ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಹಿಳೆಯರು ಮಕ್ಕಳ ಮೇಲೆ ಪ್ರತಿನಿತ್ಯ ದೌರ್ಜನ್ಯಗಳು ನಡೆಯುತ್ತಿವೆ. ಮನುಷ್ಯನನ್ನು ಜೀವಂತವಾಗಿ ಸುಡಲಾಗುತ್ತಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಪ್ರಿಯಾಂಕ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ಉತ್ತರ ಪ್ರದೇಶದಲ್ಲಿ ದಲಿತರು, ಮಹಿಳೆಯರ ಮೇಲೆ ನಡೆಯುತ್ತಿರುವುದರ ಕುರಿತು ಹತ್ತಾರು ಪತ್ರಿಕಾ ವರದಿಗಳನ್ನು ಲಗತ್ತಿಸಿದ್ದಾರೆ. ಮಹಿಳೆಯರನ್ನು ಅಪಹರಿವುದು, ಬಡವರು ಮತ್ತು ಮುಗ್ಧರನ್ನು ಬಲಿಪಶುಗಳನ್ನಾಗಿ ಮಾಡುವುದು ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಬರೆದಿದ್ದಾರೆ.

ಇಷ್ಟೆಲ್ಲ ಅವಘಡಗಳು ಪ್ರತಿನಿತ್ಯ ನಡೆಯುತ್ತಿದ್ದರೂ ಆಡಳಿತ ಪಕ್ಷ ಕಣ್ಣು ಮುಚ್ಚಿ ಕುಳಿತಿದೆ. ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸುವ ಜವಾಬ್ದಾರಿಯನ್ನು ಯು.ಪಿ ಸರ್ಕಾರ ಯಾವಾಗ ತೆಗೆದುಕೊಳ್ಳುತ್ತದೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಗು ಮುಂಚೆ ಪ್ರಿಯಾಂಕ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷವು ಕಾರ್ಯದರ್ಶಿಯನ್ನಾಗಿ ನೇಮಿಸಿ ಉತ್ತರ ಪ್ರದೇಶದ ಕೆಲಭಾಗಗಳ ಪ್ರಚಾರದ ಜವಾಬ್ದಾರಿ ವಹಿಸಲಾಗಿತ್ತು. ಆದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

LEAVE A REPLY

Please enter your comment!
Please enter your name here