Homeಕರ್ನಾಟಕರಮೇಶ್‌ಕುಮಾರ್‌ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ

ರಮೇಶ್‌ಕುಮಾರ್‌ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ

- Advertisement -
- Advertisement -

ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್‌‌ ಕೆ.ಆರ್.ರಮೇಶ್ ಕುಮಾರ್ ಅವರು “ಅತ್ಯಾಚಾರವನ್ನು ಆನಂದಿಸಿ” ಎಂದು ಹೇಳಿರುವುದನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ.

“ರಮೇಶ್ ಕುಮಾರ್ ಅವರು ನೀಡಿದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅಂತಹ ಮಾತುಗಳನ್ನು ಯಾರಾದರೂ ಹೇಗೆ ಹೇಳಬಹುದು ಎಂಬುದನ್ನು ವಿವರಿಸಲಾಗದು, ಅವು ಅಸಮರ್ಥನೀಯವಾಗಿವೆ. ಅತ್ಯಾಚಾರವು ಘೋರ ಅಪರಾಧ. ಪೂರ್ಣ ವಿರಾಮ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ರಮೇಶ್‌ಕುಮಾರ್‌‌ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, “ನಾಚಿಕೆಗೇಡು” ಎಂದಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಮಹಿಳಾ ಪ್ರಚಾರ ಕಾರ್ಯಕ್ರಮವನ್ನು ಉಲ್ಲೇಖಿಸಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. “ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಮೊದಲು ಮತ್ತು ಉತ್ತರ ಪ್ರದೇಶದಲ್ಲಿ -ಲಡ್ಕಿ ಹೂ, ಲಾಡ್ ಸಕ್ತಿ ಹೂ- ಎಂಬ ಘೋಷಣೆಗಳನ್ನು ಎತ್ತುವ ಮೊದಲು ಕಾಂಗ್ರೆಸ್‌ ತಮ್ಮ ನಾಯಕನನ್ನು ಅಮಾನತುಗೊಳಿಸಬೇಕು” ಎಂದು ಸ್ಮೃತಿ ಇರಾನಿ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿದೆ.

ಇರಾನಿ ಅವರು ಸಂಸತ್ತಿನಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದರು. “ನಿಮಗೆ ಹೆಣ್ಣಿನ ವಿಚಾರದಲ್ಲಿ ನಿಜವಾದ ನಂಬಿಕೆ ಇದ್ದರೆ ರಮೇಶ್‌ ಕುಮಾರ್‌ ಅವರ ಹೇಳಿಕೆಯನ್ನು ಖಂಡಿಸಬೇಕು” ಎಂದಿದ್ದರು.

ಕೆ.ಆರ್.ರಮೇಶ್ ಕುಮಾರ್ ಅವರನ್ನು ಅವರ ಪಕ್ಷದವರು ಸೇರಿದಂತೆ ಹಲವು ನಾಯಕರು ಟೀಕಿಸಿದ್ದಾರೆ. ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ರಮೇಶ್‌ಕುಮಾರ್‌‌ ವಿರುದ್ಧ ಕಾಂಗ್ರೆಸ್ ಪಕ್ಷ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಕರ್ನಾಟಕ ವಿಧಾನಸಭೆ ಸ್ಪೀಕರ್ ಮತ್ತು ಹಿರಿಯ ಕಾಂಗ್ರೆಸ್ ಶಾಸಕರ ನಡುವೆ ಸದನದಲ್ಲಿ ನಡೆದ ಸಂವೇದನಾ ರಹಿತ ಮಾತುಗಳನ್ನು ಕಾಂಗ್ರೆಸ್ ಒಪ್ಪುವುದಿಲ್ಲ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

ವಿಧಾನಸಭೆಯ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌‌ ವಿಧಾನಸಭೆಯಲ್ಲಿ ಮಾತನಾಡುತ್ತಾ, “ಅತ್ಯಾಚಾರ ಅನಿವಾರ್ಯವಾದರೆ ಮಲಗಿ ಆನಂದಿಸಿ” ಎಂಬ ಹೇಳಿಕೆಯನ್ನು ಉಲ್ಲೇಖಿಸಿ ಭಾರಿ ಟೀಕೆಗೆ ಗುರಿಯಾಗಿದ್ದರು. ರಮೇಶ್ ಕುಮಾರ್‌ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಉಂಟಾಗಿತ್ತು.

