆ “ಎಂದು ನ್ಯಾಯಾಧೀಶರು ತೀರ್ಪಿನ ವೇಳೆ ತಿಳಿಸಿದ್ದಾರೆ.

ಪತ್ರಕರ್ತೆ ಪ್ರಿಯಾ ರಮಣಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು 2018 ರ ಅಕ್ಟೋಬರ್‌ 15 ರಂದು ಅಕ್ಬರ್‌ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. 2021 ರ ಫೆಬ್ರವರಿ 1 ರಂದು ಎರಡು ಕಡೆಯ ವಾದಗಳನ್ನು ಆಲಿಸಿದ್ದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಮುಚ್ಚಿದ ಬಾಗಿಲುಗಳ ಹಿಂದೆ ಹೆಚ್ಚಿನ ಬಾರಿ ಲೈಂಗಿಕ ಕಿರುಕುಳ ನಡೆಯುತ್ತಿರುವುದನ್ನು ನಿರ್ಲಕ್ಷಿಸಲಾಗುವುದಿಲ್ಲ … ದುರುಪಯೋಗಕ್ಕೆ ಒಳಗಾಗುವ ಹೆಚ್ಚಿನ ಮಹಿಳೆಯರು ತಮ್ಮ ಮೇಲಿನ ಕಳಂಕ ಮತ್ತು ದಾಳಿಯಿಂದಾಗಿ ಹೆಚ್ಚಾಗಿ ಮಾತನಾಡಲು ಸಾಧ್ಯವಿಲ್ಲ” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಹೇಳಿದ್ದಾರೆ.

ಲೈಂಗಿಕ ದಾಳಿ ಮತ್ತು ಕಿರುಕುಳಕ್ಕೆ ಒಳಗಾದ ಸಂತ್ರಸ್ಥೆಯ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಇದು 20 ವರ್ಷದ ಹಿಂದಿನ ಪ್ರಕರಣವಾಗಿರಬಹುದು. ಮಹಿಳೆಯು ತನಗಾದ ಅನ್ಯಾಯದ ವಿರುದ್ಧ ದಶಕಗಳ ನಂತರವೂ ದನಿಯೆತ್ತುವ ಹಕ್ಕು ಹೊಂದಿದ್ದಾಳೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಎಂ.ಜೆ. ಅಕ್ಬರ್ ಏಷ್ಯನ್ ಏಜ್ ಮುಖ್ಯಸ್ಥರಾಗಿದ್ದಾಗ, ಸುಮಾರು 20 ವರ್ಷಗಳ ಹಿಂದೆ ಈ ಲೈಂಗಿಕ ದುಷ್ಕೃತ್ಯ ನಡೆದಿದೆ ಎಂದು ಪತ್ರಿಕೆಯ ಲೇಖನವೊಂದರಲ್ಲಿ ಪ್ರಿಯಾ ರಮಣಿ ಬರೆದಿದ್ದರು. ಉದ್ಯೋಗ ಸಂದರ್ಶನಕ್ಕಾಗಿ ನನ್ನನ್ನು ತಮ್ಮ ಹೋಟೆಲ್ ಮಲಗುವ ಕೋಣೆಗೆ ಕರೆದು ಅಕ್ಬರ್ ಅನುಚಿತವಾಗಿ ವರ್ತಿಸಿದ್ದರು ಎಂದು ರಮಣಿ ಆರೋಪಿಸಿದ್ದರು. ಅವರ ಲೇಖನದ ಪರಿಣಾಮವಾಗಿ, ಸುಮಾರು ಒಂದು ಡಜನ್ ಮಹಿಳೆಯರು ಮಾಜಿ ಸಂಪಾದಕ ಅಕ್ಬರ್ ವಿರುದ್ಧ ಇದೇ ರೀತಿಯ ಆರೋಪಗಳನ್ನು ಹೊರಿಸಿದ್ದರು.


ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...