ವಿಜಯಪುರ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಧ್ಯಾಪಕ ಅಮಾನತು

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ(ಆರ್‌ಸಿಯುಬಿ) ವಿಜಯಪುರ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಎಲ್.ಎನ್ ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು deccanherald.com ವರದಿ ಮಾಡಿದೆ. ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಪ್ರೊ. ಮೂರ್ತಿ ವಿರುದ್ದ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಆರೋಪ ಮಾಡಿದ್ದರು. ಪ್ರಾಥಮಿಕ ಸಾಕ್ಷ್ಯಾಧಾರಗಳಿಂದ ಅದು ನಿಜವೆಂದು ಕಂಡುಬಂದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ಪ್ರೊ. ಮೂರ್ತಿ ತನಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಶೋಧನಾ ವಿದ್ಯಾರ್ಥಿನಿ 2024ರ ನವೆಂಬರ್ 4 ರಂದು ಉಪಕುಲಪತಿ … Continue reading ವಿಜಯಪುರ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಧ್ಯಾಪಕ ಅಮಾನತು