Homeಚಳವಳಿರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ಸರ್ಕಾರದ ಪರವಿರುವವರ ಹಾಗೂ ಕೋಮುವಾದಿಗಳ ಪ್ರತಿಕಾರಕ್ಕೆ ಒಳಗಾಗುತ್ತೇವೆ ಎಂಬ ಭಯಕ್ಕೆ ಸಾರ್ವಜನಿಕ ಜೀವನದಲ್ಲಿರುವ ಜನಪ್ರಿಯ ವ್ಯಕ್ತಿಗಳು ಸರ್ಕಾರದ ಬಗ್ಗೆ ಅಥವಾ ರಾಜಕೀಯದ ಬಗ್ಗೆ ಯಾವುದೇ ನಿಲುವು ವ್ಯಕ್ತಪಡಿಸದೆ ಇರುವ ಪ್ರವೃತ್ತಿಯನ್ನು ಹೆಚ್ಚಿಸಿದ್ದಾರೆ.

- Advertisement -
- Advertisement -

ನಟಿ ಪ್ರಿಯಾಂಕಾ ಚೋಪ್ರಾ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದು, ಟ್ವಿಟ್ಟರ್‌‌ನಲ್ಲಿ ಗಾಯಕ-ನಟ ದಿಲ್‌ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿ, ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವ ವ್ಯಕ್ತಪಡಿಸಿ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಬೇಕೆಂದು ಕರೆ ನೀಡಿದರು.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ದೆಹಲಿ ಚಲೋ ಆಂದೋಲನ ಇಂದಿಗೆ 12 ನೇ ದಿನಕ್ಕೆ ಕಾಲಿಟ್ಟಿದ್ದು ವಿಶ್ವದಾದ್ಯಂತ ಭಾರಿ ಜನಬೆಂಬಲ ವ್ಯಕ್ತವಾಗಿದೆ. ರೈತರೊಂದಿಗೆ ಕೇಂದ್ರ ಸರ್ಕಾರವು ಇದುವರೆಗೂ ಐದು ಸುತ್ತಿನ ಮಾತುಕತೆ ನಡೆಸಿದೆಯಾದರೂ ಎಲ್ಲವು ವಿಫಲವಾಗಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದ ಕೇಂದ್ರದ ವಿರುದ್ದ ರೈತರು ಡಿಸೆಂಬರ್‌ 8 ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ದೇಶದಾದ್ಯಂತ ಭಾರಿ ಜನಬೆಂಬಲ ಪಡೆದಿದೆ.

ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ರೈತ ಹೋರಾಟದ ಹಿನ್ನಲೆಯಲ್ಲಿ ಭಾರಿ ಸುದ್ದಿಯಲ್ಲಿರುವ ಪಂಜಾಬಿ ನಟ-ಗಾಯಕ ದಿಲ್‌ಜಿತ್‌ ದೊಸಾಂಜ್, ರೈತರ ಹೋರಾಟದ ಪರವಾಗಿ ಏಕತೆಯ ಬಗ್ಗೆ ಪಂಜಾಬಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದರು. ಇದನ್ನು ರೀಟ್ವೀಟ್ ಮಾಡಿರುವ ನಟಿ ಪ್ರಿಯಾಂಕ ಚೋಪ್ರಾ, “ನಮ್ಮ ರೈತರು ಭಾರತದ ಆಹಾರ ಸೈನಿಕರು. ಅವರ ಆತಂಕಗಳನ್ನು ನಿವಾರಿಸಬೇಕಾಗಿದೆ. ಅವರ ಆಶಯಗಳನ್ನು ಈಡೇರಿಸಬೇಕಾಗಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವವಾಗಿ, ಈ ಬಿಕ್ಕಟ್ಟುಗಳು ಶೀಘ್ರದಲ್ಲೇ ಬಗೆಹರಿಯುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಬರೆದಿದ್ದಾರೆ.

ಸರ್ಕಾರದ ಪರವಿರುವವರ ಹಾಗೂ ಕೋಮುವಾದಿಗಳ ಪ್ರತಿಕಾರಕ್ಕೆ ಒಳಗಾಗುತ್ತೇವೆ ಎಂಬ ಭಯಕ್ಕೆ ಸಾರ್ವಜನಿಕ ಜೀವನದಲ್ಲಿರುವ ಜನಪ್ರಿಯ ವ್ಯಕ್ತಿಗಳು ಸರ್ಕಾರದ ಬಗ್ಗೆ ಅಥವಾ ರಾಜಕೀಯದ ಬಗ್ಗೆ ಯಾವುದೇ ನಿಲುವು ವ್ಯಕ್ತಪಡಿಸದೆ ಇರುವ ಪ್ರವೃತ್ತಿಯನ್ನು ಹೆಚ್ಚಿಸಿದ್ದಾರೆ.

ಕಳೆದ ವಾರದದಿಂದ ದಿಲ್‌ಜಿಲ್ ದೋಸಾಂಜ್ ಮತ್ತು ನಟಿ ಕಂಗನಾ ರಾಣಾವತ್ ಅವರ ನಡುವೆ ಟ್ವಿಟ್ಟರ್‌ನಲ್ಲಿ ಭಾರಿ ವಾದ ಪ್ರತಿವಾದಗಳು ನಡೆಯುತ್ತಿದೆ. ನಟಿ ಕಂಗನಾ ರಾಣಾವತ್ ಆಡಳಿತಾರೂಡ ಬಿಜೆಪಿಯ ತೀವ್ರ ಬೆಂಬಲಿಗರಾಗಿದ್ದು ರೈತರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ದಿಲ್‌ಜಿತ್ ಪ್ರತ್ಯುತ್ತರ ನೀಡಿ ನೆಟ್ಟಿಗರ ಮನಗೆದ್ದಿದ್ದರು.

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...