Homeಮುಖಪುಟಸಾಕ್ಷಿ ಮಲಿಕ್‌ ನಿವಾಸಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ: ಕುಸ್ತಿಪಟುಗಳ ಜೊತೆ ಮಾತುಕತೆ

ಸಾಕ್ಷಿ ಮಲಿಕ್‌ ನಿವಾಸಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ: ಕುಸ್ತಿಪಟುಗಳ ಜೊತೆ ಮಾತುಕತೆ

- Advertisement -
- Advertisement -

ಒಲಿಂಪಿಯನ್ ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವಾಸಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭೇಟಿ ನೀಡಿದ್ದು, ನ್ಯಾಯಕ್ಕಾಗಿ ಅವರ ಹೋರಾಟಕ್ಕೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಸಾಕ್ಷಿ ಮಲಿಕ್ ಅವರ ನಿವಾಸಕ್ಕೆ ಭೇಟಿ ಮಾಡಿ ಸಾಕ್ಷಿ ಮತ್ತು ಇತರ ಕುಸ್ತಿಪಟುಗಳ  ಜೊತೆ ಮಾತುಕತೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಪ್ರಿಯಾಂಕ ಗಾಂಧಿ, ಬಿಜೆಪಿ ಈಗಲೂ ಆರೋಪಿಗಳ ಜೊತೆ ನಿಂತಿದೆ ಮತ್ತು ಅವರಿಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡುತ್ತಿದ್ದಾರೆ. ದೇಶದ ಮಹಿಳೆಯರು ಈ ದೌರ್ಜನ್ಯಗಳನ್ನು ನೋಡುತ್ತಿದ್ದಾರೆ. ದೇಶಕ್ಕೆ ಕೀರ್ತಿ ತಂದ ಮಹಿಳಾ ಆಟಗಾರರು ಬಿಜೆಪಿ ಸಂಸದ ಮತ್ತು ಆಗಿನ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಿಜೆಪಿ ಸರ್ಕಾರವು ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಮತ್ತು ಇದಕ್ಕೆ ವಿರುದ್ಧವಾಗಿ ಸಂತ್ರಸ್ತರಿಗೆ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ನೀಡಲಾಯಿತು ಎಂದು ಹೇಳಿದ್ದಾರೆ.

ಈ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು ಭಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರಂತಹ ಆಟಗಾರರಿಗೆ ಮಾಡಿದ ಮಾತ್ರ ಅವಮಾನವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

ವಿಶ್ವಮಟ್ಟದಲ್ಲಿ ಭಾರತದ ಕೀರ್ತಿಯನ್ನು ಹೆಚ್ಚಿಸಿದ ಆಟಗಾರರು ತಮ್ಮದೇ ಸರ್ಕಾರದ ಮುಂದೆ ಅಸಹಾಯಕರಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಪ್ರಧಾನಿ ಈ ವಿಚಾರದಲ್ಲಿಯಾದರೂ ತಮ್ಮ ಅಹಂ ಬಿಟ್ಟು ದೇಶವೇ ಹೆಮ್ಮೆ ಪಡುವಂತೆ ಮಾಡಿದ ಆಟಗಾರರಿಗೆ ನ್ಯಾಯ ಒದಗಿಸುವ ಭರವಸೆ ನೀಡಬೇಕಿತ್ತು. ಆದರೆ ಪ್ರಧಾನಿ ಮತ್ತು ಬಿಜೆಪಿ ಲೈಂಗಿಕ ಶೋಷಣೆಯ ಆರೋಪಿಗಳ ಜೊತೆಗಿದ್ದಾರೆ, ದೇಶವು ತನ್ನ ಚಾಂಪಿಯನ್‌ಗಳೊಂದಿಗೆ ನಿಂತಿದೆ ಎಂದು ಹೇಳಿದ್ದರು.

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್ಐ‌) ಸಂಸ್ಥೆಗೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾದ ನಂತರ ಕೇಂದ್ರ ಸರ್ಕಾರದ ವಿರುದ್ಧ ದೇಶದ ಅಥ್ಲೀಟ್‌ಗಳ ಅಸಮಾಧಾನ ಹೆಚ್ಚಾಗಿತ್ತು. ಸಾಕ್ಷಿ ಮಲಿಕ್‌ ಅವರು ಈ ಕುರಿತು ಪತ್ರಿಕಾಗೋಷ್ಟಿಯನ್ನು ನಡೆಸಿ  ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ್ದು,  ಪ್ರತ್ರಕರ್ತರ ಮುಂದೆಯೇ ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದರು. ಕಣ್ಣೀರಿಟ್ಟು ಪತ್ರಿಕಾಗೋಷ್ಟಿಯಿಂದ ನಿರ್ಗಮಿಸಿದ್ದರು.

ಇದರ ಬೆನ್ನಲ್ಲೇ  ಪ್ರಧಾನಿ ಮೋದಿ ಅವರಿಗೆ ಒಲಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಪತ್ರ ಬರೆದು,  ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ ಎಂದು ಹೇಳಿದ್ದರು. ಬಳಿಕ ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ನಿವಾಸವಿರುವ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದರು. ನಾನು ಮೊದಲೇ ಹೇಳಿದಂತೆ ನಾವು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗಾಗಿ ಹೋರಾಡುತ್ತಿದ್ದೆವು. ನನ್ನಿಂದ ಅವರಿಗೆ ನ್ಯಾಯ ಸಿಗಲಿಲ್ಲ. ಈ ಕಾರಣದಿಂದಾಗಿ ನಾನು ಈ ಗೌರವಕ್ಕೆ ಅರ್ಹನಲ್ಲ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಆದರೆ ನನಗೆ ಅಪಾಯಿಂಟ್‌ಮೆಂಟ್ ಇಲ್ಲದ ಕಾರಣ ಪ್ರಧಾನಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಹಾಗಾಗಿ ಪ್ರಧಾನಿಗೆ ಬರೆದ ಪತ್ರದೊಂದಿಗೆ ನನ್ನ ಪ್ರಶಸ್ತಿಯನ್ನು ಬಿಟ್ಟು ಹೋಗುತ್ತಿದ್ದೇನೆ. ನಾನು ಈ ಪದಕವನ್ನು ನನ್ನ ಮನೆಗೆ ತೆಗೆದುಕೊಂಡು ಹೋಗುವುದಿಲ್ಲ ಎಂದು ಬಜರಂಗ್ ಪುನಿಯಾ ಹೇಳಿಕೊಂಡಿದ್ದರು.

ಇದನ್ನು ಓದಿ: ‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

0
ಕೋವಿಶೀಲ್ಡ್ ಲಸಿಕೆಯ "ಅಡ್ಡಪರಿಣಾಮಗಳ" ವಿವಾದದ ಮಧ್ಯೆ ಲಸಿಕೆ ತಯಾರಕರಿಂದ "ರಾಜಕೀಯ ದೇಣಿಗೆಗಳನ್ನು" ಪಡೆಯಲು 'ಬಿಜೆಪಿ' ಜನರ ಜೀವನವನ್ನು ಪಣಕ್ಕಿಟ್ಟಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ...