HomeUncategorizedರಾಮ ಮಂದಿರ ಟ್ರಸ್ಟ್‌ ಭೂ ದಂಧೆ - ಅಧರ್ಮ, ಪಾಪ ಮತ್ತು ಭಕ್ತರ ನಂಬಿಕೆಗೆ ಅಪಮಾನ...

ರಾಮ ಮಂದಿರ ಟ್ರಸ್ಟ್‌ ಭೂ ದಂಧೆ – ಅಧರ್ಮ, ಪಾಪ ಮತ್ತು ಭಕ್ತರ ನಂಬಿಕೆಗೆ ಅಪಮಾನ ಎಂದ ಪ್ರಿಯಾಂಕ ಗಾಂಧಿ

- Advertisement -
- Advertisement -

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಖರೀದಿಸಿದ ಭೂಮಿಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಭಕ್ತರ ದೇಣಿಗೆ ದುರುಪಯೋಗಪಡಿಸಿಕೊಳ್ಳುವುದು ಅಧರ್ಮ ಮತ್ತು ಪಾಪವಾಗಿದ್ದು, ಇದು ಭಕ್ತರ ನಂಬಿಕೆಗೆ ಮಾಡಿದ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಂಬಿಕೆ ಮತ್ತು ಭಕ್ತಿಯಿಂದ ಕೋಟ್ಯಂತರ ಜನರು ತಮ್ಮ ದೇಣಿಗೆಯನ್ನು ದೇವರಿಗೆ ಅರ್ಪಣೆ ಮಾಡಿದ್ದರು. ಆ ದಾನವನ್ನು ದುರುಪಯೋಗಪಡಿಸಿಕೊಳ್ಳುವುದು ಅಧರ್ಮ, ಪಾಪ, ಅವರ ನಂಬಿಕೆಗೆ ಮಾಡಿದ ಅಪಮಾನವಾಗಿದೆ” ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಪ್ರವೇಶಕ್ಕೆ ಕೊರೋನಾ ಟೆಸ್ಟ್‌ ನೆಗೆಟಿವ್‌ ವರದಿ ಕಡ್ಡಾಯ- ಸಿಎಂ ಬಿ.ಎಸ್‌ ಯಡಿಯೂರಪ್ಪ

ಆಮ್‍ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್‍ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಜನ್ಮಭೂಮಿ ಟ್ರಸ್ಟ್‌ ಭೂ ದಂಧೆ ನಡೆಸುತ್ತಿದೆ ಎಂದು ಆರೋಪ ಮಾಡಿದ್ದರು.

2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ.
ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...