Homeಕರ್ನಾಟಕಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

ಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

- Advertisement -
- Advertisement -

“ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ” ಎಂದು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರನ್ನು ಕಡೆಗಣಿಸಿರುವ ಕುರಿತು ಪ್ರಜ್ಞಾವಂತ ಸಾಹಿತ್ಯ ವಲಯ ಬೇಸರ ವ್ಯಕ್ತಪಡಿಸಿದೆ. ಜೊತೆಗೆ ಪ್ರತಿರೋಧಾತ್ಮಕವಾಗಿ ‘ಜನ ಸಾಹಿತ್ಯ ಸಮ್ಮೇಳನ’ ನಡೆಸಲು ನಿರ್ಧರಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಸಾಪ ಅಧ್ಯಕ್ಷರು ಆರೋಪಗಳನ್ನು ಮಾಡಿದ್ದಾರೆ.

ಮುಸ್ಲಿಂ ಬರಹಗಾರರನ್ನು ಹೊರಗಿಟ್ಟಿರುವ ಕುರಿತು ಪ್ರಶ್ನಿಸಿದವರಲ್ಲಿ ಮುಂಚೂಣಿಯಲ್ಲಿರುವ ಪುರುಷೋತ್ತಮ ಬಿಳಿಮಲೆಯವರ ಕುರಿತು ಆರೋಪಗಳನ್ನು ಹೊರಿಸಿರುವ ಮಹೇಶ ಜೋಶಿ, “ಲೇಖಕ ಪುರುಷೋತ್ತಮ ಬಿಳಿಮಲೆ ಅವರು ದೂರವಾಣಿ ಕರೆ ಮಾಡಿ, ‘ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪೆಂಡಾಲ್‌ (ಪೆಂಡಾಲ್‌) ಹಾಕಲು ಪರಿಚಿತರಾದ ಮುಸ್ಲಿಂ ವ್ಯಾಪಾರಿಯೊಬ್ಬರಿಗೆ ಕೊಡಿಸಿ’ ಎಂದು ಕೇಳಿದ್ದರು. ಅದಕ್ಕೆ ನಾನು ‘ಅದು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ. ಅದು ನನ್ನ ಕ್ಷೇತ್ರವಲ್ಲ’ ಎಂದು ಹೇಳಿದ್ದೆ. ಇದನ್ನೇ ನೆಪವಾಗಿಟ್ಟುಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ” ಎಂದಿದ್ದರು.

ಇದಕ್ಕೆ ಬಿಳಿಮಲೆಯವರು ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದು, “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ದನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು, ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ. ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂಥವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ಅವರು ಪೆಂಡಾಲ್‌ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು, ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್‌ ಜೋಷಿಯವರ ಮಾತುಗಳೇ ಸಾಕ್ಷಿ” ಎಂದು ಹೇಳಿದ್ದಾರೆ.

“ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Sri Purushotham Bilimalai is not an ordinary man like Joshi who came from the background of rss that everyone knows it , while defaming others ,Joshi must keep up gentleman’s decency (unlike politicians)

  2. ಕನ್ನಡ ಸಾಹಿತ್ಯ ಪರಿಷತ್ತು ಮನುವಾದಿಗಳ ಬಾಲಬಡುಕರ ಕೈಸೇರಿರುವುದು, ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...