Homeಮುಖಪುಟಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

ಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯ ಸದಸ್ಯರಾಗಿ ಇಂದು (ನ.28) ಪ್ರಮಾಣವಚನ ಸ್ವೀಕರಿಸಿದರು.

ಕೈಯಲ್ಲಿ ಭಾರತದ ಸಂವಿಧಾನದ ಪ್ರತಿ ಹಿಡಿದು ಹಿಂದಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ 52 ವರ್ಷದ ಪ್ರಿಯಾಂಕಾ ಗಾಂಧಿ, ಅಧಿಕೃತವಾಗಿ ಲೋಕಸಭೆ ಪ್ರವೇಶಿಸಿದರು. ಪ್ರಿಯಾಂಕಾ ಪ್ರತಿಜ್ಞಾ ವಿಧಿ ಸ್ವೀಕಾರದ ಮೂಲಕ ಗಾಂಧಿ ಕುಟುಂಬದ ಘಟಾನುಘಟಿಗಳಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಳಿಕ ಮೂರನೇ ವ್ಯಕ್ತಿ ಪ್ರಸ್ತುತ ಸಂಸತ್ ಸದಸ್ಯರಾದಂತಾಗಿದೆ.

 

ಪ್ರಿಯಾಂಕಾ ಗಾಂಧಿಯವರು 2019ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು. ನಂತರ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಐದು ವರ್ಷಗಳ ನಂತರ, ಇದೀಗ ಪ್ರಿಯಾಂಕಾ ಗಾಂಧಿ ಚುನಾಯಿತ ಜನಪ್ರತಿನಿಧಿಯಾಗಿ ರಾಜಕೀಯದ ಹೊಟ ಮೆಟ್ಟಿಲೇರಿದ್ದಾರೆ.

ನವೆಂಬರ್ 23ರಂದು ಪ್ರಕಟಗೊಂಡ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದಲ್ಲಿ ಬರೋಬ್ಬರಿ 4.1 ಲಕ್ಷಕ್ಕೂ ಹೆಚ್ಚು ಮತಗಳ ಭಾರೀ ಅಂತರದಿಂದ ಪ್ರಿಯಾಂಕಾ ಗಾಂಧಿ ಗೆಲುವು ದಾಖಲಿಸಿದ್ದರು. ಈ ಮೂಲಕ ಸಹೋದರ ರಾಹುಲ್ ಗಾಂಧಿಯ ದಾಖಲೆಯನ್ನು ಸರಿಗಟ್ಟಿದ್ದರು.

ರಾಹುಲ್ ಗಾಂಧಿ ಪ್ರಸ್ತುತ ಲೋಕಸಭೆಯ ಪ್ರತಿಪಕ್ಷ ನಾಯಕರಾಗಿದ್ದಾರೆ. ಅವರ ಜೊತೆ ಸಹೋದರಿಯೂ ಸಂಸತ್ ಪ್ರವೇಶಿಸುರುವುದು ಕಾಂಗ್ರೆಸ್‌ಗೆ ಅಥವಾ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಬಲ ಬಂದಂತಾಗಿದೆ.

ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಗೆಲುವು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ ರವೀಂದ್ರ ಚವಾಣ್ ಕೂಡ ಇಂದು ಸಂಸತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ತಂದೆ ವಸಂತರಾವ್ ಚವಾಣ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ರವೀಂದ್ರ ಚವಾಣ್ ಸ್ಪರ್ಧಿಸಿ ಗೆದ್ದಿದ್ದಾರೆ.

ಇದನ್ನೂ ಓದಿ : ‘ಮಹಾ’ ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...