Homeಮುಖಪುಟಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

ಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯದಲ್ಲಿ ಗುಜರಾತ್ ಗೈಂಟ್ಸ್ ವಿರುದ್ಧ ಭರ್ಜರಿ ಜಯಗಳಿಸಿದ ಬೆಂಗಳೂರು ಬುಲ್ಸ್ ಇಂದು ರಾತ್ರಿ 8.30 ಕ್ಕೆ ನಡೆಯುವ ಎರಡನೇ ಸೆಮಿಫೈನಲ್ ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಣಕ್ಕಿಳಿಯಲಿದೆ. ಕೊನೆಯ ಎರಡು ಪಂದ್ಯಗಳಲ್ಲಿ ಅದ್ವಿತಿಯ ಪ್ರದರ್ಶನ ನೀಡಿರುವ ಬೆಂಗಳೂರು ಇಂದು ಗೆದ್ದಲ್ಲಿ ಫೈನಲ್‌ಗೆ ಪ್ರವೇಶ ಪಡೆಯಲಿದೆ.

ಇಂದು ರಾತ್ರಿ 7.30ಕ್ಕೆ ಆರಂಭವಾಗುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಯು.ಪಿ ಯೋಧ ತಂಡವು ಪಟ್ನಾ ಪೈರೇಟ್ಸ್ ವಿರುದ್ದ ಸೆಣಸಲಿದೆ. ಇಲ್ಲಿ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ.

ಲೀಗ್ ಹಂತದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರಿಂದ ಪಟ್ನಾ ಪೈರೇಟ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸಿವೆ.

ಬೆಂಗಳೂರು ಬುಲ್ಸ್ ತಂಡ ಇದುವರೆಗಿನ ಎಂಟು ಆವೃತ್ತಿಗಳಲ್ಲಿ ಐದು ಬಾರಿ ಸೆಮಿಫೈನಲ್ ಪ್ರವೇಶಿಸಿ. ಆರನೇ ಆವೃತ್ತಿಯಲ್ಲಿ ಮಾತ್ರ ಫೈನಲ್ ಪ್ರವೇಶಿಸಿ ಗೆದ್ದು ಚಾಂಪಿಯನ್ ಆಗಿತ್ತು. ಕಳೆದ 7 ನೇ ಆವೃತ್ತಿಯಲ್ಲಿಯೂ ಸಹ ಬೆಂಗಳುರು ಬುಲ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮಣಿಸಿ ಸೆಮಿಫೈನಲ್ ತಲುಪಿತ್ತು.ಆದರೆ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಸೋಲನೊಪ್ಪಿತ್ತು. ಈ ಬಾರಿ ಸೇಡು ತೀರಿಸಿಕೊಳ್ಳಲು ಬೆಂಗಳೂರಿಗೆ ಉತ್ತಮ ಅವಕಾಶವಿದೆ.

ಬೆಂಗಳೂರು ಬುಲ್ಸ್ ತಂಡ ಪವನ್ ಕುಮಾರ್ ಶೆಹ್ರಾವತ್ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಪವನ್ 286 ರೈಡಿಂಗ್ ಅಂಕಗಳೊಂದಿಗೆ ಒಟ್ಟು 302 ಅಂಕ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಅವರಿಗೆ ಭರತ್ ಮತ್ತು ಚಂದ್ರನ್ ರಂಜಿತ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಇನ್ನು ಡೆಫೆಂಡಿಂಗ್ ವಿಭಾಗದಲ್ಲಿಯೂ ಅಮನ್, ಸೌರಭ್ ನಂದಲ್ ಮತ್ತು ಮಹೀಂದ್ರ ಕುಮಾರ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ದೆಹಲಿ ತಂಡದ ಪ್ರಮುಖ ರೈಡರ್ ನವೀನ್ ಕುಮಾರ್ ಗಾಯದಿಂದ ಬಳಲುತ್ತಿರುವುದು ಆ ತಂಡಕ್ಕೆ ತಲೆನೋವಾಗಿದೆ. ಅಲ್ಲದೆ ಲೀಗ್ ಹಂತದಲ್ಲಿ ಬೆಂಗಳೂರು-ಡೆಲ್ಲಿ ಮುಖಾಮುಖಿಯಲ್ಲಿ ಬೆಂಗಳೂರು ಮೊದಲ ಪಂದ್ಯವನ್ನು 39 ಪಾಯಿಂಟ್‌ಗಳ ಬೃಹತ್ ಅಂತರದಲ್ಲಿ ಗೆದ್ದಿತ್ತು. ಎರಡನೇ ಪಂದ್ಯವನ್ನು ಟೈ ಮಾಡಿಕೊಂಡಿತ್ತು. ಹಾಗಾಗಿ ಇಂದು ಬೆಂಗಳೂರು ಬುಲ್ಸ್ ಗೆಲ್ಲುವ ನೆಚ್ಚಿನ ತಂಡವಾಗಿದೆ.

ಈ ಆವೃತ್ತಿಯ 23 ಪಂದ್ಯಗಳಲ್ಲಿ ಪವನ್ 17 ಬಾರಿ 10ಕ್ಕಿಂತ ಹೆಚ್ಚು ರೈಡಿಂಗ್ ಅಂಕಗಳಿಸಿ ಮಿಂಚಿದ್ದಾರೆ. ಅವರಿಂದ ಮತ್ತೊಂದು ಸೂಪರ್ ಟೆನ್ ಬರಲಿದೆಯೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಇಂದು ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಪ್ರೊ ಕಬಡ್ಡಿ: ಗುಜರಾತ್ ಗೈಂಟ್ಸ್ ಮಣಿಸಿ ಸೆಮಿಫೈನಲ್ ತಲುಪಿದ ಬೆಂಗಳೂರು ಬುಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...