Homeಕರ್ನಾಟಕಕರ್ನಾಟಕ ಸರಕಾರದ ಅಧಿಕೃತ ವಕ್ತಾರರಾಗಿ ಪ್ರಿಯಾಂಕ ಖರ್ಗೆ ಸೇರಿ ಐವರು ಸಚಿವರು ನೇಮಕ

ಕರ್ನಾಟಕ ಸರಕಾರದ ಅಧಿಕೃತ ವಕ್ತಾರರಾಗಿ ಪ್ರಿಯಾಂಕ ಖರ್ಗೆ ಸೇರಿ ಐವರು ಸಚಿವರು ನೇಮಕ

- Advertisement -
- Advertisement -

ಕರ್ನಾಟಕ ಸರಕಾರದ ಅಧಿಕೃತ ವಕ್ತಾರರಾಗಿ ಸಚಿವ ಪ್ರಿಯಾಂಕ ಖರ್ಗೆ, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ,  ಈಶ್ವರ್‌ ಬಿ.ಖಂಡ್ರೆ, ಸಂತೋಷ್ ಲಾಡ್‌ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪ್ರಕಟಣೆಯನ್ನು ಹೊರಡಿಸಿದ್ದು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್‌ ಬಿ.ಖಂಡ್ರೆ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್‌ ಅವರನ್ನು ಕರ್ನಾಟಕ ಸರಕಾರದ ವಕ್ತಾರರಾಗಿ ನೇಮಕ ಮಾಡಲಾಗಿದೆ. ಈ ಸಚಿವರುಗಳು ಸರಕಾರ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು  ಕಾಲ ಕಾಲಕ್ಕೆ ಒದಗಿಸಲು ಅಗತ್ಯ ಕ್ರಮ ವಹಿಸುವಂತೆ  ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ.

ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಪ್ರಿಯಾಂಕ ಖರ್ಗೆ, ಕರ್ನಾಟಕ ಸರ್ಕಾರದ ಅಧಿಕೃತ ವಕ್ತಾರನನ್ನಾಗಿ ನನ್ನನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು. ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು, ವಿರೋಧ ಪಕ್ಷಗಳ ಟೀಕೆಗಳಿಗೆ ಉತ್ತರವನ್ನು ಹಾಗೂ ಸರ್ಕಾರದ ಪ್ರತಿ ನೂತನ ಕಾರ್ಯಕ್ರಮಗಳ ಮಾಹಿತಿಯನ್ನು ನಾಡಿನ ಪ್ರತಿ ಮನೆ ಮನೆಗೂ ಮುಟ್ಟಿಸಲು ನನ್ನ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

 

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಚಿವರುಗಳಾದ ಸಚಿವ ಪ್ರಿಯಾಂಕ ಖರ್ಗೆ, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ,  ಈಶ್ವರ್‌ ಬಿ.ಖಂಡ್ರೆ, ಸಂತೋಷ್ ಲಾಡ್‌ ಅವರನ್ನು  ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಸರ್ಕಾರದ ವಕ್ತಾರರಾಗಿ ನೇಮಕಗೊಂಡಿರುವ ಈ ಎಲ್ಲಾ ಸಚಿವರು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ರಾಜ್ಯದ ಜನರ ಮುಂದಿಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

 

ಇದನ್ನು ಓದಿ: ಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಡ ಮಹಿಳೆಗೆ ವರ್ಷಕ್ಕೆ 1 ಲಕ್ಷ ನೀಡುವ ‘ಮಹಾಲಕ್ಷ್ಮಿ’ ಯೋಜನೆ ಸೇರಿ ಹಲವು ಗ್ಯಾರೆಂಟಿಗಳ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...