ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ಪ್ರಿಯಾಂಕಾ ಗಾಂಧಿ ವಯನಾಡ್ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.
ಪ್ರಿಯಾಂಕಾ ಗಾಂಧಿ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾಗುತ್ತಿದ್ದಂತೆ ವಯನಾಡ್‌ನ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿ ಸ್ವಾಗತಿಸುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಈ ಬಾರಿಯ (2024) ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಅವರು ಭರ್ಜರಿ ಜಯಗಳಿಸಿದ್ದರು. ನಿಯಮದಂತೆ ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಬೇಕಾದ ಕಾರಣ, ಅವರು ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಹುಲ್ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿಯನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಿದೆ.
Congress President Shri @kharge has approved the proposal to nominate the following members as party candidates for the bye-elections to the Lok Sabha and Legislative Assembly from Kerala pic.twitter.com/QBFskzozEB
— Congress (@INCIndia) October 15, 2024
2019ರ ಲೋಕಸಭೆ ಚುನಾವಣೆಯಲ್ಲೂ ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಗೆಲುವು ಸಾಧಿಸಿದ್ದರು. ಐದು ವರ್ಷಗಳ ಕಾಲ ಸಂಸದರಾಗಿದ್ದ ಅವರು, 2024ರಲ್ಲಿ ಎರಡನೇ ಬಾರಿ ಸ್ಪರ್ಧಿಸಿದ್ದರು. ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಅನ್ನಿ ರಾಜಾ ಅವರ ವಿರುದ್ದ 3,64,000 ಮತಗಳ ಭಾರೀ ಅಂತರದಿಂದ ಗೆಲುವು ದಾಖಲಿಸಿದ್ದರು.
The Congress party's official announcement of Smt. @priyankagandhi ji as the candidate for Wayanad is being met with fervent support.
Posters featuring 'Wayanadinte Priyankari' (Wayanad's beloved) are emerging, reflecting widespread enthusiasm.
📍 Wayanad, Kerala pic.twitter.com/8yiadSXLge
— Congress (@INCIndia) October 15, 2024
ಉಪಚುನಾವಣೆಗೆ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಮೈತ್ರಿಕೂಟ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಪ್ರಿಯಾಂಕಾ ಗಾಂಧಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ, ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಮತ್ತು ಬಿಜೆಪಿ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.
ಪಾಲಕ್ಕಾಡ್ ಮತ್ತು ಚೇಲಕ್ಕರ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆ
ಕೇರಳದ ಎರಡು ವಿಧಾನಸಭಾ ಕ್ಷೇತ್ರಗಳಾದ ಪಾಲಕ್ಕಾಡ್ ಮತ್ತು ಚೇಲಕ್ಕರದಲ್ಲಿಯೂ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಶಾಸಕ ಶಾಫಿ ಪರಂಬಿಲ್ ಅವರಿಂದ ತೆರವಾದ ಪಾಲಕ್ಕಾಡ್ ಕ್ಷೇತ್ರ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಶಾಸಕ ರಾಧಾಕೃಷ್ಣನ್ ಅವರಿಂದ ತೆರವಾದ ಚೇಲಕ್ಕರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಶಾಫಿ ಪರಂಬಿಲ್ ಪ್ರಸ್ತುತ ವಡಗರ ಕ್ಷೇತ್ರದ ಸಂಸದರಾಗಿದ್ದಾರೆ. ರಾಧಾಕೃಷ್ಣನ್ ಅಲತ್ತೂರು ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿದ್ದಾರೆ.
ವಿಧಾನಸಭಾ ಉಪಚುನಾವಣೆಗೆ ಪಾಲಕ್ಕಾಡ್ ಕ್ಷೇತ್ರದ ಅಭ್ಯರ್ಥಿಯಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್ಕೂಟತ್ತಿಲ್ ಮತ್ತು ಚೇಲಕ್ಕರ ಕ್ಷೇತ್ರದ ಅಭ್ಯರ್ಥಿಯಾಗಿ ಅಲತ್ತೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ ಹರಿದಾಸ್ ಅವರನ್ನು ಕಾಂಗ್ರೆಸ್ ಘೋಷಣೆ ಮಾಡಿದೆ.
ಇದನ್ನೂ ಓದಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ


