Homeದಲಿತ್ ಫೈಲ್ಸ್ಕೇಂದ್ರಪಾರ ಅಂಗನವಾಡಿ ವಿವಾದ: ದಲಿತ ಮಹಿಳೆ ತಯಾರಿಸಿದ ಆಹಾರ ಸೇವಿಸಿದ ಸಂಸದ ಬೈಜಯಂತ್ ಪಾಂಡಾ

ಕೇಂದ್ರಪಾರ ಅಂಗನವಾಡಿ ವಿವಾದ: ದಲಿತ ಮಹಿಳೆ ತಯಾರಿಸಿದ ಆಹಾರ ಸೇವಿಸಿದ ಸಂಸದ ಬೈಜಯಂತ್ ಪಾಂಡಾ

ಅಧಿಕಾರಿಗಳ ಮಧ್ಯಸ್ಥಿಕೆ ಬಳಿಕ ಮಕ್ಕಳನ್ನು ಕಳುಹಿಸಲು ಒಪ್ಪಿದ ಗ್ರಾಮಸ್ಥರು

- Advertisement -
- Advertisement -

ಒಡಿಶಾದ ಕೇಂದ್ರಪಾರ ಸಂಸದ ಬೈಜಯಂತ್ ಪಾಂಡಾ ಅವರು ಭಾನುವಾರ ರಾಜನಗರ ಬ್ಲಾಕ್‌ನ ನುಗಾಂವ್‌ಗೆ ಭೇಟಿ ನೀಡಿ ಸ್ಥಳೀಯ ಅಂಗನವಾಡಿ ಕೇಂದ್ರದ ದಲಿತ ಮಹಿಳೆ ತಯಾರಿಸಿದ ಊಟವನ್ನು ಸೇವಿಸಿದರು. ಜಾತಿ ಕಾರಣಕ್ಕೆ ಗ್ರಾಮಸ್ಥರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಬಹಿಷ್ಕರಿಸಿದ್ದರು.

ಸರ್ಮಿಸ್ತಾ ಸೇಥಿ (23) ಅವರನ್ನು ಅಡುಗೆ ಮತ್ತು ಅಂಗನವಾಡಿ ಸಹಾಯಕಿಯಾಗಿ ನೇಮಿಸಿದ ನಂತರ ಗ್ರಾಮಸ್ಥರು ನವೆಂಬರ್‌ನಿಂದ ಅಂಗನವಾಡಿ ಕೇಂದ್ರಕ್ಕೆ ತಮ್ಮ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರನ್ನು ಕಳುಹಿಸುವುದನ್ನು ನಿಲ್ಲಿಸಿದ್ದರು.

ಮೂರು ತಿಂಗಳಿಂದ ಗ್ರಾಮಸ್ಥರನ್ನು ಕಾಡುತ್ತಿದ್ದ ಬಿಕ್ಕಟ್ಟು ಪರಿಹರಿಸಿದ್ದಕ್ಕಾಗಿ ಜಿಲ್ಲಾಡಳಿತ ಮತ್ತು ರಾಜ್ಯ ಮಹಿಳಾ ಆಯೋಗದ ಬಗ್ಗೆ ಪಾಂಡಾ ಸಂತೋಷಪಟ್ಟಿದ್ದಾರೆ. ಗ್ರಾಮಸ್ಥರು ಸೋಮವಾರದಿಂದ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಲು ಒಪ್ಪಿಕೊಂಡಿದ್ದಾರೆ. ಶಿಕ್ಷಣ, ಪೋಷಣೆ ಮತ್ತು ಆರೋಗ್ಯ ರಕ್ಷಣೆಯಲ್ಲಿ ಜಾತಿ-ಲಿಂಗ ತಾರತಮ್ಯವು ದಲಿತ ಮಹಿಳೆಯರು ಮತ್ತು ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಒಡಿಶಾ ರಾಜ್ಯ ಮಹಿಳಾ ಆಯೋಗದ ಸದಸ್ಯೆ ಕಲ್ಪನಾ ಮಲ್ಲಿಕ್ ಗಮನಿಸಿದರು.

ಸಾಂವಿಧಾನಿಕ ನಿಬಂಧನೆಗಳು ಕಾನೂನಿನ ಮುಂದೆ ಸಮಾನತೆಯನ್ನು ಖಾತರಿಪಡಿಸುತ್ತವೆ. ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸುತ್ತವೆ. ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುತ್ತವೆ ಎಂದು ಅವರು ಹೇಳಿದರು. ಕಳೆದ ವರ್ಷ ನವೆಂಬರ್ 24 ರಂದು ಅಂಗನವಾಡಿ ಕೇಂದ್ರದಲ್ಲಿ ಅಡುಗೆಯವರಾಗಿ ಸೇಥಿ ನೇಮಕಗೊಂಡಿದ್ದರು.

“ಗ್ರಾಮಸ್ಥರು ಸಹಕಾರ ನೀಡುವ ಜೊತೆಗೆ ಅಂಗನವಾಡಿ ಕೇಂದ್ರ ಸುಗಮವಾಗಿ ನಡೆಯಲು ಸಹಾಯ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ನನಗೆ ಈಗ ಸಂತೋಷವಾಗಿದೆ” ಎಂದು ಹೇಳಿದರು. ಕೇಂದ್ರಪಾರ ಉಪ-ಸಂಗ್ರಾಹಕ ಅರುಣ್ ಕುಮಾರ್ ನಾಯಕ್, ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಸೋಮವಾರದಿಂದ ಎಲ್ಲಾ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವುದನ್ನು ಪುನರಾರಂಭಿಸುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...