ಬಳಿಕ ಕ್ಷಮೆಯಾಚಿಸಿದ್ದ ಅವರು, “ಅತ್ಯಾಚಾರದ ಕುರಿತು ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಹೇಳಿಕೆಗಾಗಿ ನಾನು ಎಲ್ಲರಲ್ಲಿಯೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನನ್ನ ಉದ್ದೇಶವು ಒಂದು ಹೇಯ ಅಪರಾಧವನ್ನು ಕ್ಷುಲ್ಲಕಗೊಳಿಸುವುದು ಅಥವಾ ಅಮುಖ್ಯವಾಗಿಸುವುದು ಆಗಿರಲಿಲ್ಲ. ಅದು ಯೋಚಿಸದೇ ಬಂದ ಹೇಳಿಕೆ! ಇನ್ನು ಮುಂದೆ ನನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತೇನೆ” ಎಂದಿದ್ದರು.

ಗುರುವಾರ ಅಧಿವೇಶನದ ಸಮಯದಲ್ಲಿ ರೈತರ ಸಮಸ್ಯೆಗಳ ಮೇಲಿನ ಚರ್ಚೆ ವೇಳೆ ಎಲ್ಲರಿಗೂ ಸಮಯ ನೀಡಿದರೆ ಅಧಿವೇಶನ ನಡೆಸುವುದಾದರೂ ಹೇಗೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನಿಸಿದಾಗ ರಮೇಶ್‌ ಕುಮಾರ್‌ ಈ ಆಕ್ಷೇಪಾರ್ಹ ಹೇಳಿಕೆಯನ್ನು ಉಲ್ಲೇಖಿಸಿದ್ದರು.

“ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ. ನೀವು ಏನು ಡಿಸೈಡ್ ಮಾಡಿಕೊಳ್ಳುತ್ತಿರೋ ಅದಕ್ಕೆ ನಾನು ಎಸ್‌, ಎಸ್‌ ಎನ್ನಬೇಕು ಅಷ್ಟೇ. ರಮೇಶ್ ಕುಮಾರ್ ಅವರೇ ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್​ದ ಸಿಚುಯೇಷನ್ ಅನ್ನೋ ರೀತಿ ಆಗಿದೆ. ಇದನ್ನು ಕಂಟ್ರೋಲ್ ಮಾಡಿ ನಿಯಂತ್ರಣದಲ್ಲಿಟ್ಟು, ಒಂದು ವ್ಯವಸ್ಥಿತವಾಗಿ ತೆಗೆದುಕೊಂಡು ಹೋಗುವ ಪ್ರಯತ್ನ ಬಿಟ್ಟು ಹೀಗೆ ಮಾತಾಡಿ ಎಂದು ಬಿಟ್ಟುಬಿಡುವುದು. ಆ ಸ್ಥಿತಿಗೆ ಬಂದುಬಿಟ್ಟಿದೆ” ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಮೇಶ್​ಕುಮಾರ್, ‘ದೆರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟಬಲ್‌ ಲೆಟ್‌ ಲೇಡೌನ್‌ ಅಂಡ್‌ ಎಂಜಾಯ್‌’ (ಒಂದು ಹೇಳಿಕೆಯಿದೆ. ಅತ್ಯಾಚಾರ ಅನಿವಾರ್ಯವಾದಾಗ, ಮಲಗಿ ಆನಂದಿಸಿ) ಎಂದು ಹೇಳಿದ್ದರು. ಈ ಹೇಳಿಕೆಗೆ ಸ್ಪೀಕರ್ ಕಾಗೇರಿ ಸೇರಿದಂತೆ ಹಲವು ಮಂದಿ ನಕ್ಕು, ತಮಾಷೆಯಾಗಿ ತೆಗೆದುಕೊಂಡಿದ್ದರು. ಸದನವನ್ನು ಗಮನಿಸುತ್ತಿರುವ ರಾಜ್ಯದ ಜನತೆ ಜನಪ್ರತಿನಿಧಿಗಳ ವರ್ತನೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿರಿ: ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...