Homeಮುಖಪುಟಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

- Advertisement -
- Advertisement -

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಸಾಲು ಸಾಲು ಪ್ರಶ್ನೆಗಳನ್ನು ಎತ್ತಿರುವ ಅವರು, ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಹಳೆಯ ಪುಟಗಳನ್ನು ಕೆದಕಿ ಕುಮಾರಸ್ವಾಮಿ ಅವರನ್ನು ಕುಟುಕಿದ್ದಾರೆ.

ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಜವಾಬ್ದಾರಿಯಿಂದ ಮಾತನಾಡಬೇಕು. ವಿಷಯಾಂತರ ಮಾಡುವ ಬದಲು ನೇರ ಉತ್ತರ ನೀಡಬೇಕು ಎಂದು ಆಗ್ರಹಿಸಿರುವ ಪ್ರಿಯಾಂಕ್ ಖರ್ಗೆ, ಕೆಪಿಎಸ್‌ಸಿ ಸುತ್ತ ಹೆಣೆದುಕೊಂಡಿರುವ ಹಲವು ಸಂಶಯಾಸ್ಪದ ನಡೆಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿದ್ದಾರೆ.

‘ತಾವು ಮಾಡಿದರೆ ಮೃಷ್ಟಾನ್ನ, ಬೇರೆಯವರು ಮಾಡಿದರೆ ಚಿತ್ರಾನ್ನವೇ?’

2011ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಆ ನೇಮಕಾತಿಯನ್ನೇ ರದ್ದುಗೊಳಿಸಿದ್ದನ್ನು ಪ್ರಿಯಾಂಕ್ ಖರ್ಗೆ ಸ್ಮರಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ಮನವಿಯನ್ನೂ ನ್ಯಾಯಾಲಯ ವಜಾಗೊಳಿಸಿತ್ತು. ಹೀಗಿದ್ದರೂ, ಅಕ್ರಮದ ಆರೋಪ ಹೊತ್ತಿದ್ದ ಅಭ್ಯರ್ಥಿಗಳನ್ನು ನೇಮಕ ಮಾಡುವಂತೆ ಅಂದಿನ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಶಿಫಾರಸು ಪತ್ರ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದಾರೆ.

“ನ್ಯಾಯಾಲಯವೇ ಆಯ್ಕೆ ಪ್ರಕ್ರಿಯೆಯ ಅಕ್ರಮವನ್ನು ಎತ್ತಿಹಿಡಿದ ಮೇಲೆಯೂ ಆ ಅಭ್ಯರ್ಥಿಗಳ ಪರವಾಗಿ ಶಿಫಾರಸು ಮಾಡಲು ಕುಮಾರಸ್ವಾಮಿ ಅವರಿಗೆ ಇದ್ದ ಹಿತಾಸಕ್ತಿ ಏನಿತ್ತು? ಬೇರೆಯವರು ಮಾಡಿದರೆ ತಪ್ಪು, ತಮ್ಮವರು ಮಾಡಿದರೆ ಸರಿ ಎನ್ನುವಂತೆ ‘ಕುಮಾರಸ್ವಾಮಿ ಮಾಡಿದರೆ ಮೃಷ್ಟಾನ್ನ, ಬೇರೆಯವರು ಮಾಡಿದರೆ ಚಿತ್ರಾನ್ನವೇ?'” ಎಂದು ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಜೈಲಿನಲ್ಲಿದ್ದ ಕೆಪಿಎಸ್‌ಸಿ ಅಧ್ಯಕ್ಷರ ಭೇಟಿ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕೆಪಿಎಸ್‌ಸಿಯ ಹಿಂದಿನ ಅಧ್ಯಕ್ಷರೊಬ್ಬರನ್ನು ಕುಮಾರಸ್ವಾಮಿ ಖುದ್ದಾಗಿ ಹೋಗಿ ಭೇಟಿಯಾಗಿದ್ದರು ಎಂಬ ವಿಚಾರವನ್ನೂ ಖರ್ಗೆ ಪ್ರಸ್ತಾಪಿಸಿದ್ದಾರೆ. ಜೈಲಿನಲ್ಲಿದ್ದ ಕೆಪಿಎಸ್‌ಸಿ ಅಧ್ಯಕ್ಷರನ್ನು ಭೇಟಿ ಮಾಡುವ ಅಗತ್ಯ ಕುಮಾರಸ್ವಾಮಿ ಅವರಿಗೆ ಏನಿತ್ತು? ಪ್ರಕರಣದಲ್ಲಿ ತಮ್ಮ ಹೆಸರು ಹೊರಬರದಂತೆ ನೋಡಿಕೊಳ್ಳಲು ಅಥವಾ ಬೆದರಿಕೆ ಹಾಕಲು ಈ ಭೇಟಿ ನಡೆದತ್ತೇ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಕುಮಾರಸ್ವಾಮಿ ಅವರ ಸಂಬಂಧಿಕ ಅಧಿಕಾರಿಯೊಬ್ಬರ ನೇಮಕಾತಿಯನ್ನು ರದ್ದುಪಡಿಸಿದ್ದರೂ, ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT) ಮೂಲಕ ತಡೆಯಾಜ್ಞೆ ತಂದು ಐಎಎಸ್ ಹುದ್ದೆಗೆ ಬಡ್ತಿ ದೊರೆಯುವಂತೆ ಮಾಡಿದ್ದು ಯಾರ ಪ್ರಭಾವದಿಂದ ಎಂಬ ಸತ್ಯವನ್ನೂ ಕುಮಾರಸ್ವಾಮಿ ಬಹಿರಂಗಪಡಿಸಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಅಕ್ರಮ ನೇಮಕಾತಿಗೆ ಶಿಫಾರಸು ಮಾಡಿದ ದಾಖಲೆ ಹೊಂದಿರುವವರು, ಈಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಯನ್ನು ಪ್ರಶ್ನಿಸುತ್ತಿರುವುದು ದೊಡ್ಡ ವಿರೋಧಾಭಾಸ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ. ಕೆಪಿಎಸ್‌ಸಿ ಸುತ್ತಲಿನ ರಾಜಕೀಯ ಆರೋಪ ಮತ್ತು ಪ್ರತ್ಯಾರೋಪಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...