Homeಕರ್ನಾಟಕಬಿಜೆಪಿ ನಾಯಕರು ಆತ್ಮಗೌರವ ಬೀದಿಪಾಲು ಮಾಡಿಕೊಂಡಿದ್ದಾರೆ: ಬ್ಯಾರಿಕೇಡ್ ಹಿಂದೆ ನಿಂತ ಪೋಟೊ ವೈರಲ್ ಕುರಿತು...

ಬಿಜೆಪಿ ನಾಯಕರು ಆತ್ಮಗೌರವ ಬೀದಿಪಾಲು ಮಾಡಿಕೊಂಡಿದ್ದಾರೆ: ಬ್ಯಾರಿಕೇಡ್ ಹಿಂದೆ ನಿಂತ ಪೋಟೊ ವೈರಲ್ ಕುರಿತು ಖರ್ಗೆ ಟೀಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಭೇಟಿ ವೇಳೆ ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿಯ ನಾಯಕರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು   ಚಂದ್ರಯಾನ-3 ಯೋಜನೆಗಾಗಿ ಶ್ರಮಿಸಿದ್ದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿನ ಇಸ್ರೋ ಕೆಂದ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮೋದಿಗೆ ಬ್ಯಾರಿಕೇಡ್ ಹಿಂದೆ ನಿಂತು ಬಿಜೆಪಿ ನಾಯಕರು ಕೈಬೀಸುವ ಪೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಕುರಿತು X (ಟ್ವಿಟ್ಟರ್) ನಲ್ಲಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ,  ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ.  ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದು ಬರೆದಿದ್ದಾರೆ.

ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗುವುದೇ? ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಇದನ್ನು ಓದಿ: ಹಿಂಸಾಚಾರ ಪೀಡಿತ ನುಹ್‌ನಲ್ಲಿ ಶೋಭಾ ಯಾತ್ರೆಗೆ ಕರೆ; ಇಂಟರ್ನೆಟ್,  SMS ಸೇವೆಗಳು ಸ್ಥಗಿತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ...

0
ಮೇ 2,2024ರಂದು ಗುಜರಾತ್‌ನ ಸುರೇಂದ್ರನಗರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ " ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದೆ" ಎಂದಿದ್ದಾರೆ. "ಕಾಂಗ್ರೆಸ್‌ನ ಪ್ರಣಾಳಿಕೆ...