Homeಕರ್ನಾಟಕಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ತಮ್ಮ ಸಂಪರ್ಕದಲ್ಲಿ 40-45 ಕಾಂಗ್ರೆಸ್ ಶಾಸಕರು ಇದ್ದಾರೆ ಎಂದು ಹೇಳಿರುವುದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅದಕ್ಕೆ ಪ್ರತಿಯಾಗಿ ಬಿಎಲ್ ಸಂತೋಷ್ ಅವರು ಆಪರೇಶ್ನ ಕಮಲದ ಸೂಚನೆ ನೀಡಿದ್ದಾರೆ.

ಸದ್ಯ ಸಂತೋಷ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು ಒಂದು ಹೆಜ್ಜೆ ಮುಂದೆ ಹೋಗಿ ಬಿಎಲ್ ಸಂತೋಷ್ ಅವರಿಗೆ ಎರಡು ಪ್ರಮುಖ ಸವಾಲುಗಳನ್ನು ಹಾಕಿದ್ದಾರೆ.

ಬಿಎಲ್ ಸಂತೋಷ್ ಹೇಳಿಕೆಗೆ ಟ್ವೀಟ್ ಮೂಲಕ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ, ”ಬಿಎಲ್ ಸಂತೋಷ್ ಅವರಿಗೆ ಒಂದು ಸವಾಲು. ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ. ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ” ಎಂದಿದ್ದಾರೆ.

”ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು, ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ. ಈ ಸವಾಲನ್ನು ಸ್ವೀಕರಿಸುವ ದಮ್ಮು, ತಾಕತ್ತು ಇದೆಯೇ?” ಎಂದು ಬಿಎಲ್ ಸಂತೋಷ್ ಅವರಿಗೆ ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ.

ಬಿಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಎಲ್ಲ ಶಾಸಕರನ್ನೂ ಸಂಪರ್ಕದಲ್ಲಿ ಇಟ್ಟುಕೊಳ್ಳಲಿ, ಬಹಳ ಸಂತೋಷ” ಎಂದಿದ್ದಾರೆ.

”ಬಿಜೆಪಿ ಶಾಸಕರೇ ನಮ್ಮ ಜೊತೆಗೆ ಬರುತ್ತಾ ಇದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಮುಳುಗಿ ಹೋದ ಹಡುಗು. ಸೀ ಡೈವರ್ಸ್ ತರಹ ಸಂತೋಷ್ ಮುಳುಗಿ ಅದನ್ನು ಮೇಲೆತ್ತಲಿ” ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...