Homeಕರ್ನಾಟಕಪ್ರೊ.ಗಣೇಶ ದೇವಿಯವರ 'ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ' ಪುಸ್ತಕ ಬಿಡುಗಡೆ

ಪ್ರೊ.ಗಣೇಶ ದೇವಿಯವರ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕ ಬಿಡುಗಡೆ

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ.

- Advertisement -
- Advertisement -

ಖ್ಯಾತ ಚಿಂತಕ ಮತ್ತು ಭಾಷಾ ಶಾಸ್ತ್ರಜ್ಞ ಪ್ರೊ.ಗಣೇಶ ದೇವಿಯವರು ಬರೆದ ಮಹಾಭಾರತ – ದಿ ಎಪಿಕ್ ಎಂಡ್ ನೇಶನ್’ ಪುಸ್ತಕದ ಕನ್ನಡ ಅನುವಾದವಾದ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕವು ಮಾರ್ಚ್ 19ರ ಇದೇ ಶನಿವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ.

ಸಮಗ್ರ ಮಹಾಭಾರತವನ್ನು ಅಖಂಡವಾಗಿ ಗ್ರಹಿಸಿದ ರಾಜಶೇಖರ, ಅಭಿನವಗುಪ್ತ, ಅರವಿಂದರು ಮೊದಲಾದವರಿರುವ ಪೌರ್ವಾತ್ಯ ಮಹಾಭಾರತ ವ್ಯಾಖ್ಯಾನ ಪರಂಪರೆಯನ್ನು ಗಣೇಶ ದೇವಿಯವರು ಮುಂದುವರೆಸಿದ್ದಾರೆ. ಆ ಮೂಲಕ ಸಮಕಾಲೀನ ಭಾರತಕ್ಕೆ ಪ್ರಸ್ತುತವಾದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳವ ಪ್ರಯತ್ನ ಪುಸ್ತಕದಲ್ಲಿದೆ. ಸದ್ಯ ಮುನ್ನೆಲೆಗೆ ಬರಲು ಹಪಹಪಿಸುತ್ತಿರುವ ಮತ್ತು ಅಧಿಕೃತಗೊಳ್ಳಲು ಎಲ್ಲಾ ಉಪಕರಣಗಳನ್ನೂ ಬಳಸುತ್ತಿರುವ ರಾಷ್ಟ್ರ, ಚರಿತ್ರೆ ಮತ್ತು ಸಮಾಜದ ಕಲ್ಪನೆಗಳನ್ನು ರಾಷ್ಟ್ರೀಯ ಕಾವ್ಯವೆಂದು ಮನ್ನಣೆ ಪಡೆದಿರುವ ಮಹಾಭಾರತಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎನ್ನುವುದು ದೇವಿಯವರ ಮಹಾಭಾರತ ವ್ಯಾಖಾನದ ಕೇಂದ್ರ ಗ್ರಹೀತಗಳಲ್ಲೊಂದು. ಅಂದರೆ ವಸಾಹತುಶಾಹಿ ವಿಕಲ್ಪಗಳಿಗೆ ನೇತುಬಿದ್ದಿರುವ ವರ್ತಮಾನದ ರಾಜಕೀಯಕ್ಕೆ ಪರಂಪರೆಯ ವಿವೇಕವನ್ನು ನೆನಪಿಸುವ ಉದ್ದೇಶದ ಕೃತಿಯಿದು. ಈ ಮಹತ್ವದ ಕೃತಿಯನ್ನು ಡಾ.ಎಂ.ಜಿ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದು, ಕ್ರಿಯಾ ಮಾಧ್ಯಮ ಪ್ರಕಟಿಸಿದೆ.

ಮಾರ್ಚ್ 19ರ ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಎನ್.ಆರ್.ಕಾಲೊನಿಯ 3ನೆಯ ಮುಖ್ಯ ರಸ್ತೆಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ವಿಮರ್ಶಕ. ಚಿಂತಕ ಪ್ರೊ.ಸಿ.ಎನ್.ರಾಮಚಂದ್ರನ್ ಪುಸ್ತಕ ಬಿಡುಗಡೆಗೊಳಿಸಿ ವಿಮರ್ಶಾತ್ಮಕ ಪರಿಚಯ ಮಾಡಿಕೊಡಲಿದ್ದಾರೆ. ಕರ್ತೃ ಪ್ರೊ. ಗಣೇಶ ದೇವಿ ಮತ್ತು ಕನ್ನಡಕ್ಕೆ ಅನುವಾದಿಸಿರುವ ಡಾ.ಎಂ.ಜಿ ಹೆಗಡೆ ಯವರ ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸುತ್ತಾರೆ.

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ. ಎರಡು ಕಡೆ ಈ ಪುಸ್ತಕ ವಿಶೇಷ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಅಪ್ಪು ನುಡಿನಮನ; ಮಿಂಚಿ ಮರೆಯಾದ ಜನಮನದ ಹುಡುಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...