Homeಮುಖಪುಟ'ನಿತ್ಯೋತ್ಸವ ಕವಿ' ಪ್ರೊ. ಕೆ. ಎಸ್. ನಿಸಾರ್ ಅಹ್ಮದ್ ನಿಧನ

‘ನಿತ್ಯೋತ್ಸವ ಕವಿ’ ಪ್ರೊ. ಕೆ. ಎಸ್. ನಿಸಾರ್ ಅಹ್ಮದ್ ನಿಧನ

- Advertisement -
- Advertisement -

ಕನ್ನಡದ ನಿತ್ಯೋತ್ಸವ ಕವಿ ಎಂದೇ ಪ್ರಸಿದ್ದರಾಗಿದ್ದ ಪ್ರೊ. ಕೆ.ಎಸ್. ನಿಸಾರ್ ಅಹಮ್ಮದ್ ನಿಧನರಾಗಿದ್ದಾರೆ, ಅವರಿಗೆ 84 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅನಾರೋಗ್ಯ ನಿಮಿತ್ತ ಬೆಂಗಳೂರಿನ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿತ್ತು. ಇವರು ಇಂದು ಪಧ್ಮನಾಭ ನಗರದ ತಮ್ಮ ನಿವಾಸಲ್ಲಿ ಕೊನೆಯುಸಿರೆಳೆದಿದ್ದಾರೆ.

ಕನ್ನಡದ ನಿತ್ಯೋತ್ಸವ ಕವಿಯೆಂದೆ ಪರಿಚಿತರಾಗಿದ್ದ ನಿಸಾರ್ ಅಹ್ಮದ್ 1936 ರಲ್ಲಿ ಜನಿಸಿದ್ದರು. 1959 ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು, 1994ರ ವರೆಗೆ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು.

ನಿತ್ಯೋತ್ಸವ ಅವರ ಪ್ರಸಿದ್ದ ಕವನ ಸಂಕಲನವಾಗಿದ್ದು ಇದು ಕನ್ನಡದ ಮೊದಲ ಭಾವಗೀತೆಗಳ ಧ್ವನಿಸುರುಳಿಯಾಗಿ ಕೂಡಾ ಪ್ರಸಿದ್ದಿ ಹೊಂದಿತ್ತು. ಮನಸು ಗಾಂಧಿ ಬಜಾರು, ನೆನೆದವರ ಮನದಲ್ಲಿ, ಸುಮಹೂರ್ತ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ಆಯ್ದ ಕವಿತೆಗಳು, ನಿತ್ಯೋತ್ಸವ, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ನಿತ್ಯೋತ್ಸವ ಕವಿತೆ ಕವನ ಸಂಕನಗಳು ಸೇರಿದಂತೆ, ಅಚ್ಚುಮೆಚ್ಚ, ಇದು ಬರಿ ಬೆಡಗಲ್ಲೊ ಅಣ್ಣ, ಷೇಕ್ಸ್ ಪಿಯರ್‍ನ ಒಥೆಲ್ಲೊದ ಕನ್ನಡಾನುವಾದ, ‘ಎ ಮಿಡ್ ಸಮ್ಮರ್ ನೈಟ್ಸ್ ಡ್ರೀಮ್’ ಕೃತಿಯ ಕನ್ನಡಾನುವಾದವನ್ನು ಕೂಡಾ ಇವರು ಮಾಡಿದ್ದರು.

ಇವರಿಗೆ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ, 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಗೊರೂರು ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಹೆಜ್ಚೆಗುರುತು ಕೃತಿಗೆ ಸೋವಿಯಟ್ ಲ್ಯಾಂಡ್ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭ್ಯವಾಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...