Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...