HomeಮುಖಪುಟKPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮದಿಂದಾಗಿ ಪ್ರಾಮಾಣಿಕವಾಗಿ ಓದುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವುದನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.

ಗೃಹ ಸಚಿವನಾಗಿ ನಾನಿರುವಾಗ, ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷ್ಯಗಳನ್ನು ದುರ್ಬಲಗೊಳಿಸಲು ಅಥವಾ ತನಿಖೆಯ ಹಾದಿ ತಪ್ಪಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ನಿಟ್ಟಿನಲ್ಲಿ ತನಿಖಾ ಸಂಸ್ಥೆಗಳಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದರು.

ಪರೀಕ್ಷಾ ಅಕ್ರಮ ತಡೆಗೆ ಬದ್ಧತೆ:

ಹಿಂದೆ ತಾವು ವಿರೋಧ ಪಕ್ಷದಲ್ಲಿದ್ದಾಗಲೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಮತ್ತು ಪಾರದರ್ಶಕತೆ ತರುವ ಉದ್ದೇಶದಿಂದ ಖಾಸಗಿ ಮಸೂದೆಯನ್ನು ಮಂಡಿಸಿದ್ದೆ ಎಂದು ನೆನಪಿಸಿದ ಸಚಿವರು, ಇದೀಗ ನಮ್ಮದೇ ಸರ್ಕಾರ ಅಸ್ತಿತ್ವದಲ್ಲಿದ್ದು, ಪರೀಕ್ಷಾ ಅಕ್ರಮ ತಡೆಗೆ ಸಂಬಂಧಿಸಿದ ಬಲವಾದ ಮಸೂದೆಯನ್ನು ಜಾರಿಗೆ ತರಲಾಗಿದೆ.

ರಾಜ್ಯದಲ್ಲಿ ಪ್ರಸ್ತುತ 70 ಸಾವಿರ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದ್ದು, ಸುಮಾರು 35 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ವಿವಿಧ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಇಷ್ಟೊಂದು ದೊಡ್ಡ ಸಂಖ್ಯೆಯ ಅಭ್ಯರ್ಥಿಗಳ ಮತ್ತು ಯುವಜನರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಮತ್ತು ಆ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದರು.

ಕೇಂದ್ರದ ನಿಯಮಾವಳಿಯಂತೆಯೇ ಬರ ಘೋಷಣೆ:

ಕಲಬುರಗಿ ಜಿಲ್ಲೆಯ ಕೇವಲ ಐದು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬರ ಘೋಷಣೆ ಮಾಡುವುದು ರಾಜ್ಯ ಸರ್ಕಾರದ ಇಷ್ಟದ ಮ್ಯಾಟರ್ ಅಲ್ಲ. ಇದು ಎನ್‌ಡಿಆರ್‌ಎಫ್‌ (NDRF) ನಿಯಮಾವಳಿಯ ಪ್ರಕಾರವೇ ನಡೆಯಬೇಕಾಗುತ್ತದೆ. ಈ ನಿಯಮಾವಳಿಯನ್ನು ಕೇಂದ್ರ ಸರ್ಕಾರವೇ ರೂಪಿಸಿದೆ ಎಂದು ತಿಳಿಸಿದರು.

ಆದ್ದರಿಂದ, ಕೇಂದ್ರ ಸರ್ಕಾರದ ನಿಯಮಗಳ ಅಡಿಯಲ್ಲೇ ನಾವು ಬರ ಘೋಷಣೆ ಮಾಡಿದ್ದೇವೆ. ವಿರೋಧ ಪಕ್ಷದವರು ಈ ವಿಷಯದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ಕಲಬುರಗಿಯಲ್ಲಿ ಅಥವಾ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಬದಲು, ಕೇಂದ್ರ ಸರ್ಕಾರದ ಮುಂದೆ ಹೋಗಿ ಬರ ಘೋಷಣೆ ಕುರಿತ ಹಳೆಯ ನಿಯಮಾವಳಿಗಳಲ್ಲಿ ಅಗತ್ಯ ಬದಲಾವಣೆ ತರಲು ಒತ್ತಾಯಿಸಿ ಪ್ರತಿಭಟನೆ ನಡೆಸಲಿ ಎಂದು ಸಚಿವರು ತಿರುಗೇಟು ನೀಡಿದರು.

ಜೈಲು ಸುಧಾರಣಾ ವರದಿ ಅನುಷ್ಠಾನಕ್ಕೆ ಕ್ರಮ:

ಕರ್ನಾಟಕದ ಕಾರಾಗೃಹಗಳ ಆಡಳಿತ, ಸುರಕ್ಷತೆ ಹಾಗೂ ಸುಧಾರಣೆಗಳಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ಸಲ್ಲಿಸಿರುವ ವರದಿಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ಈಗಾಗಲೇ ರಾಜ್ಯದ ಜೈಲುಗಳ ಪರಿಸ್ಥಿತಿ ಕುರಿತು ವಿವರವಾದ ವರದಿಯನ್ನು ಸಲ್ಲಿಸಿದೆ. ಈ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ವರದಿಯಲ್ಲಿರುವ ಪ್ರಮುಖ ಮತ್ತು ಸೂಕ್ತ ಶಿಫಾರಸುಗಳನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...