Homeಕರ್ನಾಟಕರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಪಠ್ಯಪುಸ್ತಕ ಮರು ಪರಿಶೀಲನ ಸಮಿತಿ ಕಾರ್ಯ ಮುಗಿದಿದ್ದು ಅದನ್ನು ವಿಸರ್ಜನೆ ಮಾಡಲಾಗಿದೆ ಎಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ” ಎಂದು ತಿಳಿಸಿದ್ದಾರೆ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದು ಅವರು ಶನಿವಾರ ಪ್ರಶ್ನಿಸಿದ್ದಾರೆ.

“ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಗಳ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋದಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ?” ಎಂದು ಅವರು ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಕಾಂಗ್ರೆಸ್ ಬಿಡುವುದಿಲ್ಲ: ರಾಹುಲ್ ಗಾಂಧಿ

“ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ?” ಎಂದು ಅವರು ಕೇಳಿದ್ದಾರೆ.

“ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ?” ಎಂದು ಸ್ಪಷ್ಟಪಡಿಸುವಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಕೇಳಿದ್ದಾರೆ.

“ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ. ನೂತನ ಪರಿಷ್ಕೃತ ಪಠ್ಯ ರಚನೆಯಾಗುವವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಮುಖ್ಯಮಂತ್ರಿಗಳು ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

“ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವೋಟಿನ ಆಸೆಗಾಗಿ ಅಧಿಕಾರದ ಲಾಲಸೆಗಾಗಿ ಮತಾಂಧರನ್ನು ಮತೀಯರನ್ನು ಬೆಂಬಲಿಸುವವರು ಕಿಡಿಗೇಡಿಗಳು ಭಾರತೀಯತೆಯನ್ನು ಬೆಂಬಲಿಸುವವರು ಕಿಡಿಗೇಡಿಗಳ ಅಲ್ಲ ವಂದನೆಗಳು

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...