Homeಮುಖಪುಟ'ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ': ಹೇಮಂತ್‌ ಸೊರೆನ್‌ ಭಾವುಕ

‘ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ’: ಹೇಮಂತ್‌ ಸೊರೆನ್‌ ಭಾವುಕ

- Advertisement -
- Advertisement -

ಜಾರ್ಖಂಡ್‌ನ ನೂತನ ಸಿಎಂ ಚಂಪೈ ಸೊರೇನ್ ಸರ್ಕಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು  ಸಾಬೀತುಪಡಿಸಿದೆ. ಈ ವೇಳೆ ಸದನಕ್ಕೆ ಮಾಜಿ ಸಿಎಂ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಹೇಮಂತ್‌ ಸೊರೆನ್ ಭಾಗವಹಿಸಿದ್ದರು. ವಿಶ್ವಾಸ ಮತಯಾಚನೆ ವೇಳೆ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್, ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಜನರ ಕಣ್ಣೀರಿಗೆ ಬೆಲೆಯಿಲ್ಲ ಎಂದು ಭಾವುಕವಾಗಿ ಹೇಳಿದ್ದಾರೆ.

ಹೇಮಂತ್ ಸೊರೇನ್ ಅವರು ನ್ಯಾಯಾಲಯದ ಅನುಮತಿಯೊಂದಿಗೆ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಹಾಜರಾಗಿದ್ದರು. ವಿಶ್ವಾಸಮತ ಯಾಚನೆಗೂ ಮುನ್ನ ಚಂಪೈ ಸೊರೇನ್, ತಮ್ಮ ಸರ್ಕಾರವನ್ನು “ಹೇಮಂತ್ ಸೊರೇನ್ ಭಾಗ – 2” ಎಂದು ಹೇಳಲು ಇಷ್ಟಪಡುವುದಾಗಿ ಹೇಳಿದ್ದರು.

ಅಕ್ರಮ ಹಣ ವರ್ಗಾವಣೆ ಆರೋಪದ ನಡುವೆ ಜನವರಿ 31ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ  ಸೊರೆನ್‌ ರಾಜೀನಾಮೆ ನೀಡಿದ್ದರು, ನಾನು ಪಿತೂರಿ ನಡೆಸಿದ ಶಕ್ತಿಗಳಿಗೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರವನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ರಾಜ್ಯಪಾಲರ ಕಚೇರಿ ವಿರುದ್ಧ ಗಂಭೀರ ಆರೋಪ ಮಾಡಿದ ಅವರು, ತಮ್ಮ ಬಂಧನದಲ್ಲಿ ರಾಜಭವನವೂ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ.

ನನ್ನನ್ನು ಬಂಧಿಸಲು ದೀರ್ಘಕಾಲದವರೆಗೆ ಪಿತೂರಿ ನಡೆಸಲಾಗಿದೆ. ಇದು ಕಡಿಮೆ ಉರಿಯಲ್ಲಿ ಬೇಯುತ್ತಿತ್ತು. ಬಳಿಕ ಉತ್ತಮ ರೀತಿಯಲ್ಲಿ ಕಾರ್ಯಗತಗೊಳಿಸಲಾಗಿದೆ. ಆದಿವಾಸಿಗಳು ಕಾಡಿನಲ್ಲೇ ವಾಸಿಸುವುದನ್ನು ಮುಂದುವರಿಸಬೇಕೆಂದು ಹೇಳಲು ಕೆಲವರು ಹಿಂಜರಿಯುವುದಿಲ್ಲ. ನಾವು ಕಾಡು ತೊರೆದು ಬಂದು ಅವರ ಪಕ್ಕದಲ್ಲಿ ಕುಳಿತೆವು. ಇದರಿಂದ ಅವರ ಬಟ್ಟೆಗಳು ಕೊಳೆಯಾದವು. ಅವರು ನಮ್ಮನ್ನು ಅಸ್ಪೃಶ್ಯರಂತೆ ನೋಡುತ್ತಾರೆ. ನಾನು ವಿಮಾನದಲ್ಲಿ ಪ್ರಯಾಣಿಸುವುದನ್ನು, ಪಂಚತಾರಾ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುವುದು ಹಾಗೂ ಬಿಎಂಡಬ್ಲ್ಯು ಕಾರಿನಲ್ಲಿ ತೆರಳುವುದು ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಜೆಎಂಎಂ, ಕಾಂಗ್ರೆಸ್ ಮತ್ತು ಇತರ ಮಿತ್ರಪಕ್ಷಗಳ ಶಾಸಕರ ಬೆಂಬಲದೊಂದಿಗೆ, ಸೊರೆನ್ ಅವರ ಆಪ್ತ ಸಹಾಯಕ ಚಂಪೈ ಸೊರೆನ್ ಫೆಬ್ರವರಿ 2ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಿದ್ದಾರೆ.

