Homeಕರ್ನಾಟಕವಿಜಯಪುರ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಧ್ಯಾಪಕ ಅಮಾನತು

ವಿಜಯಪುರ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಧ್ಯಾಪಕ ಅಮಾನತು

- Advertisement -
- Advertisement -

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ(ಆರ್‌ಸಿಯುಬಿ) ವಿಜಯಪುರ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಎಲ್.ಎನ್ ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು deccanherald.com ವರದಿ ಮಾಡಿದೆ.

ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಪ್ರೊ. ಮೂರ್ತಿ ವಿರುದ್ದ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಆರೋಪ ಮಾಡಿದ್ದರು. ಪ್ರಾಥಮಿಕ ಸಾಕ್ಷ್ಯಾಧಾರಗಳಿಂದ ಅದು ನಿಜವೆಂದು ಕಂಡುಬಂದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ಪ್ರೊ. ಮೂರ್ತಿ ತನಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಶೋಧನಾ ವಿದ್ಯಾರ್ಥಿನಿ 2024ರ ನವೆಂಬರ್ 4 ರಂದು ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಮುಂದೆ ಮೌಖಿಕ ದೂರು ನೀಡಿದ್ದರು. ನಂತರ, ಸಾಕ್ಷ್ಯಾಧಾರಗಳೊಂದಿಗೆ ಲಿಖಿತ ದೂರು ಸಲ್ಲಿಸಿದ್ದರು.

ವಿಶ್ವವಿದ್ಯಾಲಯದ ಆಂತರಿಕ ಕುಂದುಕೊರತೆ ನಿವಾರಣಾ ಸಮಿತಿಯು ದೂರಿನ ಕುರಿತು ವಿಚಾರಣೆ ನಡೆಸಿ ಜುಲೈ 14 ರಂದು ತನ್ನ ವರದಿಯನ್ನು ರಿಜಿಸ್ಟ್ರಾರ್‌ಗೆ ಸಲ್ಲಿಸಿತ್ತು. ವರದಿಯಲ್ಲಿ, ಪ್ರೊ. ಮೂರ್ತಿ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಅವರ ಕೃತ್ಯಗಳು ಪಾಶ್ ಕಾಯ್ದೆಯ ನಿಬಂಧನೆಗಳ ಪ್ರಕಾರ ಲೈಂಗಿಕ ಕಿರುಕುಳಕ್ಕೆ ಕಾರಣವಾಗಿವೆ. ಅಂತಹ ಕೃತ್ಯಗಳು ಪುನರಾವರ್ತನೆಯಾಗದಂತೆ ತಡೆಯಲು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸೂಚಿಸಿತ್ತು ಎಂದು ವರದಿ ವಿವರಿಸಿದೆ.

ಕರ್ನಾಟಕ ನಾಗರಿಕ ಸೇವೆಗಳ ಮಾರ್ಗಸೂಚಿಗಳು ಮತ್ತು ಸಮಿತಿಯ ವರದಿಯ ಆಧಾರದ ಮೇಲೆ, ಸಂಶೋಧನಾ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಆರೋಪಗಳು ಮೇಲ್ನೋಟಕ್ಕೆ ನಿಜವೆಂದು ಕಂಡುಬಂದ ಕಾರಣ, ರಿಜಿಸ್ಟ್ರಾರ್ ಸಂತೋಷ್ ಕಾಮಗೌಡ ಅವರು ಪ್ರೊ. ಮೂರ್ತಿ ಅವರನ್ನು ಅಮಾನತುಗೊಳಿಸಿದ್ದಾರೆ.

ಸಕ್ಷಮ ಪ್ರಾಧಿಕಾರದ ಅನುಮತಿಯೊಂದಿಗೆ ಅಮಾನತು ಅವಧಿಯಲ್ಲಿ ಪ್ರೊ. ಮೂರ್ತಿ ಅವರು ಪ್ರಧಾನ ಕಚೇರಿಯಿಂದ ಹೊರಹೋಗದಂತೆ ಸೂಚಿಸಲಾಗಿದೆ ಎಂದು ವರದಿ ಹೇಳಿದೆ.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...