Homeಮುಖಪುಟಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸರ್ಕಾರ ಮಂಜೂರು ಮಾಡಿದ್ದ ಬಂಗಲೆ ಖಾಲಿ ಮಾಡುವಂತೆ ತಿಳಿಸಿದ ನಂತರ, ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದಲ್ಲಿ ಮನೆ ಹುಡುಕುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಇದು ಉತ್ತರಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ.

ಕಳೆದ ಜೂನ್‌ನಲ್ಲಿ ನವದೆಹಲಿಯ ಲೋಧಿ ಎಸ್ಟೇಟ್‌ನಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಸರ್ಕಾರ ಮಂಜೂರು ಮಾಡಿದ ಬಂಗಲೆ ಖಾಲಿ ಮಾಡುವಂತೆ ತಿಳಿಸಿತ್ತು. ಆ ನಂತರ ಪ್ರಿಯಾಂಕಾ ಗಾಂಧಿ ಲಖನೌದಲ್ಲಿ ಮನೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

ದಿವಂಗತ ಕಾಂಗ್ರೆಸ್ ಮುಖಂಡ ಶೀಲಾ ಕೌಲ್‌ಗೆ ಸೇರಿದ ಮನೆಯೊಂದನ್ನು ಪ್ರಿಯಾಂಕಾ ಗಾಂಧಿಗಾಗಿ ನೋಡಲಾಗಿತ್ತು. ಆದರೆ, ಈಗ ಭದ್ರತಾ ಕಾರಣಗಳಿಂದಾಗಿ ಯೋಜನೆಗಳನ್ನು ಬದಲಾಯಿಸಲಾಗಿದೆ. ಅವರಿಗಾಗಿ  ಲಕ್ನೋದಲ್ಲಿ ಒಂದು ಮತ್ತು ಪ್ರಯಾಗರಾಜ್‌ನಲ್ಲಿ ಮತ್ತೊಂದು ಒಟ್ಟು ಎರಡು ಬಾಡಿಗೆ ಮನೆಗಳನ್ನು ಹುಡುಕಲಾಗುತ್ತಿದೆ.

ಇದನ್ನೂ ಓದಿ: ದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

ಪ್ರಿಯಾಂಕಾ ಗಾಂಧಿಯವರ ವೈಯಕ್ತಿಕ ಕಾರ್ಯದರ್ಶಿ ಸಂದೀಪ್ ಸಿಂಗ್ ಅವರು ಎರಡು ಮನೆಗಳ ಹುಡುಕಾಟವನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಸ್ಥಳೀಯ ನಾಯಕರನ್ನು ಭೇಟಿ ಮಾಡಲು ಮತ್ತು ಮನೆಯನ್ನು ನೋಡಲು ಪ್ರಯಾಗರಾಜ್‌ಗೆ ಭೇಟಿ ನೀಡಿದ್ದರು. 2021 ರ ಜನವರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿ ತಿಂಗಳು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಲಖನೌದಲ್ಲಿನ ಕಾಂಗ್ರೆಸ್ ಮುಖಂಡರಿಗೆ ಹೇಳಲಾಗಿತ್ತು. ಆದರೆ, 2019ರ ಡಿಸೆಂಬರ್ ನಿಂದ ಯಾವ ಮುಖಂಡರು ಪಕ್ಷದ ರಾಜ್ಯ ಕೇಂದ್ರ ಕಚೇರಿಗೆ ಭೇಟಿ ನೀಡಿಲ್ಲ.

ಉತ್ತರಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿ ನೆಲೆಗೊಳ್ಳಲು ಕಾಂಗ್ರೆಸ್ ತುಂಬಾ ಹೆಣಗಾಡುತ್ತಿದೆ. ಇತ್ತೀಚಿನ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್, ಒಟ್ಟು ಮತಗಳಲ್ಲಿ ಶೇಕಡಾ 7.53 ರಷ್ಟು ಮಾತ್ರ ಮತ ಪಡೆದಿತ್ತು. ಅದರಲ್ಲೂ, ಕಾಂಗ್ರೆಸ್ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ತಮ್ಮ ಠೇವಣಿ ಕಳೆದುಕೊಂಡಿದ್ದರು.

ಸದ್ಯ ಪ್ರಿಯಾಂಕಾ ಗಾಂಧಿ ಲಖನೌ ಮತ್ತು ಪ್ರಯಾಗರಾಜ್‌ಗಳಲ್ಲಿ ಮನೆ ಹುಡುಕುತ್ತಿರುವುದು ಪಕ್ಷ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ಮತ್ತೆ ಪಕ್ಷ ಸಂಘಟನೆ ನಡೆಸಲು ಸಹಾಯಕವಾಗುತ್ತದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...