ಜನವರಿ 31 ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ. ರಾಜಭವನದ ಆದೇಶದ ಮೇರೆಗೆ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಲಾಗಿದೆ. ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯದ ಸಿಎಂ 5 ವರ್ಷಗಳನ್ನು ಪೂರ್ಣಗೊಳಿಸಲು ಬಿಜೆಪಿ ಬಯಸುವುದಿಲ್ಲ, ಅವರು ತಮ್ಮ ಆಡಳಿತದಲ್ಲಿಯೂ ಇದನ್ನು ಅನುಮತಿಸಿರಲಿಲ್ಲ ಎಂದು  ಹೇಮಂತ್ ಸೊರೆನ್ ಹೇಳಿದ್ದಾರೆ.

ಬಿಜೆಪಿ ಆದಿವಾಸಿಗಳನ್ನು “ಅಸ್ಪೃಶ್ಯರು” ಎಂದು ಪರಿಗಣಿಸುತ್ತದೆ, ದೇಶದಲ್ಲಿ ಈಗಿನ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರು ಸುರಕ್ಷಿತವಾಗಿಲ್ಲ. ನಾನು ಇನ್ನಷ್ಟು ಬಲದೊಂದಿಗೆ ಮರಳಿ ಬರುತ್ತೇನೆ. ಪ್ರತಿಪಕ್ಷಗಳ ಷಡ್ಯಂತ್ರವನ್ನು ವಿಫಲಗೊಳಿಸುತ್ತೇನೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭ ನಡೆದಾಗ ಬಿಜೆಪಿಯು ರಾಮರಾಜ್ಯವನ್ನು ತರುವುದಾಗಿ ಹೇಳಿತ್ತು, ಈಗ ಅವರು ಬಿಹಾರದಲ್ಲಿ ಮತ್ತು ನಂತರ ಜಾರ್ಖಂಡ್‌ನಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಿದ್ದಾರೆ ಎಂದು ಹೇಮಂತ್ ಸೊರೆನ್ ಹೇಳಿದ್ದಾರೆ.

ನಾನು ಸೋಲನ್ನು ಒಪ್ಪಿಕೊಂಡಿಲ್ಲ, ತಮ್ಮ ಕುತಂತ್ರಗಳಲ್ಲಿ ಅವರು ಯಶಸ್ವಿಯಾಗುತ್ತಾರೆ ಎಂದು ಅವರು ಭಾವಿಸುತ್ತಾರೆ. ಆದರೆ ಇದು ಜಾರ್ಖಂಡ್, ಆದಿವಾಸಿಗಳು ಮತ್ತು ದಲಿತರು ತ್ಯಾಗ ಮಾಡಿದ ರಾಜ್ಯ, ಕೋಟಿಗಟ್ಟಲೆ ಲೂಟಿ ಮಾಡಿ ವಿದೇಶಕ್ಕೆ ಪಲಾಯನ ಮಾಡಿದವರನ್ನು ಕೇಂದ್ರೀಯ ಸಂಸ್ಥೆಗಳಿಗೆ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಅವರು ಏನು ಮಾಡುತ್ತಾರೆಂದು ಆದಿವಾಸಿಗಳು ಮತ್ತು ಅಮಾಯಕರನ್ನು ಗುರಿಯಾಗಿಸುತ್ತಿದ್ದಾರೆ? ಆದಿವಾಸಿಗಳ ಕಣ್ಣೀರು ನಿಮಗೆ ಲೆಕ್ಕಕ್ಕಿಲ್ಲ ಎಂಬ ಕಾರಣಕ್ಕೆ ನಾನು ಅಳುವುದಿಲ್ಲ, ಸೂಕ್ತ ಸಮಯದಲ್ಲಿ ಪ್ರತಿಯೊಂದು ಷಡ್ಯಂತ್ರಕ್ಕೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಜೈಲಿನಿಂದ ವಿಧಾನಸಭೆಗೆ ಹೇಮಂತ್ ಸೊರೆನ್‌ ಆಗಮಿಸಿದಾಗ ಆಡಳಿತರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟದ ಶಾಸಕರು ಹೇಮಂತ್ ಸೊರೇನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನು ಓದಿ: ಸಾವಿತ್ರಿಬಾಯಿ ಫುಲೆ ವಿವಿಯಲ್ಲಿ ABVP ಕಾರ್ಯಕರ್ತರಿಂದ ದಾಂಧಲೆ: ಕ್ರಮ ಕೈಗೊಳ್ಳದ ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...