Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಕೊನೆಯ ಮೂರು ಪಂದ್ಯಗಳು ಇಂದು ನಡೆಯಲಿವೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ ಬೆಂಗಳೂರು ಬುಲ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ಸೇರಿ ಐದು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ ತಲುಪಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ 22 ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಇಂದು ಮೂರು ಪಂದ್ಯ ನಡೆಯಲಿವೆ. ಅದರಲ್ಲಿ ಮೊದಲ ಪಂದ್ಯದ ಫಲಿತಾಂಶದಲ್ಲಿಯೂ ಬೆಂಗಳೂರು ಭವಿಷ್ಯ ನಿಂತಿರುತ್ತದೆ.

ಮೊದಲ ಪಂದ್ಯ: ಜೈಪುರ್ ಪಿಂಕ್ ಪ್ಯಾಂಥರ್ಸ್ v/s ಪುಣೇರಿ ಪಲ್ಟನ್

ಈ ಪಂದ್ಯದಲ್ಲಿ ಈಗಾಗಲೇ 62 ಅಂಕ ಪಡೆದಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಗೆದ್ದರೆ ಅದು 67 ಅಂಕಗಳೊಂದಿಗೆ ಪ್ಲೆ ಆಫ್ ಪ್ರವೇಶಿಸುತ್ತದೆ. ಆಗ ರೇಸ್‌ನಿಂದ 61 ಅಂಕ ಪಡೆದಿರುವ ಪುಣೇರಿ ಪಲ್ಟನ್ ಹೊರಗುಳಿಯುತ್ತದೆ. ಒಂದು ವೇಳೆ ಪುಣೇರಿ ಪಲ್ಟಾನ್ ಗೆದ್ದರೆ ಜೈಪುರ್ ಹೊರಗುಳಿಯುತ್ತದೆ. ಆಗ ಬೆಂಗಳೂರು ತಂಡ 66 ಅಂಕ ಮತ್ತು ಪುಣೇರಿ ಪಲ್ಟಾನ್ 66 ಅಂಕ ಗಳಿಸಿ ಸಮಬಲ ಸಾಧಿಸುತ್ತವೆ. ಆದರೆ ಸ್ಕೋರ್ ಡಿಫರೆನ್ಸ್‌ನಲ್ಲಿ ಬೆಂಗಳೂರು 59 ಹೆಚ್ಚಿನ ಸ್ಕೋರ್ ಇದ್ದರೆ ಪುಣೇರಿ 26 ಮಾತ್ರ ಇದೆ. ಹಾಗಾಗಿ ಪುಣೇರಿ ಪಲ್ಟಾನ್ ಈ ಪಂದ್ಯವನ್ನು 28 ಸ್ಕೋರ್ ಅಂತರದಿಂದ ಗೆದ್ದರೆ ಮಾತ್ರ ಬೆಂಗಳೂರು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಸಾಧ್ಯ. 27 ಅಂಕಕ್ಕಿಂತ ಕಡಿಮೆ ಅಂತರದಲ್ಲಿ ಪುಣೇರಿ ಗೆದ್ದರೂ ಬೆಂಗಳೂರೂ ಪ್ಲೇಆಫ್ ಪ್ರವೇಶಿಸುತ್ತದೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ. ಬೆಂಗಳೂರು ಬುಲ್ಸ್ ಪ್ಲೆ ಆಫ್‌ಗೆ ಪ್ರವೇಶ ಪಡೆಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣವನ್ನು ಹಿಂದಿಕ್ಕಿ ಬೆಂಗಳೂರು ಬುಲ್ಸ್ ಪ್ಲೇ ಆಫ್‌ ಕಡೆಗೆ ನಡೆಯುತ್ತದೆ.

ಆದರೆ ಮೊದಲ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮೂರನೇ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ಗೆದ್ದರೆ ಆ ಮೂರು ತಂಡಗಳು ಪ್ಲೆ ಆಫ್ ಪ್ರವೇಶಿಸಲಿವೆ. ಬೆಂಗಳೂರು ಮತ್ತು ಪುಣೇರಿ ತಂಡಗಳು ಹೊರಬೀಳಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಬಹುಜನ ಭಾರತ; ಬಿಜೆಪಿಗೆ ಉಳಿಗಾಲವಿಲ್ಲವೇ ಯುಪಿಯಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...